ಬೀದರ್: ಜಿಲ್ಲೆಯ ಔರಾದ ತಾಲೂಕಿನ ಲಾಧಾ ಗ್ರಾಮದ ಹೊಲವೊಂದರಲ್ಲಿ ಅಕ್ರಮವಾಗಿ ಗಾಂಜಾ ಬೆಳೆಸಿದ್ದ ಸುಮಾರು 1.5 ಲಕ್ಷ ರೂಪಾಯಿ ಮೌಲ್ಯದ ಹಸಿ ಗಾಂಜಾ ಗಿಡಗಳನ್ನು ಪೊಲೀಸರು ವಶಪಡಿಸಿಕೊಂಡು, ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಗೋವಿಂದ್ ಕಿವಡೆ ಎಂದು ಗುರುತಿಸಲಾಗಿದೆ.
ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಭಾಲ್ಕಿ ವಿಭಾಗದ ಡಿವೈಎಸ್ಪಿ ಬಲ್ಲಪ್ಪ ನಂದಗಾವೆ ಅವರ ಮಾರ್ಗದರ್ಶನ ಹಾಗೂ ಔರಾದ್ ಸಿಪಿಐ ರಘವೀರಸಿಂಗ್ ಠಾಕೂರ್ ನೇತೃತ್ವದಲ್ಲಿ, ಸಂತಪೂರ್ ಪೊಲೀಸ್ ಠಾಣೆಯ ಪಿಎಸ್ ಐ ದಿನೇಶ್ ಎಂ.ಟಿ. ಹಾಗೂ ಸಿಬ್ಬಂದಿ ತಂಡವು ಈ ದಾಳಿಯನ್ನು ಯಶಸ್ವಿಯಾಗಿ ನಡೆಸಿದೆ. ದಾಳಿಯ ವೇಳೆ ಹೊಲದಲ್ಲಿ ಅಕ್ರಮವಾಗಿ ಬೆಳೆಸಲಾಗಿದ್ದ ಒಟ್ಟು 2 ಕೆಜಿ 650 ಗ್ರಾಂ ತೂಕದ ಹಸಿ ಗಾಂಜಾ ಗಿಡಗಳನ್ನು ವಶಪಡಿಸಿಕೊಳ್ಳಲಾಗಿದೆ.
ಈ ಸಂಬಂಧ ಸಂತಪೂರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆಯನ್ನು ಮುಂದುವರೆಸಿದ್ದಾರೆ.
ವರದಿ: ಅರವಿಂದ ಮಲ್ಲೀಗೆ, ಬೀದರ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
