ಶಿವಮೊಗ್ಗ: ಶಿವಮೊಗ್ಗದಲ್ಲಿ ಗಣೇಶ ಹಬ್ಬದ ಸಂಭ್ರಮಾಚರಣೆ ಅಥವಾ ಮೆರವಣಿಗೆಯ ಸಂದರ್ಭದಲ್ಲಿ ಬಿಜೆಪಿ ಶಾಸಕ ಎಸ್.ಎನ್. ಚೆನ್ನಬಸಪ್ಪ ಅವರನ್ನು ತಮ್ಮ ಹೆಗಲ ಮೇಲೆ ಹೊತ್ತುಕೊಂಡು ನೃತ್ಯ ಮಾಡಿದ್ದ ಇಬ್ಬರು ಪೊಲೀಸ್ ಸಿಬ್ಬಂದಿಯ ವಿರುದ್ಧ ಮೇಲಾಧಿಕಾರಿಗಳು ಕಠಿಣ ಕ್ರಮ ಕೈಗೊಂಡಿದ್ದಾರೆ.
ಶಾಸಕರೊಂದಿಗೆ ಪೊಲೀಸರು ಈ ರೀತಿ ಅತಿರೇಕದ ವರ್ತನೆ ತೋರಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿತ್ತು. ಸಾರ್ವಜನಿಕ ವಲಯದಲ್ಲಿ ಮತ್ತು ಪೊಲೀಸ್ ಇಲಾಖೆಯಲ್ಲಿ ಈ ವಿಡಿಯೋ ವ್ಯಾಪಕ ಚರ್ಚೆಗೆ ಹಾಗೂ ಟೀಕೆಗೆ ಗ್ರಾಸವಾಗಿತ್ತು.
ಕರ್ತವ್ಯದಲ್ಲಿದ್ದ ಪೊಲೀಸರು ಈ ರೀತಿಯ ರಾಜಕಾರಣಿಗಳೊಂದಿಗೆ ಮೈಮರೆತು ಕುಣಿದಿರುವುದು ಇಲಾಖೆಯ ನಿಯಮಗಳ ಉಲ್ಲಂಘನೆ ಎಂದು ಪರಿಗಣಿಸಲಾಗಿದ್ದು, ವಿಡಿಯೋ ವೈರಲ್ ಬೆನ್ನಲ್ಲೇ ಎಚ್ಚೆತ್ತ ಇಲಾಖೆಯ ಹಿರಿಯ ಅಧಿಕಾರಿಗಳು ಸಂಬಂಧಪಟ್ಟ ಇಬ್ಬರೂ ಪೊಲೀಸ್ ಸಿಬ್ಬಂದಿಯನ್ನು ತಕ್ಷಣವೇ ಬೇರೆಡೆಗೆ ವರ್ಗಾವಣೆ (ಎತ್ತಂಗಡಿ) ಮಾಡಿ ಆದೇಶ ಹೊರಡಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
