ಹುಬ್ಬಳ್ಳಿ: 2013ರ ರೈಲು ತಡೆ ಪ್ರತಿಭಟನಾ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ರೈತ ಸಂಘ ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ಹುಬ್ಬಳ್ಳಿ ರೈಲ್ವೆ ಪೊಲೀಸರು ಬಂಧಿಸಿದ್ದಾರೆ.
ಕಳಸಾ ಬಂಡೂರಿ ಯೋಜನೆ ಜಾರಿಗೆ ಆಗ್ರಹಿಸಿ 2013ರಲ್ಲಿ ನಡೆಸಿದ್ದ ರೈಲು ತಡೆ ಹೋರಾಟದ ಹಿನ್ನೆಲೆಯಲ್ಲಿ ಕೋರ್ಟ್ ವಾರೆಂಟ್ ಜಾರಿಯಾಗಿತ್ತು. ಸೋಮವಾರ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಸುದ್ದಿಗೋಷ್ಠಿ ಹಾಗೂ ಪ್ರತಿಭಟನೆಯಲ್ಲಿ ಭಾಗವಹಿಸಲು ತೆರಳಿದ್ದ ವೇಳೆ ಶಿರಸಿ ಪೊಲೀಸರ ಸಹಕಾರದೊಂದಿಗೆ ಅವರನ್ನು ವಶಕ್ಕೆ ಪಡೆಯಲಾಯಿತು.
ಬಂಧನದ ನಂತರ ಕೋಡಿಹಳ್ಳಿ ಅವರನ್ನು ಹುಬ್ಬಳ್ಳಿಗೆ ಕರೆತಂದು ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ವಿಚಾರಣೆ ನಡೆಸಿದ ನ್ಯಾಯಾಲಯವು ಅವರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
