nammatumakuru

    Subscribe to Updates

    Get the latest creative news from FooBar about art, design and business.

    What's Hot

    2028ರ ಚುನಾವಣೆಯಲ್ಲಿ ಕೊರಟಗೆರೆಯಲ್ಲಿ ನನಗೂ ಅವಕಾಶ ಸಿಗಲಿ: ಪಿ.ಎನ್. ಕೃಷ್ಣಮೂರ್ತಿ

    September 25, 2026

    ತುಮಕೂರು: ಗಣೇಶ ವಿಸರ್ಜನೆ ವೇಳೆ ಸಿಂಹಾದ್ರಿ ಹತ್ಯೆ – ಸಂತ್ರಸ್ತ ಕುಟುಂಬಕ್ಕೆ ಸಿಪಿಐ(ಎಂ), ಸಿಐಟಿಯು ಹಾಗೂ ಪಿಯುಸಿಎಲ್ ನಿಯೋಗದಿಂದ ಸಾಂತ್ವನ

    September 25, 2026

    ಹಾವೇರಿ: ವಾಯವ್ಯ ಸಾರಿಗೆ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ – ಓರ್ವ ಪ್ರಯಾಣಿಕ ಸಾವು, 6 ಜನರಿಗೆ ಗಾಯ

    September 24, 2026
    Facebook Twitter Instagram
    ಟ್ರೆಂಡಿಂಗ್
    • 2028ರ ಚುನಾವಣೆಯಲ್ಲಿ ಕೊರಟಗೆರೆಯಲ್ಲಿ ನನಗೂ ಅವಕಾಶ ಸಿಗಲಿ: ಪಿ.ಎನ್. ಕೃಷ್ಣಮೂರ್ತಿ
    • ತುಮಕೂರು: ಗಣೇಶ ವಿಸರ್ಜನೆ ವೇಳೆ ಸಿಂಹಾದ್ರಿ ಹತ್ಯೆ – ಸಂತ್ರಸ್ತ ಕುಟುಂಬಕ್ಕೆ ಸಿಪಿಐ(ಎಂ), ಸಿಐಟಿಯು ಹಾಗೂ ಪಿಯುಸಿಎಲ್ ನಿಯೋಗದಿಂದ ಸಾಂತ್ವನ
    • ಹಾವೇರಿ: ವಾಯವ್ಯ ಸಾರಿಗೆ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ – ಓರ್ವ ಪ್ರಯಾಣಿಕ ಸಾವು, 6 ಜನರಿಗೆ ಗಾಯ
    • 100 ದಿನಗಳ ಸಾಧನೆ ತಿಳಿಯಲು 30 ಸಚಿವರು ಕನ್ನಡಿಯಲ್ಲಿ ಮುಖ ನೋಡಿಕೊಳ್ಳಿ: ಶಾಸಕ ಸುನೀಲ್ ಕುಮಾರ್ ವಾಗ್ದಾಳಿ
    • ಮೈಸೂರು ದಸರಾ: ಸ್ತಬ್ಧಚಿತ್ರ ಪ್ರದರ್ಶನ 15 ಜಿಲ್ಲೆಗಳಿಗೆ ಸೀಮಿತ; ಡಿಸಿಎಂ ಪರಮೇಶ್ವರ್ ತವರು ತುಮಕೂರಿಗೆ ಅವಕಾಶವಿಲ್ಲ!
    • ಕಾವೇರಿ ಜಲ ವಿವಾದ: CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ
    • ಕೇಂದ್ರೀಯ ರೇಷ್ಮೆ ಮಂಡಳಿಯಲ್ಲಿ ಉದ್ಯೋಗಾವಕಾಶ: ಪದವಿಧರರಿಗೆ 17 ಸರ್ಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ
    • ಅನುಕಂಪದ ಆಧಾರದ ಮೇಲೆ ನೇಮಕಗೊಂಡವರು ಉನ್ನತ ಹುದ್ದೆಗಳನ್ನು ಕೇಳುವಂತಿಲ್ಲ: ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » 2028ರ ಚುನಾವಣೆಯಲ್ಲಿ ಕೊರಟಗೆರೆಯಲ್ಲಿ ನನಗೂ ಅವಕಾಶ ಸಿಗಲಿ: ಪಿ.ಎನ್. ಕೃಷ್ಣಮೂರ್ತಿ
    ಕೊರಟಗೆರೆ September 25, 2026

    2028ರ ಚುನಾವಣೆಯಲ್ಲಿ ಕೊರಟಗೆರೆಯಲ್ಲಿ ನನಗೂ ಅವಕಾಶ ಸಿಗಲಿ: ಪಿ.ಎನ್. ಕೃಷ್ಣಮೂರ್ತಿ

    By Ganesh TumkuruSeptember 25, 2026No Comments2 Mins Read
    p n krishna murthy

    ಕೊರಟಗೆರೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು ಮುಂದಿನ ದಿನಗಳಲ್ಲಿ ರಾಜ್ಯದ ಮುಖ್ಯಮಂತ್ರಿಯಾಗಬೇಕು ಎಂದು ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಪಿ.ಎನ್. ಕೃಷ್ಣಮೂರ್ತಿ ಹೇಳಿದ್ದಾರೆ. ಕೋಳಲ ಹೋಬಳಿಯ ವಿವಿಧ ಗ್ರಾಮಗಳಲ್ಲಿ ನಡೆದ ದೇವಸ್ಥಾನಗಳ ಜೀರ್ಣೋದ್ಧಾರ ಹಾಗೂ ಜನಪರ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಮಾತನಾಡಿದ ಅವರು, 2028ರ ವಿಧಾನಸಭಾ ಚುನಾವಣೆಯಲ್ಲಿ ಕೊರಟಗೆರೆ ಕ್ಷೇತ್ರವು ಸಾಮಾನ್ಯ ವರ್ಗಕ್ಕೆ ಬಂದಲ್ಲಿ ತಮಗೂ ಒಂದು ಅವಕಾಶ ನೀಡುವಂತೆ ಜನರಲ್ಲಿ ಮನವಿ ಮಾಡಿಕೊಂಡರು.

    ಕೋಳಲ ಹೋಬಳಿಯ ಸಿಂಗ್ರಿಹಳ್ಳಿ, ಎಸ್.ಗೊಲ್ಲಹಳ್ಳಿ ಹಾಗೂ ದೊಡ್ಡಪಾಲನಹಳ್ಳಿ ಗ್ರಾಮಗಳ ದೇವಸ್ಥಾನಗಳ ಜೀರ್ಣೋದ್ಧಾರ ಕಾಮಗಾರಿಗೆ ಪಿ.ಎನ್. ಕೃಷ್ಣಮೂರ್ತಿ ಅವರು ಧನಸಹಾಯ ಮಾಡಿದರು. ಈ ವೇಳೆ ಮಾತನಾಡಿದ ಅವರು, ಗ್ರಾಮಗಳಲ್ಲಿ ದೇವಸ್ಥಾನವಿದ್ದರೆ ಶಾಂತಿ-ನೆಮ್ಮದಿ ನೆಲೆಸುತ್ತದೆ, ಶಾಲೆಯಿದ್ದರೆ ಮಕ್ಕಳಲ್ಲಿ ಜ್ಞಾನ ಮತ್ತು ಸಂಸ್ಕೃತಿ ಬೆಳೆಯುತ್ತದೆ ಎಂದು ಅಭಿಪ್ರಾಯಪಟ್ಟರು. ಇದೇ ವೇಳೆ ಎರಡು ಗ್ರಾಮಗಳ 300ಕ್ಕೂ ಹೆಚ್ಚು ಹೆಣ್ಣುಮಕ್ಕಳಿಗೆ ಬಾಗಿನ ನೀಡಿ ಶುಭ ಹಾರೈಸಿದರು.

    ತಮ್ಮ 25 ವರ್ಷಗಳ ರಾಜಕೀಯ ಜೀವನದಲ್ಲಿ ಕೋಳಲ ವ್ಯಾಪ್ತಿಯ ಜನರು ನೀಡಿರುವ ಪ್ರೀತಿ-ವಿಶ್ವಾಸವನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ ಎಂದರು. “ಕೋಳಲ ನನಗೆ ರಾಜಕೀಯ ಭವಿಷ್ಯ ನೀಡಿದ ಸ್ಥಳ. ಇಲ್ಲಿನ ಜನರ ಆಶೀರ್ವಾದ ನನ್ನೊಂದಿಗಿದೆ” ಎಂದರು.

    “2028ರ ಚುನಾವಣೆಯಲ್ಲಿ ಕೊರಟಗೆರೆ ಕ್ಷೇತ್ರವು ಸಾಮಾನ್ಯ ವರ್ಗಕ್ಕೆ ಮೀಸಲು ಬಂದರೆ, ನನಗೂ ಒಂದು ಅವಕಾಶ ನೀಡಿ. ನಿಮ್ಮೊಂದಿಗೆ ಸೇರಿ ಇನ್ನಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡುವ ಉದ್ದೇಶವಿದೆ” ಎಂದು ತಿಳಿಸಿದರು.

    ಡಾ. ಜಿ. ಪರಮೇಶ್ವರ್ ಅವರಿಗೆ ಕೊರಟಗೆರೆ ಕ್ಷೇತ್ರದ ಮತದಾರರು ಮೂರು ಬಾರಿ ಶಾಸಕರಾಗುವ ಅವಕಾಶ ನೀಡಿದ್ದು, ಅವರು ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿಯಾಗಲಿ ಎಂದು ಕೃಷ್ಣಮೂರ್ತಿ ಹಾರೈಸಿದರು. ಜೊತೆಗೆ, ಕ್ಷೇತ್ರದಲ್ಲಿ ಕೆಲ ಅಧಿಕಾರಿಗಳ ಕಾರ್ಯವೈಖರಿಯಿಂದ ನಾಯಕರಿಗೆ ಕೆಟ್ಟ ಹೆಸರು ಬಾರದಂತೆ ಎಚ್ಚರಿಕೆ ವಹಿಸಬೇಕು ಎಂದರು. ತಿಂಗಳಿಗೆ ಒಮ್ಮೆಯಾದರೂ ಕ್ಷೇತ್ರಕ್ಕೆ ಭೇಟಿ ನೀಡಿ ಜನರ ಸಮಸ್ಯೆಗಳನ್ನು ಆಲಿಸಬೇಕು ಎಂದು ಮಾಧ್ಯಮಗಳ ಮೂಲಕ ಸಲಹೆ ನೀಡಿದರು.

    ತಾಲೂಕಿನ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ನೆರವಾಗುವ ನಿಟ್ಟಿನಲ್ಲಿ ಸುಮಾರು 8,000 ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಸಮವಸ್ತ್ರ ಹಾಗೂ ಟ್ರ್ಯಾಕ್‌ ಸೂಟ್‌ಗಳನ್ನು ವಿತರಿಸಲು ಸಿದ್ಧತೆ ನಡೆಸಲಾಗಿದೆ ಎಂದು ಅವರು ಘೋಷಿಸಿದರು.

    ಅಭಿವೃದ್ಧಿ ವಿಚಾರದಲ್ಲಿ ರಾಜಕೀಯ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು ಎಂದು ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರಾದ ಮಾವತ್ತೂರು ಮಂಜುನಾಥ್, ಕೇಬಲ್ ಕಾಂತರಾಜು ಹಾಗೂ ಗ್ರಾಮಸ್ಥರು ಅಭಿಪ್ರಾಯ ವ್ಯಕ್ತಪಡಿಸಿದರು.

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

    Ganesh Tumkuru
    • Website

    Related Posts

    ಕೊರಟಗೆರೆ: ಬರಗಾಲದ ಹಿನ್ನೆಲೆ ‘ಹೊಲ ಹೂಳುವ ಗಣಪತಿ’ ಪ್ರತಿಷ್ಠಾಪನೆ; ಅದ್ದೂರಿಯಾಗಿ ಜರುಗಿದ ಶ್ರೀ ವಿದ್ಯಾ ಗಣಪತಿ ವಿಸರ್ಜನೆ!

    September 20, 2026

    ತುಮಕೂರಿನಲ್ಲಿ ಅತ್ಯಾಧುನಿಕ ‘ಸಿ.ಜಿ. ಕಿಡ್ನಿಕೇರ್ ಮಲ್ಟಿ ಸ್ಪೆಷಾಲಿಟಿ’ ಆಸ್ಪತ್ರೆ ಲೋಕಾರ್ಪಣೆ; ಉದ್ಘಾಟಿಸಿದ ಮಾಜಿ ಸಿಎಂ ಸಿದ್ದರಾಮಯ್ಯ

    September 20, 2026

    ಕೊರಟಗೆರೆ: ಪ್ರಜಾಸೇವಾ ಸಭೆಯಲ್ಲಿ 203 ಅರ್ಜಿ ಸ್ವೀಕಾರ, 10 ಸ್ಥಳದಲ್ಲೇ ಇತ್ಯರ್ಥ! | ಸಮಸ್ಯೆ ನಿವಾರಣೆಗೆ ರೈತರ ಆಗ್ರಹ

    September 19, 2026

    Leave A Reply Cancel Reply

    Our Picks

    ಕಾವೇರಿ ಜಲ ವಿವಾದ: CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ

    September 24, 2026

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್

    September 23, 2026

    ಗಣೇಶೋತ್ಸವ ಅನ್ನದಾನದ ವೇಳೆ ಕುದಿಯುತ್ತಿದ್ದ ಸಾಂಬಾರ್‌ ಪಾತ್ರೆಗೆ ಬಿದ್ದು ಮಹಿಳೆ ದಾರುಣ ಸಾವು

    September 22, 2026

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    2028ರ ಚುನಾವಣೆಯಲ್ಲಿ ಕೊರಟಗೆರೆಯಲ್ಲಿ ನನಗೂ ಅವಕಾಶ ಸಿಗಲಿ: ಪಿ.ಎನ್. ಕೃಷ್ಣಮೂರ್ತಿ

    September 25, 2026

    ಕೊರಟಗೆರೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು ಮುಂದಿನ ದಿನಗಳಲ್ಲಿ ರಾಜ್ಯದ ಮುಖ್ಯಮಂತ್ರಿಯಾಗಬೇಕು ಎಂದು ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ…

    ತುಮಕೂರು: ಗಣೇಶ ವಿಸರ್ಜನೆ ವೇಳೆ ಸಿಂಹಾದ್ರಿ ಹತ್ಯೆ – ಸಂತ್ರಸ್ತ ಕುಟುಂಬಕ್ಕೆ ಸಿಪಿಐ(ಎಂ), ಸಿಐಟಿಯು ಹಾಗೂ ಪಿಯುಸಿಎಲ್ ನಿಯೋಗದಿಂದ ಸಾಂತ್ವನ

    September 25, 2026

    ಹಾವೇರಿ: ವಾಯವ್ಯ ಸಾರಿಗೆ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ – ಓರ್ವ ಪ್ರಯಾಣಿಕ ಸಾವು, 6 ಜನರಿಗೆ ಗಾಯ

    September 24, 2026

    100 ದಿನಗಳ ಸಾಧನೆ ತಿಳಿಯಲು 30 ಸಚಿವರು ಕನ್ನಡಿಯಲ್ಲಿ ಮುಖ ನೋಡಿಕೊಳ್ಳಿ: ಶಾಸಕ ಸುನೀಲ್ ಕುಮಾರ್ ವಾಗ್ದಾಳಿ

    September 24, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.