ಕೊರಟಗೆರೆ: ಇಂದು ಕೊರಟಗೆರೆ ತಾಲೂಕು ಪಂಚಾಯಿತಿಯ ನೂತನ ಕಟ್ಟಡ ನಿರ್ಮಾಣ ಕಾಮಗಾರಿಯನ್ನು ಉಪಮುಖ್ಯಮಂತ್ರಿ ಹಾಗೂ ಕೊರಟಗೆರೆ ಕ್ಷೇತ್ರದ ಶಾಸಕರಾದ ಡಾ.ಜಿ.ಪರಮೇಶ್ವರ್ ಅವರು ನೇರವಾಗಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಕಟ್ಟಡ ಕಾಮಗಾರಿಯ ಪ್ರಗತಿ ಮತ್ತು ನಿರ್ಮಾಣದಲ್ಲಿ ಅನುಸರಿಸುತ್ತಿರುವ ಗುಣಮಟ್ಟದ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಂದ ಸಮಗ್ರ ಮಾಹಿತಿ ಪಡೆದುಕೊಂಡರು.
ಅಲ್ಲದೆ, ಕಾಮಗಾರಿಯನ್ನು ಯಾವುದೇ ವಿಳಂಬವಿಲ್ಲದೆ ನಿಗದಿತ ಅವಧಿಯೊಳಗೆ ಗುಣಮಟ್ಟದೊಂದಿಗೆ ಸಂಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
