nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಂವಿಧಾನ ಸಮರ್ಪಣಾ ದಿನ: ಸಂವಿಧಾನ ಕೇವಲ ಆಡಳಿತ ಗ್ರಂಥವಲ್ಲ, ಪ್ರತಿಯೊಬ್ಬ ಭಾರತೀಯನ ಸ್ವಾಭಿಮಾನದ ಉಸಿರು

    November 26, 2026

    ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ವೈದ್ಯರಿಂದ ವೈಭವದ ಕನ್ನಡ ರಾಜ್ಯೋತ್ಸವ ಆಚರಣೆ

    November 25, 2026

    ಡಾ. ವೀರೇಂದ್ರ ಹೆಗ್ಗಡೆಯವರ ಜನ್ಮದಿನದ ಅಂಗವಾಗಿ ವೃದ್ಧಾಶ್ರಮಗಳಿಗೆ ದಿನಸಿ, ಹಣ್ಣು ವಿತರಣೆ

    November 25, 2026
    Facebook Twitter Instagram
    ಟ್ರೆಂಡಿಂಗ್
    • ಸಂವಿಧಾನ ಸಮರ್ಪಣಾ ದಿನ: ಸಂವಿಧಾನ ಕೇವಲ ಆಡಳಿತ ಗ್ರಂಥವಲ್ಲ, ಪ್ರತಿಯೊಬ್ಬ ಭಾರತೀಯನ ಸ್ವಾಭಿಮಾನದ ಉಸಿರು
    • ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ವೈದ್ಯರಿಂದ ವೈಭವದ ಕನ್ನಡ ರಾಜ್ಯೋತ್ಸವ ಆಚರಣೆ
    • ಡಾ. ವೀರೇಂದ್ರ ಹೆಗ್ಗಡೆಯವರ ಜನ್ಮದಿನದ ಅಂಗವಾಗಿ ವೃದ್ಧಾಶ್ರಮಗಳಿಗೆ ದಿನಸಿ, ಹಣ್ಣು ವಿತರಣೆ
    • ಕೈದಾಳದ ಶ್ರೀ ಚೆನ್ನಕೇಶವ ಸ್ವಾಮಿ ದೇವಸ್ಥಾನಕ್ಕೆ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಭೇಟಿ | ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಗಣ್ಯರು
    • ಹೆಬ್ಬೂರಿನಲ್ಲಿ ಅಟಲ್‌ಜಿ ಜನಸ್ನೇಹಿ ಕೇಂದ್ರದ ನೂತನ ಕಟ್ಟಡ ಉದ್ಘಾಟನೆ :  ಗ್ರಾಮೀಣ ಜನರಿಗೆ ಸರ್ಕಾರಿ ಸೇವೆಗಳು ತ್ವರಿತವಾಗಿ ದೊರೆಯಲು ಅನುಕೂಲ: ಡಾ.ಜಿ.ಪರಮೇಶ್ವರ್
    • 300 ಮೊಟ್ಟೆ ಚಾಕಿಯಿಂದ 250 ಕೆ.ಜಿ. ರೇಷ್ಮೆ ಗೂಡು ಉತ್ಪಾದನೆ ಸಾಧ್ಯ: ಮೋಹನ್
    • ಸಂಪಾದಕೀಯ: ಆರ್ಥಿಕ ಪಾರದರ್ಶಕತೆಯ ಕವಚ — ಕಾರ್ಪೊರೇಟ್ ವಲಯದಲ್ಲಿ UDIN ಕಡ್ಡಾಯ ನಿಯಮದ ಮಹತ್ವ
    • ಮನುಷ್ಯನಿಗೆ ಆರೋಗ್ಯವೇ ನಿಜವಾದ ಭಾಗ್ಯ: ಡಾ.ಹನುಮಂತನಾಥ ಸ್ವಾಮೀಜಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮೈಸೂರು ದಸರಾ: ಸ್ತಬ್ಧಚಿತ್ರ ಪ್ರದರ್ಶನ 15 ಜಿಲ್ಲೆಗಳಿಗೆ ಸೀಮಿತ; ಡಿಸಿಎಂ ಪರಮೇಶ್ವರ್ ತವರು ತುಮಕೂರಿಗೆ ಅವಕಾಶವಿಲ್ಲ!
    ರಾಜ್ಯ ಸುದ್ದಿ September 24, 2026

    ಮೈಸೂರು ದಸರಾ: ಸ್ತಬ್ಧಚಿತ್ರ ಪ್ರದರ್ಶನ 15 ಜಿಲ್ಲೆಗಳಿಗೆ ಸೀಮಿತ; ಡಿಸಿಎಂ ಪರಮೇಶ್ವರ್ ತವರು ತುಮಕೂರಿಗೆ ಅವಕಾಶವಿಲ್ಲ!

    By Ganesh TumkuruSeptember 24, 2026No Comments2 Mins Read
    mysore dasara

    ಬೆಂಗಳೂರು:  ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿಯಲ್ಲಿ ಪ್ರದರ್ಶನಗೊಳ್ಳುವ ಜಿಲ್ಲಾ ಸ್ತಬ್ಧಚಿತ್ರಗಳ (Tableaux) ಸಂಖ್ಯೆಯನ್ನು ರಾಜ್ಯ ಸರ್ಕಾರ ಕೇವಲ 15 ಜಿಲ್ಲೆಗಳಿಗೆ ಸೀಮಿತಗೊಳಿಸಿರುವುದು ಹಲವು ಜಿಲ್ಲೆಗಳಲ್ಲಿ ನಿರಾಶೆಯನ್ನು ಮೂಡಿಸಿದೆ. ವಿಶೇಷವಾಗಿ, ರಾಜ್ಯದ ಎರಡನೇ ಅತಿದೊಡ್ಡ ಜಿಲ್ಲೆ ಹಾಗೂ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರ ತವರು ಜಿಲ್ಲೆಯಾದ ತುಮಕೂರಿಗೆ ಈ ಬಾರಿ ಅವಕಾಶ ಸಿಗದಿರುವುದು ಭಾರೀ ಚರ್ಚೆಗೆ ಗ್ರಾಸವಾಗಿದೆ.

    ಆಯ್ಕೆಯಾದ 15 ಜಿಲ್ಲೆಗಳು ಯಾವುವು?

    ಸೆಪ್ಟೆಂಬರ್ 19 ರಂದು ನಡೆದ ರಾಜ್ಯ ಮಟ್ಟದ ಸಮಿತಿಯ ಸಭೆಯ ನಡವಳಿಗಳ ಪ್ರಕಾರ, ಮೈಸೂರು, ಮಂಡ್ಯ, ಹಾಸನ, ಚಾಮರಾಜನಗರ, ಬೆಂಗಳೂರು ನಗರ, ಶಿವಮೊಗ್ಗ, ಕೋಲಾರ, ಚಿಕ್ಕಬಳ್ಳಾಪುರ, ಬೆಳಗಾವಿ, ಬಾಗಲಕೋಟೆ, ಹಾವೇರಿ, ಉತ್ತರ ಕನ್ನಡ, ಯಾದಗಿರಿ, ವಿಜಯನಗರ ಮತ್ತು ಬೀದರ್ ಜಿಲ್ಲೆಗಳು ಮಾತ್ರ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಆಯ್ಕೆಯಾಗಿವೆ. ಉಳಿದ ಜಿಲ್ಲೆಗಳಿಗೆ ಈ ಬಾರಿ ಅವಕಾಶ ದೊರೆತಿಲ್ಲ.

    ಸರ್ಕಾರದ ನಿರ್ಧಾರವಿದು – ಎನ್. ಮಂಜುಶ್ರೀ ಸ್ಪಷ್ಟನೆ:

    ತುಮಕೂರು ಜಿಲ್ಲೆಯ ಸ್ತಬ್ಧಚಿತ್ರ ಆಯ್ಕೆಯಾಗದ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಾರ್ಯದರ್ಶಿ ಹಾಗೂ ರಾಜ್ಯ ಮಟ್ಟದ ಸಮಿತಿಯ ಅಧ್ಯಕ್ಷರಾದ ಎನ್. ಮಂಜುಶ್ರೀ ಅವರೊಂದಿಗೆ ಚರ್ಚೆ ನಡೆಸಿದ್ದಾರೆ. ಈ ಕುರಿತು ಸ್ಪಷ್ಟನೆ ನೀಡಿರುವ ಮಂಜುಶ್ರೀ, ಸ್ತಬ್ಧಚಿತ್ರಗಳ ಸಂಖ್ಯೆಯನ್ನು 15ಕ್ಕೆ ಸೀಮಿತಗೊಳಿಸುವುದು ಸಂಪೂರ್ಣವಾಗಿ ಸರ್ಕಾರದ ನಿರ್ಧಾರವೇ ಹೊರತು ಆಯ್ಕೆ ಸಮಿತಿಯದ್ದಲ್ಲ ಎಂದು ತಿಳಿಸಿದ್ದಾರೆ.

    ಈ ವರ್ಷದ ದಸರಾವನ್ನು ಅತ್ಯಂತ ವೈಭವದಿಂದ ಆಚರಿಸಲಾಗುವುದು ಎಂದು ಸರ್ಕಾರ ಘೋಷಿಸಿದ್ದರೂ, ರಾಜ್ಯದ ಎಲ್ಲಾ 31 ಜಿಲ್ಲೆಗಳಿಂದ ಪ್ರಸ್ತಾವನೆಗಳು ಬಂದಿದ್ದರೂ ಕೇವಲ 15 ಜಿಲ್ಲೆಗಳಿಗೆ ಮಾತ್ರ ಅವಕಾಶ ಕಲ್ಪಿಸಿರುವುದು ಸ್ಥಳೀಯವಾಗಿ ನಿರಾಶೆ ಮೂಡಿಸಿದೆ. ಅಲ್ಲದೆ, ಸ್ತಬ್ಧಚಿತ್ರಗಳ ತಯಾರಿಕೆಯಲ್ಲಿ ಪ್ರತಿವರ್ಷ ತೊಡಗಿಕೊಳ್ಳುವ ನೂರಾರು ಕಲಾವಿದರು, ಕುಶಲಕರ್ಮಿಗಳು ಮತ್ತು ತಂತ್ರಜ್ಞರಿಗೆ ದೊರೆಯಬೇಕಿದ್ದ ಕಾಲೋಚಿತ ಉದ್ಯೋಗಾವಕಾಶಗಳೂ ಸಹ ಇದರಿಂದ ಕಡಿತಗೊಂಡಿವೆ.

    ಆಯ್ಕೆಯಾದ ಪ್ರತಿಯೊಂದು ಜಿಲ್ಲೆಯ ಸ್ತಬ್ಧಚಿತ್ರಕ್ಕಾಗಿ ₹24.96 ಲಕ್ಷದವರೆಗೆ ವೆಚ್ಚ ಮಾಡಲು ಅವಕಾಶ ನೀಡಲಾಗಿದ್ದು, ಆಯ್ಕೆಯಾಗದ ಜಿಲ್ಲೆಗಳಿಗಾಗಿ ಮೀಸಲಿಟ್ಟಿದ್ದ ಅನುದಾನವನ್ನು ಇತರ ಜಿಲ್ಲೆಗಳಿಗೆ ಮರುಹಂಚಿಕೆ ಮಾಡಲಾಗುತ್ತದೆ. ಉಪಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಡಾ. ಜಿ. ಪರಮೇಶ್ವರ್ ಅವರ ತವರು ಜಿಲ್ಲೆಯನ್ನೇ ಕೈಬಿಟ್ಟಿರುವುದು ಮತ್ತು ಕ್ರೀಡಾ ಹಾಗೂ ಸಾಂಸ್ಕೃತಿಕ ಕೇಂದ್ರವಾಗಿ ಹೊರಹೊಮ್ಮುತ್ತಿರುವ ತುಮಕೂರಿಗೆ ಅವಕಾಶ ಸಿಗದಿರುವುದು ರಾಜಕೀಯ ವಲಯದಲ್ಲೂ ಮುನ್ನೆಲೆಗೆ ಬಂದಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

    Ganesh Tumkuru
    • Website

    Related Posts

    2027ರ ಸರ್ಕಾರಿ ರಜೆ ಪಟ್ಟಿ ಪ್ರಕಟ: ಇಲ್ಲಿದೆ ಸಂಪೂರ್ಣ ವಿವರ

    November 22, 2026

    ಸತ್ಯ ಘಟನೆಯ “ಕಾಲಾಗ್ನಿ” ಚಿತ್ರಕ್ಕೆ ಮುಹೂರ್ತ |  ಸೆಸ್ಪೆನ್ಸ್, ಥ್ರಿಲ್ಲರ್ ಕುರಿತಾದ ಚಿತ್ರಕ್ಕೆ ರಾಯರ ಸನ್ನಿಧಿಯಲ್ಲಿ ಚಾಲನೆ

    November 21, 2026

    ಹೋನಕಲ್ಲು ಮಲ್ಲೇಶ್ವರ ಕ್ಷೇತ್ರಕ್ಕೆ KSRTC ಬಸ್ ಸೌಲಭ್ಯ |  ಭಕ್ತರು, ಸಾರ್ವಜನಿಕರ ಬಹುದಿನಗಳ ಬೇಡಿಕೆಗೆ ಸ್ಪಂದನೆ ; ಜನ ಪ್ರತಿನಿಧಿಗಳಿಗೆ ಬಸವ ರಮಾನಂದ ಶ್ರೀಗಳ ಕೃತಜ್ಞತೆ

    November 20, 2026

    Leave A Reply Cancel Reply

    Our Picks

    ಡಿಸೆಂಬರ್ 3ರಂದು ದೇಶವ್ಯಾಪಿ ಬ್ಯಾಂಕ್ ಮುಷ್ಕರ: ಕಾರಣವೇನು ? ಗ್ರಾಹಕರು ಗಮನಿಸಬೇಕಾದದ್ದು ಏನು ?

    November 25, 2026

    ಎಸ್‌ ಬಿಐನಲ್ಲಿ ₹1 ಲಕ್ಷ ವೈಯಕ್ತಿಕ ಸಾಲ ಪಡೆದರೆ EMI ಎಷ್ಟು? ಬಡ್ಡಿದರದ ಸಂಪೂರ್ಣ ಲೆಕ್ಕಾಚಾರ ಇಲ್ಲಿದೆ!

    November 25, 2026

    ಆಡಿಟ್ ಹೆಸರಿನಲ್ಲಿ ಉದ್ಯಮಿಗಳಿಗೆ ಕಿರುಕುಳ? ₹4 ಲಕ್ಷ ಲಂಚಕ್ಕೆ ಬೇಡಿಕೆಯಿಟ್ಟಿದ್ದ ಇಬ್ಬರು CGST ಅಧೀಕ್ಷಕರಿಗೆ ಸಿಬಿಐ ಶಾಕ್!

    November 24, 2026

    ಪೆಟ್ರೋಲ್ ಬಂಕ್‌ ನಲ್ಲಿ ₹110, ₹210 ಅಥವಾ ₹510ಕ್ಕೇ ಪೆಟ್ರೋಲ್ ಹಾಕಿಸುವುದೇಕೆ? ಇದರ ಹಿಂದಿದೆ ಆಸಕ್ತಿದಾಯಕ ಕಾರಣಗಳು!

    November 23, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಲೇಖನ

    ಸಂವಿಧಾನ ಸಮರ್ಪಣಾ ದಿನ: ಸಂವಿಧಾನ ಕೇವಲ ಆಡಳಿತ ಗ್ರಂಥವಲ್ಲ, ಪ್ರತಿಯೊಬ್ಬ ಭಾರತೀಯನ ಸ್ವಾಭಿಮಾನದ ಉಸಿರು

    November 26, 2026

    ಇಂದು ನವೆಂಬರ್ 26 — ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲಿ ಅತ್ಯಂತ ಮಹತ್ವದ, ಸುವರ್ಣಾಕ್ಷರಗಳಲ್ಲಿ ಬರೆದಿಡಬೇಕಾದ ಪರಮಪವಿತ್ರ ದಿನ. 1949ರ ಇದೇ…

    ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ವೈದ್ಯರಿಂದ ವೈಭವದ ಕನ್ನಡ ರಾಜ್ಯೋತ್ಸವ ಆಚರಣೆ

    November 25, 2026

    ಡಾ. ವೀರೇಂದ್ರ ಹೆಗ್ಗಡೆಯವರ ಜನ್ಮದಿನದ ಅಂಗವಾಗಿ ವೃದ್ಧಾಶ್ರಮಗಳಿಗೆ ದಿನಸಿ, ಹಣ್ಣು ವಿತರಣೆ

    November 25, 2026

    ಕೈದಾಳದ ಶ್ರೀ ಚೆನ್ನಕೇಶವ ಸ್ವಾಮಿ ದೇವಸ್ಥಾನಕ್ಕೆ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಭೇಟಿ | ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಗಣ್ಯರು

    November 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.