ಸಂತಪೂರ: ಬೀದರ್ ಜಿಲ್ಲೆಯ ಔರಾದ ತಾಲೂಕಿನ ಸಂತಪೂರ ಗ್ರಾಮದಲ್ಲಿ ‘ತುಕಾರಾಮ ಹಸನ್ಮುಖಿ ಗೆಳೆಯರ ಬಳಗ’ದ ವತಿಯಿಂದ ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ವಿನೋದಕುಮಾರ್ ಅಪ್ಪೆ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಗ್ರಾಮದಲ್ಲಿ ಆಯೋಜಿಸಲಾಗಿದ್ದ ಈ ಸಮಾರಂಭದಲ್ಲಿ ನೂತನ ಅಧ್ಯಕ್ಷರಿಗೆ ಶುಭ ಹಾರೈಸಿ, ಸತ್ಕರಿಸಲಾಯಿತು.
ಕಾರ್ಯಕ್ರಮದಲ್ಲಿ ಬೀದರ್ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಸಂತಪೂರ ಗ್ರಾಮ ಪಂಚಾಯತ್ ನೋಡಲ್ ಅಧಿಕಾರಿಗಳು ಉಪಸ್ಥಿತರಿದ್ದರು.
ತುಕಾರಾಮ ಹಸನ್ಮುಖಿ, ಸತೀಶ ಹಸನ್ಮುಖಿ, ಗಣಪತಿ ವಾಸುದೇವ, ನವನಾಥ ಹಾಗೂ ಮಲ್ಲಿಕಾರ್ಜುನ್ ಪಾಲ್ಗೊಂಡಿದ್ದರು.
ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿಯ ಸಿಬ್ಬಂದಿ ವರ್ಗದವರು, ಗೆಳೆಯರ ಬಳಗದ ಸದಸ್ಯರು ಹಾಗೂ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
ವರದಿ: ಅರವಿಂದ ಮಲ್ಲೀಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
