ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಪಂಚ ಗ್ಯಾರಂಟಿ’ ಯೋಜನೆಗಳ ಕುರಿತು ಮಾತನಾಡಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ತಾವು ಕೆಪಿಸಿಸಿ ಅಧ್ಯಕ್ಷರಾಗಿದ್ದ ಸಂದರ್ಭದಲ್ಲೇ ಈ ಯೋಜನೆಗಳು ರೂಪುಗೊಂಡವು ಎಂದು ಸ್ಪಷ್ಟಪಡಿಸಿದ್ದಾರೆ.
ಪತ್ರಿಕಾ ಸಂಪಾದಕರೊಂದಿಗೆ ನಡೆದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ‘ಅನ್ನಭಾಗ್ಯ’ (10 ಕೆ.ಜಿ. ಅಕ್ಕಿ ನೀಡುವ ಯೋಜನೆ) ಒಂದನ್ನು ಹೊರತುಪಡಿಸಿ, ಉಳಿದ ಎಲ್ಲಾ ನಾಲ್ಕು ಯೋಜನೆಗಳು ತಮ್ಮದೇ ಕಲ್ಪನೆಯಲ್ಲಿ ಮೂಡಿಬಂದವು ಎಂದು ತಿಳಿಸಿದರು.
“ನಾನು ಕೆಪಿಸಿಸಿ ಅಧ್ಯಕ್ಷನಾಗಿದ್ದ ಅವಧಿಯಲ್ಲೇ ಈ ಪಂಚ ಗ್ಯಾರಂಟಿ ಯೋಜನೆಗಳ ನೀಲನಕ್ಷೆ ಸಿದ್ಧವಾಗಿತ್ತು. ಇದರಲ್ಲಿ 10 ಕೆ.ಜಿ. ಅಕ್ಕಿ ಕೊಡುವ ಅನ್ನಭಾಗ್ಯ ಯೋಜನೆ ಸಿದ್ದರಾಮಯ್ಯ ಅವರ ಆಲೋಚನೆಯಾಗಿದ್ದರೆ, ಉಳಿದ ಗ್ಯಾರಂಟಿಗಳನ್ನು ನಾನೇ ಸಿದ್ಧಪಡಿಸಿದ್ದು, ಅವುಗಳ ಕಲ್ಪನೆಯೂ ನನ್ನದೇ ಆಗಿತ್ತು” ಎಂದು ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದರು.
ಇದೇ ವೇಳೆ, ಪಕ್ಷದ ಸಂಘಟನೆ, ಭಾರತ್ ಜೋಡೋ ಯಾತ್ರೆಯ ಯಶಸ್ವಿ ಸಂಘಟನೆ ಹಾಗೂ ರಾಜ್ಯದ ನೀರಾವರಿ ಯೋಜನೆಗಳಿಗೆ ಒತ್ತು ನೀಡಿರುವ ಕುರಿತು ಕೂಡ ಅವರು ಮಾತನಾಡಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
