ತುಮಕೂರು: ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮವು ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ನೀಡಲು ಬೆಸ್ತ ಜನಾಂಗದವರಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಫಲಾಪೇಕ್ಷಿಗಳು ಸಾಲ ಸೌಲಭ್ಯಕ್ಕಾಗಿ ಅರಿವು-ಶೈಕ್ಷಣಿಕ ಹಾಗೂ ಅರಿವು-ಶೈಕ್ಷಣಿಕ/ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ಶಿಕ್ಷಣ ವ್ಯಾಸಂಗ ಯೋಜನೆ(ನವೀಕರಣ) ಯೋಜನೆಗಳಡಿ ಅರ್ಜಿ ಸಲ್ಲಿಸಬಹುದಾಗಿದೆ.
ಆಸಕ್ತರು https://sevasindhu.karnataka.gov.in ಪೋರ್ಟಲ್ ಮೂಲಕ ಗ್ರಾಮ ಒನ್ / ಕರ್ನಾಟಕ ಒನ್ / ತುಮಕೂರು ಒನ್ / ಬೆಂಗಳೂರು ಒನ್ ಸೇವಾ ಕೇಂದ್ರದಲ್ಲಿ ಸೆಪ್ಟೆಂಬರ್ 30ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ನಿಗಮದ ಜಾಲತಾಣ https://ambigaradevelopment.karnataka.gov.in ಅಥವಾ ದೂ.ಸಂ: 080-22864099 ಅಥವಾ ಜಿಲ್ಲಾ ಕಚೇರಿ ದೂರವಾಣಿ ಸಂಖ್ಯೆ 0816–2005008ನ್ನು ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
