ಬೆಂಗಳೂರು: ರಾಜ್ಯದಲ್ಲಿ ಭಾರೀ ಸಂಚಲನ ಮೂಡಿಸಿದ್ದ ನಕಲಿ ಔಷಧ ತಯಾರಿಕೆ ಮತ್ತು ಮಾರಾಟ ಜಾಲದ ಪ್ರಮುಖ ಕಿಂಗ್‌ಪಿನ್ ಪ್ರಶಾಂತ್ ರಂಜನ್ ಬಾಬು ಅವರನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ) ಬಂಧಿಸಿದೆ.
ರಾಮನಗರದ ದೊಡ್ಡೇರಿ ಫಾರ್ಮ್‌ಹೌಸ್ ನಲ್ಲಿ ಪತ್ತೆಯಾಗಿದ್ದ ಈ ನಕಲಿ ಔಷಧ ದಂಧೆಯ ತನಿಖೆ ವೇಳೆ ಆತ ವಿದೇಶಕ್ಕೆ ಪರಾರಿಯಾಗಿದ್ದು, ಅಜರ್ ಬೈಜಾನ್ ನಲ್ಲಿ ತಲೆಮರೆಸಿಕೊಂಡಿದ್ದ.
ಆತನ ವಿರುದ್ಧ ಈಗಾಗಲೇ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿತ್ತು. ವೀಸಾ ಅವಧಿ ಮುಗಿದ ಹಿನ್ನೆಲೆಯಲ್ಲಿ ಅಜರ್ ಬೈಜಾನ್ ನಿಂದ ಬೆಂಗಳೂರಿಗೆ ವಿಮಾನದಲ್ಲಿ ಮರಳುತ್ತಿದ್ದ ವೇಳೆ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಧಿಕಾರಿಗಳು ಆತನನ್ನು ವಶಕ್ಕೆ ಪಡೆದಿದ್ದಾರೆ.
ಈ ನಕಲಿ ಔಷಧ ಜಾಲದ ವಾರ್ಷಿಕ ವಹಿವಾಟು ಸುಮಾರು 15 ಕೋಟಿ ರೂ. ಇತ್ತು ಎನ್ನಲಾಗಿದ್ದು, ಪೊಲೀಸರು ತೀವ್ರ ವಿಚಾರಣೆ ಮುಂದುವರಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
