ಬೆಂಗಳೂರು: ಮಹಾರಾಷ್ಟ್ರದ ನಾಗಪುರದಲ್ಲಿರುವ ಐತಿಹಾಸಿಕ ದೀಕ್ಷಾಭೂಮಿಗೆ ಭೇಟಿ ನೀಡಲು ಇಚ್ಛಿಸುವ ಡಾ. ಬಿ.ಆರ್. ಅಂಬೇಡ್ಕರ್ ಅವರ ಅನುಯಾಯಿಗಳು ಹಾಗೂ ಅರ್ಹ ಯಾತ್ರಾರ್ಥಿಗಳಿಂದ ಸಮಾಜ ಕಲ್ಯಾಣ ಇಲಾಖೆಯು ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. 2026–27ನೇ ಸಾಲಿನ ವಿಜಯದಶಮಿಯಂದು, ಅಂದರೆ ದಿನಾಂಕ 21 ಅಕ್ಟೋಬರ್ 2026 ರಂದು ನಾಗಪುರದ ದೀಕ್ಷಾಭೂಮಿಯಲ್ಲಿ ನಡೆಯಲಿರುವ ಧಮ್ಮಚಕ್ರ ಪ್ರವರ್ತನ ದಿನದ ವಿಶೇಷ ಕಾರ್ಯಕ್ರಮದಲ್ಲಿ ಭಾಗವಹಿಸಲು ಅರ್ಹ ಯಾತ್ರಾರ್ಥಿಗಳಿಗೆ ಈ ಅವಕಾಶ ಕಲ್ಪಿಸಲಾಗಿದೆ.
ರಾಜ್ಯದ ವಿವಿಧ ಜಿಲ್ಲೆಗಳಿಂದ ಆಯ್ಕೆಯಾಗುವ ಅರ್ಹ ಯಾತ್ರಾರ್ಥಿಗಳಿಗೆ ದಿನಾಂಕ 19—10–2026 ರಿಂದ 22—10–2026 ರವರೆಗೆ ಪ್ರಯಾಣಿಸಲು ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಕೆ.ಎಸ್.ಆರ್.ಟಿ.ಸಿ, ಇತರೆ ಸಾರಿಗೆ ಬಸ್ಸುಗಳು ಹಾಗೂ ರೈಲಿನ ಮೂಲಕ ಉಚಿತ ಸಾರಿಗೆ ವ್ಯವಸ್ಥೆಯನ್ನು ಮಾಡಲಾಗಿದೆ. ಈ ಯಾತ್ರೆಯಲ್ಲಿ ಭಾಗವಹಿಸಲು ಆಸಕ್ತಿ ಹೊಂದಿರುವ ಅರ್ಹ ಅಭ್ಯರ್ಥಿಗಳು ಸಮಾಜ ಕಲ್ಯಾಣ ಇಲಾಖೆಯ ಅಧಿಕೃತ ಜಾಲತಾಣವಾದ swd.karnataka.gov.in ಗೆ ಭೇಟಿ ನೀಡಿ ದಿನಾಂಕ 19—09–2026 ರಿಂದ 09–10–2026 ರವರೆಗೆ ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಆನ್ ಲೈನ್ ನಲ್ಲಿ ಸ್ವೀಕೃತಗೊಳ್ಳುವ ಅರ್ಜಿಗಳನ್ನು ಆಯಾ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆಯ ಜಂಟಿ ಅಥವಾ ಉಪ ನಿರ್ದೇಶಕರು ನಿಯಮಾನುಸಾರ ಪರಿಶೀಲಿಸಿ ಅನುಮೋದನೆ ನೀಡಲಿದ್ದಾರೆ ಎಂದು ಸಮಾಜ ಕಲ್ಯಾಣ ಇಲಾಖೆಯ ಆಯುಕ್ತರಾದ ರಾಕೇಶ್ ಕುಮಾರ್ ಕೆ. ತಿಳಿಸಿದ್ದಾರೆ.
ಇದನ್ನೂ ಓದಿ: ತುಮಕೂರು: ಗೊಲನ ಎಂಟರ್ ಪ್ರೈಸಸ್ ನಲ್ಲಿ ಉದ್ಯೋಗಾವಕಾಶ: ನೇರ ಸಂದರ್ಶನ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
