ತುಮಕೂರು: ರಾಜ್ಯ ಮಟ್ಟದಲ್ಲಿ ಆಚರಿಸಲಾಗುವ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಅಂಗವಾಗಿ ಪರಿಶಿಷ್ಟ ಪಂಗಡದ (ST) ಸಮುದಾಯದ ಏಳಿಗೆಗಾಗಿ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಸಾಧಕರಿಗೆ ನೀಡಲಾಗುವ ‘ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ’ಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಶೈಕ್ಷಣಿಕ, ಸಾಮಾಜಿಕ, ಸಾಹಿತ್ಯ ಹಾಗೂ ಇನ್ನಿತರ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿರುವ ಪರಿಶಿಷ್ಟ ಪಂಗಡಕ್ಕೆ ಸೇರಿದ ಸಾಧಕರು ಈ ಪ್ರಶಸ್ತಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ.
ಅರ್ಜಿ ದೊರೆಯುವ ಸ್ಥಳ: ಸಹಾಯಕ ನಿರ್ದೇಶಕರು (ಗ್ರೇಡ್-1) ಅವರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಜಿಲ್ಲಾ ಪಂಚಾಯತ್ ಪಕ್ಕ, ಬಿ.ಎಚ್. ರಸ್ತೆ, ತುಮಕೂರು ತಾಲ್ಲೂಕು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಅಕ್ಟೋಬರ್ 3
ಅರ್ಜಿ ಸಲ್ಲಿಸಬೇಕಾದ ವಿಳಾಸ: ಸಹಾಯಕ ನಿರ್ದೇಶಕರು (ಗ್ರೇಡ್-1), ಸಮಾಜ ಕಲ್ಯಾಣ ಇಲಾಖೆ, ತುಮಕೂರು ತಾಲ್ಲೂಕು.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕ ಸಂಖ್ಯೆ: 0816-2006305
ಆಸಕ್ತ ಹಾಗೂ ಅರ್ಹ ಸಾಧಕರು ನಿಗದಿತ ಕೊನೆಯ ದಿನಾಂಕದೊಳಗಾಗಿ ಸಂಪೂರ್ಣ ಮಾಹಿತಿಯೊಂದಿಗೆ ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸುವಂತೆ ಇಲಾಖೆ ಕೋರಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
