nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪವಿತ್ರಾ ಗೌಡ ಜಾಮೀನು ಅರ್ಜಿ ವಜಾಗೊಳಿಸಿದ ಕೋರ್ಟ್!

    September 27, 2026

    ಮರಗಳ ಮಾರಣಹೋಮದಿಂದ ಮಳೆ ಕೊರತೆ: ನ್ಯಾ.ಜಯಂತ್ ಕುಮಾರ್ ಕಳವಳ

    September 27, 2026

    CEC ಜ್ಞಾನೇಶ್ ಕುಮಾರ್‌ರನ್ನು ತಕ್ಷಣ ವಜಾಗೊಳಿಸಿ, ಕ್ರಿಮಿನಲ್ ಕೇಸ್ ದಾಖಲಿಸಿ: ರಾಷ್ಟ್ರಪತಿಗೆ ಸಿದ್ದರಾಮಯ್ಯ ಆಗ್ರಹ

    September 26, 2026
    Facebook Twitter Instagram
    ಟ್ರೆಂಡಿಂಗ್
    • ಪವಿತ್ರಾ ಗೌಡ ಜಾಮೀನು ಅರ್ಜಿ ವಜಾಗೊಳಿಸಿದ ಕೋರ್ಟ್!
    • ಮರಗಳ ಮಾರಣಹೋಮದಿಂದ ಮಳೆ ಕೊರತೆ: ನ್ಯಾ.ಜಯಂತ್ ಕುಮಾರ್ ಕಳವಳ
    • CEC ಜ್ಞಾನೇಶ್ ಕುಮಾರ್‌ರನ್ನು ತಕ್ಷಣ ವಜಾಗೊಳಿಸಿ, ಕ್ರಿಮಿನಲ್ ಕೇಸ್ ದಾಖಲಿಸಿ: ರಾಷ್ಟ್ರಪತಿಗೆ ಸಿದ್ದರಾಮಯ್ಯ ಆಗ್ರಹ
    • ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜನೆ ಆರೋಪ: ಬಿಜೆಪಿ ಶಾಸಕ ಮುನಿರತ್ನಗೆ ಯುವಕನಿಂದ ತರಾಟೆ!
    • ವಿರಾಜಪೇಟೆ ಗಣೇಶ ವಿಸರ್ಜನೆ ವೇಳೆ ಕರೆಂಟ್ ಶಾಕ್: ಐವರಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರ; ತಪ್ಪಿದ ದೊಡ್ಡ ಅನಾಹುತ!
    • ಕಚೇರಿಗೆ ತಡವಾಗಿ ಬಂದ ಅಧಿಕಾರಿಗಳಿಗೆ ಗೇಟ್ ಬಂದ್: ಜಿಪಂ ಸಿಇಒ ದಿಢೀರ್ ಭೇಟಿ, ಒಂದು ದಿನದ ಸಂಬಳ ಕಟ್ ಎಚ್ಚರಿಕೆ!
    • ಕೊರಟಗೆರೆ: ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ಒತ್ತು– ಸರ್ವಜನ ಶ್ರಮಜೀವಿ ಸೇವಾ ಟ್ರಸ್ಟ್ ಉದ್ಘಾಟನೆ
    • ಮಾವತ್ತೂರು ಸೊಸೈಟಿ ಸರ್ವ ಸದಸ್ಯರ ಸಭೆ ರಣರಂಗ: ಕಾರ್ಯದರ್ಶಿ ವಿರುದ್ಧ ಗಂಭೀರ ಆರೋಪ, ಅರ್ಧದಲ್ಲೇ ಸಭೆ ಮುಂದೂಡಿಕೆ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮರಗಳ ಮಾರಣಹೋಮದಿಂದ ಮಳೆ ಕೊರತೆ: ನ್ಯಾ.ಜಯಂತ್ ಕುಮಾರ್ ಕಳವಳ
    ತುಮಕೂರು September 27, 2026

    ಮರಗಳ ಮಾರಣಹೋಮದಿಂದ ಮಳೆ ಕೊರತೆ: ನ್ಯಾ.ಜಯಂತ್ ಕುಮಾರ್ ಕಳವಳ

    By Ganesh TumkuruSeptember 27, 2026No Comments2 Mins Read
    tumakuru news

    ತುಮಕೂರು: ಗಿಡ–ಮರಗಳ ಮಾರಣಹೋಮದಿಂದ ಮಳೆ ಕಡಿಮೆಯಾಗಿ ಕುಡಿಯುವ ನೀರಿಗೂ ಅಭಾವ ಎದುರಾಗಿದೆ. ಅಪ್ಪಾಂಗ ಯೋಗದಲ್ಲಿ ಪ್ರಾಣಾಯಾಮಕ್ಕೆ ಮಹತ್ವದ ಸ್ಥಾನವಿದ್ದು, ಉಸಿರಾಟವೇ ನಮ್ಮ ಪ್ರಾಣ. ವಿದ್ಯಾರ್ಥಿಗಳು ಕಾಲೇಜು ಆವರಣದಲ್ಲಿ ನೆಟ್ಟಿರುವ ಸಸಿಗಳನ್ನು ದಿನದಿನದ ಪಾಲನೆ ಮಾಡುವ ಮೂಲಕ ಬೆಳೆಸಬೇಕು ಎಂದು ತುಮಕೂರು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಬಿ. ಜಯಂತ್ ಕುಮಾರ್ ಸಲಹೆ ನೀಡಿದರು.

    ನಗರದ ಬಿ.ಎಚ್. ರಸ್ತೆಯಲ್ಲಿರುವ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಜಿಲ್ಲಾ ನ್ಯಾಯಾಂಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಅರಣ್ಯ ಇಲಾಖೆ, ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಸಸಿ ನೆಡುವ ಕಾರ್ಯಕ್ರಮ ಹಾಗೂ ಪೋಕ್ಸೊ ಮತ್ತು ಬಾಲನ್ಯಾಯ ಕಾಯ್ದೆ ಕುರಿತ ಕಾನೂನು ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

    ತಮ್ಮ ಬಾಲ್ಯದ ಶಾಲಾ ದಿನಗಳನ್ನು ಸ್ಮರಿಸಿದ ನ್ಯಾಯಾಧೀಶರು, ನಮ್ಮ ಕಾಲದಲ್ಲಿ ಶಾಲೆ ಮತ್ತು ಶಿಕ್ಷಕರ ಮೇಲೆ ಅಪಾರ ಗೌರವವಿತ್ತು. ಗಣಿತ ವಿಷಯದಲ್ಲಿ ಸಣ್ಣ ತಪ್ಪು ಮಾಡಿದರೂ ಶಿಕ್ಷಕರು ಹತ್ತಿರ ಕರೆದು ಪ್ರೀತಿಯಿಂದ ತಿದ್ದಿ ಪ್ರೋತ್ಸಾಹಿಸುತ್ತಿದ್ದರು. ಅಂಥಹ ಶಿಕ್ಷಕರ ಮಾರ್ಗದರ್ಶನವೇ ನಾನು ಇಂದು ಈ ಮಟ್ಟಕ್ಕೆರಲು ಕಾರಣ ಎಂದರು.

    ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಲೋಕೇಶ ಧನಪಾಲ ಹವಳಿ ಅವರು ಮಾತನಾಡಿ, ಖಾಸಗಿ ಆಂಗ್ಲ ಮಾಧ್ಯಮ ಶಾಲೆಗಳು ಮತ್ತು ಸರ್ಕಾರಿ ಶಾಲೆಗಳ ನಡುವೆ ಸೌಲಭ್ಯಗಳಲ್ಲಿ ವ್ಯತ್ಯಾಸವಿರಬಹುದು, ಆದರೆ ಕಲಿಯುವ ಆಸಕ್ತಿ ಮತ್ತು ಶ್ರಮವಿದ್ದರೆ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಕೂಡ ಉನ್ನತ ಸಾಧನೆ ಮಾಡಲು ಸಾಧ್ಯ. ಹಣವಿದ್ದರೆ ಮಾತ್ರ ಸಾಧನೆ ಮಾಡಲು ಸಾಧ್ಯ ಎಂಬ ತಪ್ಪು ಕಲ್ಪನೆಯನ್ನು ಬಿಡಬೇಕು. ಜೀವನದಲ್ಲಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಪ್ರತಿಯೊಬ್ಬರಿಗೂ ಸ್ಪಷ್ಟ ಕನಸು ಹಾಗೂ ಗುರಿ ಇರಬೇಕು. ಶಿಕ್ಷಕರು ನೀಡುವ ಮಾರ್ಗದರ್ಶನ ಮತ್ತು ಸಿಸ್ತನ್ನು ಗೌರವಿಸಿ ಸ್ವೀಕರಿಸಬೇಕು.

    ನ್ಯಾಯಾಧೀಶರಾಗಲು ಮೂಲ ಕಾರಣ, ಸರ್ಕಾರಿ ಶಾಲೆಯಲ್ಲಿ ಕಲಿತುದು ನನ್ನ ಪಾಲಿಗೆ ಎಂದೂ ಹೆಮ್ಮೆಯ ವಿಷಯ ಎಂದರು.

    ಇಂದಿನ ಮೊಬೈಲ್ ಹಾಗೂ ಯೂಟ್ಯೂಬ್ಗಳಲ್ಲಿ ಜ್ಞಾನದ ಭಂಡಾರವೇ ಇದೆ. ಆದರೆ ಅದರಲ್ಲಿ ಒಳ್ಳೆಯದು ಮತ್ತು ಕೆಟ್ಟದ್ದು ಎರಡೂ ಇರುತ್ತದೆ. ವಿದ್ಯಾರ್ಥಿಗಳು ತಮಗೆ ಅಗತ್ಯವಿರುವ ಒಳ್ಳೆಯ ವಿಷಯಗಳನ್ನು ಹಾಗೂ ಶಿಕ್ಷಣಕ್ಕೆ ಪೂರಕವಾದ ಅಂಶಗಳನ್ನು ಮಾತ್ರ ಸ್ವೀಕರಿಸಬೇಕು ಎಂದು ಸಲಹೆ ಮಾಡಿದರು.

    ಆಪ್ರಾಪ್ತ ವಾಹನ ಚಾಲನೆಗೆ ದಂಡ: ನಿವೃತ್ತ ಬ್ಯಾಂಕ್ ವ್ಯವಸ್ಥಾಪಕ ಹಾಗೂ ಪಿ.ಎಲ್.ವಿ. ಕೆ. ಎಂ. ರಾಮಕೃಷ್ಣಪ್ಪ ಅವರು ವಿಷಯ ಮಂಡಿಸಿ ಮಾತನಾಡಿ, ವಿದ್ಯಾರ್ಥಿಗಳು ಹಾಗೂ ಪ್ರತಿಯೊಬ್ಬ ನಾಗರಿಕರು ಕನಿಷ್ಠ ಕಾನೂನು ಜ್ಞಾನ ಹೊಂದಿರುವುದು ಅತ್ಯಗತ್ಯ. ಕಾನೂನಿನ ಅಜ್ಞಾನವು ಅಪರಾಧದಿಂದ ನುಣುಚಿಕೊಳ್ಳಲು ಸಮರ್ಥನೆಯಲ್ಲ. 18 ವರ್ಷದೊಳಗಿನ ಆಪ್ರಾಪ್ತ ಮಕ್ಕಳು ವಾಹನ ಚಾಲನೆ ಮಾಡಿ ಅಪಘಾತ ಎಸಗಿದರೆ, ಕಾಯ್ದೆಯ ಸೆಕ್ಷನ್ 199 (ಎ) ಪ್ರಕಾರ ಪೋಷಕರಿಗೆ ಅಥವಾ ವಾಹನದ ಮಾಲೀಕರಿಗೆ 25,000 ದಂಡ, ಜೈಲು ಶಿಕ್ಷೆ ಹಾಗೂ ವಾಹನದ ನೋಂದಣಿ ರದ್ದತಿಯಾಗಲಿದೆ. ಹಾಗಾಗಿ ಸುರಕ್ಷತಾ ನಿಯಮಗಳನ್ನು ಪಾಲಿಸಿ ಎಂದು ತಿಳಿಸಿದರು.

    ಮಾದಕ ದ್ರವ್ಯಗಳ ಸೇವನೆಯು ವ್ಯಕ್ತಿಯ ಮಾನಸಿಕ, ದೈಹಿಕ ಆರೋಗ್ಯವನ್ನು ಕೆಡಿಸುವುದಲ್ಲದೆ, ಜ್ಞಾಪಕ ಶಕ್ತಿ ನಷ್ಟ, ಅಂಗಾಂಗ ವೈಫಲ್ಯ ಹಾಗೂ ಹೃದಯಾಘಾತಕ್ಕೂ ಕಾರಣವಾಗುತ್ತದೆ. ಮಾದಕ ವ್ಯಸನಕ್ಕೆ ತುತ್ತಾದವರು ಹಣಕ್ಕಾಗಿ ಕಳವು, ದರೋಡೆ ಹಾಗೂ ಕೊಲೆಯಂತಹ ಕಾನೂನುಬಹಿರ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವ ಅಪಾಯವಿರುತ್ತದೆ. 1985ರ ಎನ್ಡಿಪಿಎಸ್ ಕಾಯ್ದೆಯಡಿ ಗಾಂಜಾ, ಅಫೀಮು ಮುಂತಾದ ಮಾದಕ ವಸ್ತುಗಳನ್ನು ಬೆಳೆಯುವುದು, ತಯಾರಿಸುವುದು, ಸಂಗ್ರಹಿಸುವುದು, ಸಾಗಣೆ ಮಾಡುವುದು ಅಥವಾ ಸೇವಿಸುವುದು ಶಿಕ್ಷಾರ್ಹ ಅಪರಾಧವಾಗಿದೆ ಎಂದರು.

    ಪ್ಯಾನಲ್ ವಕೀಲರಾದ ಗಣೇಶ್ ಪ್ರಸಾದ್ ಕೆ. ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಪೋಕ್ಸೋ ಹಾಗೂ ಬಾಲನ್ಯಾಯ ಕಾಯ್ದೆಗಳ ಕುರಿತು ವಿದ್ಯಾರ್ಥಿಗಳಿಗೆ ಕಾನೂನು ಜಾಗೃತಿ ಮೂಡಿಸಿದರು.

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ರಾಜಕುಮಾರ್ ಎಸ್. ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ವಲಯ ಅರಣ್ಯಾಧಿಕಾರಿ ಬಸವರಾಜು ಗೋಗೇರಿ ಸೇರಿದಂತೆ ಕಾಲೇಜಿನ ವಿವಿಧ ವಿಭಾಗಗಳ ಪ್ರಮುಖರು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

    Namma Tumakuru namma tumkur Tumakuru news tumkuru news
    Ganesh Tumkuru
    • Website

    Related Posts

    ಮೈಸೂರು ದಸರಾ: ಅ.11 ರಿಂದ ಕನ್ನಡ ಪುಸ್ತಕ ಮಾರಾಟ ಮೇಳ: ಮಾರಾಟಗಾರರಿಗೆ ಆಹ್ವಾನ

    September 25, 2026

    ತುಮಕೂರು: ಗಣೇಶ ವಿಸರ್ಜನೆ ವೇಳೆ ಸಿಂಹಾದ್ರಿ ಹತ್ಯೆ – ಸಂತ್ರಸ್ತ ಕುಟುಂಬಕ್ಕೆ ಸಿಪಿಐ(ಎಂ), ಸಿಐಟಿಯು ಹಾಗೂ ಪಿಯುಸಿಎಲ್ ನಿಯೋಗದಿಂದ ಸಾಂತ್ವನ

    September 25, 2026

    ದಲಿತ ಯುವಕ ಸಿಂಹಾದ್ರಿ ಹತ್ಯೆ: ಆರೋಪಿಗಳ ಬಂಧನಕ್ಕೆ  ವಿವಿಧ ಸಂಘಟನೆಗಳಿಂದ ಮನವಿ

    September 24, 2026

    Leave A Reply Cancel Reply

    Our Picks

    ಕಾವೇರಿ ಜಲ ವಿವಾದ: CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ

    September 24, 2026

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್

    September 23, 2026

    ಗಣೇಶೋತ್ಸವ ಅನ್ನದಾನದ ವೇಳೆ ಕುದಿಯುತ್ತಿದ್ದ ಸಾಂಬಾರ್‌ ಪಾತ್ರೆಗೆ ಬಿದ್ದು ಮಹಿಳೆ ದಾರುಣ ಸಾವು

    September 22, 2026

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಪವಿತ್ರಾ ಗೌಡ ಜಾಮೀನು ಅರ್ಜಿ ವಜಾಗೊಳಿಸಿದ ಕೋರ್ಟ್!

    September 27, 2026

    ಬೆಂಗಳೂರು:  ಚರ್ಚೆಗೆ ಗ್ರಾಸವಾಗಿರುವ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ವಾಸ ಅನುಭವಿಸುತ್ತಿರುವ ನಟ ದರ್ಶನ್‌ ಅವರ ಗೆಳತಿ ಹಾಗೂ…

    ಮರಗಳ ಮಾರಣಹೋಮದಿಂದ ಮಳೆ ಕೊರತೆ: ನ್ಯಾ.ಜಯಂತ್ ಕುಮಾರ್ ಕಳವಳ

    September 27, 2026

    CEC ಜ್ಞಾನೇಶ್ ಕುಮಾರ್‌ರನ್ನು ತಕ್ಷಣ ವಜಾಗೊಳಿಸಿ, ಕ್ರಿಮಿನಲ್ ಕೇಸ್ ದಾಖಲಿಸಿ: ರಾಷ್ಟ್ರಪತಿಗೆ ಸಿದ್ದರಾಮಯ್ಯ ಆಗ್ರಹ

    September 26, 2026

    ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜನೆ ಆರೋಪ: ಬಿಜೆಪಿ ಶಾಸಕ ಮುನಿರತ್ನಗೆ ಯುವಕನಿಂದ ತರಾಟೆ!

    September 26, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.