ಬೀದರ್: ಔರಾದ್ ಹಾಗೂ ಕಮಲನಗರ ತಾಲೂಕಿನ ನೂತನ ಕಾರ್ಮಿಕ ನಿರೀಕ್ಷಕರಾಗಿ ಅಧಿಕಾರ ಸ್ವೀಕರಿಸಿ ಕರ್ತವ್ಯಕ್ಕೆ ಹಾಜರಾದ ಕೆ. ಸುವರ್ಣ ಅವರನ್ನು ಔರಾದ್ (ಬಿ) ಕಾರ್ಮಿಕ ನಿರೀಕ್ಷಕರ ಕಚೇರಿಯಲ್ಲಿ ಕಲ್ಯಾಣ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಹಾ ಸಂಘ (ರಿ) ಬೀದರ್ ವತಿಯಿಂದ ಗುರುವಾರ ಸನ್ಮಾನಿಸಿ ಗೌರವಿಸಲಾಯಿತು.
ಈ ವೇಳೆ ಕಲ್ಯಾಣ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಹಾ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂತೋಷ. ಕೆ. ಶಿಂದೆ, ಡಾಟಾ ಎಂಟ್ರಿ ಆಪರೇಟರ್ ಶಿವಕುಮಾರ್, ರಘುನಾಥ, ನೀಲೇಶ್ ಬಾದಲಗಾಂವ, ಸರ್ಜರಾವ ಮೋರೆ, ಯಶವಂತ್ ಕಾಂಬಳೆ, ಚಂದ್ರಕಾಂತ ಕಾಂಬಳೆ, ಬಸವರಾಜ ಕೊಂಡೆ ಸೇರಿದಂತೆ ಸಂಘದ ಪ್ರಮುಖ ಪದಾಧಿಕಾರಿಗಳು ಹಾಗೂ ಕಾರ್ಮಿಕ ಬಂಧುಗಳು ಉಪಸ್ಥಿತರಿದ್ದರು.
ನೂತನವಾಗಿ ಅಧಿಕಾರಕ್ಕೆ ಬಂದ ಕಾರ್ಮಿಕ ನಿರೀಕ್ಷಕರಿಗೆ ಹೂಗುಚ್ಛ ನೀಡಿ ಅಭಿನಂದಿಸಿದ ಸಂಘದ ಪದಾಧಿಕಾರಿಗಳು, ಕಾರ್ಮಿಕ ವರ್ಗದ ಕಷ್ಟ–ನಷ್ಟಗಳಿಗೆ ಸ್ಪಂದಿಸಿ, ಅವರ ಕಲ್ಯಾಣಕ್ಕಾಗಿ ಪ್ರಾಮಾಣಿಕವಾಗಿ ಶ್ರಮಿಸುವಂತೆ ಈ ಸಂದರ್ಭದಲ್ಲಿ ಮನವಿ ಮಾಡಿಕೊಂಡರು.
ವರದಿ: ಅರವಿಂದ ಮಲ್ಲೀಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
