ಬೆಂಗಳೂರು: ರಾಜ್ಯದಲ್ಲಿ ತಲೆದೋರಿರುವ ಬರ ಪರಿಸ್ಥಿತಿಯನ್ನು ವೈಜ್ಞಾನಿಕವಾಗಿ ನಿರಂತರವಾಗಿ ಮೌಲ್ಯಮಾಪನ ಮಾಡಲಾಗುತ್ತಿದ್ದು, ಎರಡನೇ ಹಂತದ ಗ್ರೌಂಡ್ ಟ್ರೂಥಿಂಗ್ ವರದಿ ಆಧರಿಸಿ ಹೆಚ್ಚುವರಿ 23 ತಾಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸಲಾಗಿದೆ. ಇದರೊಂದಿಗೆ ರಾಜ್ಯದಲ್ಲಿ ಒಟ್ಟು ಬರಪೀಡಿತ ತಾಲೂಕುಗಳ ಸಂಖ್ಯೆ 124ಕ್ಕೆ ಏರಿಕೆಯಾಗಿದೆ ಎಂದು ಡಿಸಿಎಂ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.
ಬೆಳೆ ಹಾನಿಯ ನೈಜ ಸ್ಥಿತಿಯನ್ನು ನಿಖರವಾಗಿ ಮತ್ತು ಪಾರದರ್ಶಕವಾಗಿ ದಾಖಲಿಸಲು ‘Crop Loss GT’ ಮೊಬೈಲ್ ಆ್ಯಪ್ ಅನ್ನು ಬಳಸಲಾಗುತ್ತಿದೆ. ಇದರ ಮೂಲಕ ಜಿಯೋ-ಟ್ಯಾಗ್ ಮಾಡಲಾದ ಛಾಯಾಚಿತ್ರಗಳು, ಜಿಪಿಎಸ್ ಮಾಹಿತಿ, ಜಮೀನಿನ ವಿವರ ಹಾಗೂ ಬೆಳೆ ಹಾನಿಯ ಪ್ರಮಾಣವನ್ನು ಸ್ಥಳದಲ್ಲಿಯೇ ದಾಖಲಿಸಲಾಗುತ್ತಿದೆ. ಅಲ್ಲದೆ, 3ನೇ ಹಂತದ ಗ್ರೌಂಡ್ ಟ್ರೂಥಿಂಗ್ಗಾಗಿ 17 ಜಿಲ್ಲೆಗಳ 53 ತಾಲೂಕುಗಳನ್ನು ಆಯ್ಕೆ ಮಾಡಲಾಗಿದೆ.
ರೈತರ ಹಿತ ಕಾಪಾಡುವುದು ಮತ್ತು ಸಂಕಷ್ಟದ ಸಮಯದಲ್ಲಿ ಅವರಿಗೆ ಬೆಂಬಲವಾಗಿ ನಿಲ್ಲುವುದು ಸರ್ಕಾರದ ಜವಾಬ್ದಾರಿಯಾಗಿದ್ದು, ರೈತರ ನೈಜ ಬೆಳೆ ಹಾನಿಯನ್ನು ಸಮರ್ಪಕವಾಗಿ ದಾಖಲಿಸಿ ಅರ್ಹ ರೈತರಿಗೆ ನಿಯಮಾನುಸಾರ ಪರಿಹಾರ ತಲುಪಿಸಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
