nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೊರಟಗೆರೆಯಲ್ಲಿ ಪ್ರಜಾ ಸೇವಾ ಅಭಿಯಾನ | 75 ಅರ್ಜಿಗಳ ಸ್ವೀಕಾರ: ಕಚೇರಿಗೆ ಅಲೆಯುವುದನ್ನು ತಪ್ಪಿಸಲು ಕಾರ್ಯಕ್ರಮ: ಡಾ.ತಿಪ್ಪೇಸ್ವಾಮಿ

    September 29, 2026

    ಪೌತಿ ಖಾತೆ ಆಂದೋಲನಕ್ಕೆ ಚುರುಕು: ಹಳ್ಳಿ ಹಳ್ಳಿಗೆ ತೆರಳಿ ಅರಿವು ಮೂಡಿಸುತ್ತಿರುವ ತಹಶೀಲ್ದಾರ್ ಮಂಜುನಾಥ್ ಕೆ.

    September 29, 2026

    ಮಹಾ ಕುಂಭಾಭಿಷೇಕ ಧಾರ್ಮಿಕ ಕಾರ್ಯಕ್ರಮಕ್ಕೆ ಸಿದ್ದರಬೆಟ್ಟದ ಶ್ರೀಗಳಿಂದ ಚಾಲನೆ

    September 29, 2026
    Facebook Twitter Instagram
    ಟ್ರೆಂಡಿಂಗ್
    • ಕೊರಟಗೆರೆಯಲ್ಲಿ ಪ್ರಜಾ ಸೇವಾ ಅಭಿಯಾನ | 75 ಅರ್ಜಿಗಳ ಸ್ವೀಕಾರ: ಕಚೇರಿಗೆ ಅಲೆಯುವುದನ್ನು ತಪ್ಪಿಸಲು ಕಾರ್ಯಕ್ರಮ: ಡಾ.ತಿಪ್ಪೇಸ್ವಾಮಿ
    • ಪೌತಿ ಖಾತೆ ಆಂದೋಲನಕ್ಕೆ ಚುರುಕು: ಹಳ್ಳಿ ಹಳ್ಳಿಗೆ ತೆರಳಿ ಅರಿವು ಮೂಡಿಸುತ್ತಿರುವ ತಹಶೀಲ್ದಾರ್ ಮಂಜುನಾಥ್ ಕೆ.
    • ಮಹಾ ಕುಂಭಾಭಿಷೇಕ ಧಾರ್ಮಿಕ ಕಾರ್ಯಕ್ರಮಕ್ಕೆ ಸಿದ್ದರಬೆಟ್ಟದ ಶ್ರೀಗಳಿಂದ ಚಾಲನೆ
    • ಕೋಟಗುಡ್ಡ ಸಹನಾ ಶಾಲೆಗೆ “ಪರಿಸರ ಶಾಲಾ ಪ್ರಶಸ್ತಿ”
    • ಭಗತ್ ಸಿಂಗ್‌ ರವರ 119ನೇ ಜನ್ಮ ದಿನ | ಭಗತ್ ಸಿಂಗ್ ಕನಸಿನ ಭಾರತ ಕಟ್ಟಲು ಮುಂದೆ ಬನ್ನಿ: ಲಕ್ಕಪ್ಪ
    • ಮಧುಗಿರಿ: ನೇರಳೆಕೆರೆ (ಗೇಟು) ಅಂಗನವಾಡಿ ಕೇಂದ್ರದಲ್ಲಿ ಪೋಷಣೆ ಮಾಸಾಚರಣೆ ಮತ್ತು ಸೀಮಂತ ಕಾರ್ಯಕ್ರಮ
    • “ನಮ್ಮ ಅಂಗನವಾಡಿ, ನಮ್ಮ ಜವಾಬ್ದಾರಿ”: ಮಲ್ಲಪ್ಪನಹಳ್ಳಿಯಲ್ಲಿ ವಿಜೃಂಭಣೆಯಿಂದ ಜರುಗಿದ ಪೋಷಣ್ ಅಭಿಯಾನ ಕಾರ್ಯಕ್ರಮ
    • ಕೇಂದ್ರ, ರಾಜ್ಯ ಸರ್ಕಾರಗಳ ವಿರುದ್ಧ ತುಮಕೂರಿನಲ್ಲಿ ರೈತರ ಬೃಹತ್ ಪ್ರತಿಭಟನೆ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಭಗತ್ ಸಿಂಗ್‌ ರವರ 119ನೇ ಜನ್ಮ ದಿನ | ಭಗತ್ ಸಿಂಗ್ ಕನಸಿನ ಭಾರತ ಕಟ್ಟಲು ಮುಂದೆ ಬನ್ನಿ: ಲಕ್ಕಪ್ಪ
    ತುಮಕೂರು September 29, 2026

    ಭಗತ್ ಸಿಂಗ್‌ ರವರ 119ನೇ ಜನ್ಮ ದಿನ | ಭಗತ್ ಸಿಂಗ್ ಕನಸಿನ ಭಾರತ ಕಟ್ಟಲು ಮುಂದೆ ಬನ್ನಿ: ಲಕ್ಕಪ್ಪ

    By Ganesh TumkuruSeptember 29, 2026No Comments2 Mins Read
    bhagat sing

    ತುಮಕೂರು: ಮಹಾನ್ ಕ್ರಾಂತಿಕಾರಿ ಭಗತ್ ಸಿಂಗ್‌ ರವರ 119ನೇ ಜನ್ಮ ದಿನವನ್ನು ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಶನ್ (AIDSO) ವತಿಯಿಂದ ನಗರದ ಸರ್ವೋದಯ ಮೈದಾನ, ಹೈಸ್ಕೂಲ್ ಮೈದಾನ ಹಾಗೂ ಟೌನ್ ಹಾಲ್ ವೃತ್ತ ಸೇರಿದಂತೆ ವಿವಿಧ ಶಾಲಾ–ಕಾಲೇಜುಗಳು ಮತ್ತು ಹಳ್ಳಿಗಳಲ್ಲಿ ಅತ್ಯಂತ ಶ್ರದ್ಧಾ–ಭಕ್ತಿಯಿಂದ ಆಚರಿಸಲಾಯಿತು. ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಭಗತ್ ಸಿಂಗ್‌ ರಿಗೆ ಗೌರವ ನಮನ ಸಲ್ಲಿಸಿದರು.

    ಈ ಸಂದರ್ಭದಲ್ಲಿ ಮಾತನಾಡಿದ AIDSO ಜಿಲ್ಲಾ ಕಾರ್ಯದರ್ಶಿ ಲಕ್ಕಪ್ಪ, “ಭಗತ್ ಸಿಂಗ್ ಅವರು ಕ್ರಾಂತಿ ಮತ್ತು ಸ್ವಾತಂತ್ರ್ಯದ ಬಗೆಗಿನ ತಮ್ಮ ವಿಚಾರಗಳನ್ನು ಎಷ್ಟು ಪ್ರಬಲವಾಗಿ ಹರಡಿದ್ದರೆಂದರೆ, ಸಾವಿರಾರು ಯುವಕರು ಭಗತ್ ಸಿಂಗ್ ಹುತಾತ್ಮರಾದ ನಂತರವೂ ಅವರ ಆಶಯವನ್ನು ಈಡೇರಿಸಲು ಪ್ರಾಣತ್ಯಾಗಕ್ಕೂ ಸಿದ್ಧರಾಗಿ ಬೀದಿಗಿಳಿದರು” ಎಂದು ಹೇಳಿದರು.

    ಮುಂದುವರಿದು ಮಾತನಾಡಿದ ಅವರು, “ಸ್ವಾತಂತ್ರ್ಯವೆಂದರೆ ಕೇವಲ ಅಧಿಕಾರ ಬದಲಾವಣೆಯಲ್ಲ; ಪ್ರತಿಯೊಬ್ಬರಿಗೂ ಅನ್ನ ಬೆಳೆಯುವ ರೈತನ ಕುಟುಂಬ ಹಸಿವಿನಿಂದ ಸಾಯುವುದು, ವಿಶ್ವಕ್ಕೆ ಬಟ್ಟೆ ನೀಡುವ ನೇಕಾರನ ಮಕ್ಕಳಿಗೆ ಉಡಲು ಸೂಕ್ತ ಬಟ್ಟೆಯಿಲ್ಲದಿರುವುದು, ಭವ್ಯ ಅರಮನೆಗಳನ್ನು ಕಟ್ಟುವ ಶ್ರಮಿಕರು ಕೊಳಗೇರಿಗಳಲ್ಲಿ ಜೀವಿಸುವುದು ನಿಜವಾದ ಸ್ವಾತಂತ್ರ್ಯವಲ್ಲ. ಒಂದೆಡೆ ಶ್ರಮಿಕರ ಶೋಷಣೆಯಾದರೆ, ಇನ್ನೊಂದೆಡೆ ಬಂಡವಾಳಶಾಹಿಗಳು ತಮ್ಮ ಭೋಗಜೀವನಕ್ಕೆ ಕೋಟ್ಯಂತರ ರೂಪಾಯಿ ವೆಚ್ಚ ಮಾಡುತ್ತಿದ್ದಾರೆ. ಇಂತಹ ಭೀಕರ ಅಸಮಾನತೆ ಮತ್ತು ಮಾನವನಿಂದ ಮಾನವನ ಶೋಷಣೆ ಇಲ್ಲದ ಸಮಾಜವನ್ನು ನಿರ್ಮಿಸುವುದೇ ನಿಜವಾದ ಸ್ವಾತಂತ್ರ್ಯ ಎಂದು ಭಗತ್ ಸಿಂಗ್ ಹೇಳಿದ್ದರು,” ಎಂದು ವಿವರಿಸಿದರು.

    “ಆದರೆ ಇಂದು ಭಾರತದಲ್ಲಿ ಅವರ ಕನಸು ಇನ್ನೂ ಈಡೇರಿಲ್ಲ. ಹಸಿವಿನಿಂದ ಪ್ರಾಣ ಬಿಡುವ ಮಕ್ಕಳು, ಮಹಿಳೆಯರ ಮೇಲಿನ ನಿರಂತರ ದೌರ್ಜನ್ಯ ಹಾಗೂ ರೈತರ ಆತ್ಮಹತ್ಯೆಗಳು ಇಂದಿಗೂ ಮುಂದುವರಿದಿವೆ. ಇಂತಹ ಅನ್ಯಾಯಗಳ ವಿರುದ್ಧ ಹೋರಾಡಲು ಮತ್ತು ಭಗತ್ ಸಿಂಗ್‌ರ ಕನಸಿನ ಭಾರತವನ್ನು ಕಟ್ಟಲು ಯುವಜನರು ಹಾಗೂ ವಿದ್ಯಾರ್ಥಿಗಳು ಒಗ್ಗೂಡಿ ಮುಂದೆ ಬರಬೇಕು,” ಎಂದು ಅವರು ಕರೆ ನೀಡಿದರು.

    ಈ ಸಂದರ್ಭದಲ್ಲಿ AIDSO ನ ಪದಾಧಿಕಾರಿಗಳಾದ, ಸೈಯದ್, ಹುಸನಪ್ಪ, ಪ್ರದ್ಯುಮ್ನ , ಯಶವಂತ, ಉಮೇಶ್, ವೃಷಭ ಹಾಗೂ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

    Ganesh Tumkuru
    • Website

    Related Posts

    ಕೇಂದ್ರ, ರಾಜ್ಯ ಸರ್ಕಾರಗಳ ವಿರುದ್ಧ ತುಮಕೂರಿನಲ್ಲಿ ರೈತರ ಬೃಹತ್ ಪ್ರತಿಭಟನೆ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ

    September 28, 2026

    ತುಮಕೂರು ದಸರಾ ಉತ್ಸವ: ಆಹಾರ ಮಳಿಗೆಗಾಗಿ ಅರ್ಜಿ ಆಹ್ವಾನ

    September 28, 2026

    ಮರಗಳ ಮಾರಣಹೋಮದಿಂದ ಮಳೆ ಕೊರತೆ: ನ್ಯಾ.ಜಯಂತ್ ಕುಮಾರ್ ಕಳವಳ

    September 27, 2026

    Leave A Reply Cancel Reply

    Our Picks

    ವೈನ್‌ ಶಾಪ್‌ ಗೆ ನುಗ್ಗಿ ಕಂಠಪೂರ್ತಿ ಮದ್ಯ ಕುಡಿದು ಅಲ್ಲೇ ನಿದ್ರೆಗೆ ಜಾರಿದ ಕೋತಿ!

    September 27, 2026

    ಕಾವೇರಿ ಜಲ ವಿವಾದ: CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ

    September 24, 2026

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್

    September 23, 2026

    ಗಣೇಶೋತ್ಸವ ಅನ್ನದಾನದ ವೇಳೆ ಕುದಿಯುತ್ತಿದ್ದ ಸಾಂಬಾರ್‌ ಪಾತ್ರೆಗೆ ಬಿದ್ದು ಮಹಿಳೆ ದಾರುಣ ಸಾವು

    September 22, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಕೊರಟಗೆರೆಯಲ್ಲಿ ಪ್ರಜಾ ಸೇವಾ ಅಭಿಯಾನ | 75 ಅರ್ಜಿಗಳ ಸ್ವೀಕಾರ: ಕಚೇರಿಗೆ ಅಲೆಯುವುದನ್ನು ತಪ್ಪಿಸಲು ಕಾರ್ಯಕ್ರಮ: ಡಾ.ತಿಪ್ಪೇಸ್ವಾಮಿ

    September 29, 2026

    ಕೊರಟಗೆರೆ: ಸಾರ್ವಜನಿಕರು ಕಚೇರಿಗಳಿಗೆ ಅಲೆಯ ಬಾರದು ಎನ್ನವ ಉದ್ದೇಶದಿಂದ ಸರ್ಕಾರ ಪ್ರಜಾ ಸೇವಾ ಎನ್ನವ ಕಾರ್ಯಕ್ರಮ ಆಯೋಜನೆ ಮಾಡಿದ್ದು, ಇದರ…

    ಪೌತಿ ಖಾತೆ ಆಂದೋಲನಕ್ಕೆ ಚುರುಕು: ಹಳ್ಳಿ ಹಳ್ಳಿಗೆ ತೆರಳಿ ಅರಿವು ಮೂಡಿಸುತ್ತಿರುವ ತಹಶೀಲ್ದಾರ್ ಮಂಜುನಾಥ್ ಕೆ.

    September 29, 2026

    ಮಹಾ ಕುಂಭಾಭಿಷೇಕ ಧಾರ್ಮಿಕ ಕಾರ್ಯಕ್ರಮಕ್ಕೆ ಸಿದ್ದರಬೆಟ್ಟದ ಶ್ರೀಗಳಿಂದ ಚಾಲನೆ

    September 29, 2026

    ಕೋಟಗುಡ್ಡ ಸಹನಾ ಶಾಲೆಗೆ “ಪರಿಸರ ಶಾಲಾ ಪ್ರಶಸ್ತಿ”

    September 29, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.