ತುಮಕೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮವು ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ಕಲ್ಪಿಸಲು ಪರಿಶಿಷ್ಟ ಪಂಗಡದ ಫಲಾಪೇಕ್ಷಿಗಳಿಂದ ಆನ್ಲೈನ್ ಅರ್ಜಿ ಆಹ್ವಾನಿಸಿದೆ.
ಸ್ವಯಂ ಉದ್ಯೋಗ ಕಾರ್ಯಕ್ರಮದಡಿ ನೇರಸಾಲ, ಹೈನುಗಾರಿಕೆ, ಸ್ವಾವಲಂಬಿ ಸಾರಥಿ, ಫಾಸ್ಟ್ ಫುಡ್ ಟ್ರಕ್ ಟೈಲರ್ / ಮೊಬೈಲ್ ಕಿಚನ್ ಫುಡ್ ಕಿಯೋಸ್ಕ್, ಉದ್ಯಮಶೀಲತಾ ಅಭಿವೃದ್ಧಿ, ಮೈಕ್ರೋ ಕ್ರೆಡಿಟ್(ಪ್ರೇರಣಾ), ಗಂಗಾ ಕಲ್ಯಾಣ, ಭೂ ಒಡೆತನ ಯೋಜನೆಯಡಿ ಸಾಲ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿದಾರರು ವ್ಯವಸಾಯ ಉದ್ದೇಶಕ್ಕೆ 18 ವರ್ಷದಿಂದ 60 ಹಾಗೂ ವಾಹನ, ಸ್ವಯಂ ಉದ್ಯೋಗ ಉದ್ದೇಶಗಳಿಗೆ 18 ರಿಂದ 50 ವರ್ಷದೊಳಗಿನವರಾಗಿರಬೇಕು. ಕೊಳವೆಬಾವಿ ಸೌಲಭ್ಯಕ್ಕೆ ಯಾವುದೇ ವಯೋಮಿತಿ ಇರುವುದಿಲ್ಲ. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನವು ಗ್ರಾಮೀಣ ಪ್ರದೇಶದಲ್ಲಿ 1,50,000 ರೂ. ಹಾಗೂ ನಗರ ಪ್ರದೇಶದಲ್ಲಿ 2,00,000 ರೂ. ಮಿತಿಯೊಳಿರಬೇಕು.
ಅರ್ಜಿದಾರರ ಕುಟುಂಬದ ಯಾವುದೇ ಸದಸ್ಯರು ಸರ್ಕಾರಿ / ಅರೆ ಸರ್ಕಾರಿ ಸಂಸ್ಥೆಯಲ್ಲಿ ನೌಕರಿಯಲಿರಬಾರದು ಹಾಗೂ ಈ ಹಿಂದೆ ನಿಗಮದಿಂದ ಯಾವುದೇ ಸೌಲಭ್ಯ ಪಡೆದಿರಬಾರದು. ವಾಹನಗಳಿಗೆ ಆರ್ಥಿಕ ನೆರವು ಸೌಲಭ್ಯಕ್ಕಾಗಿ ಡ್ರೈವಿಂಗ್ ಲೈಸೆನ್ಸ್ ನೊಂದಿಗೆ ಬ್ಯಾಡ್ಜ್ ಹೊಂದಿರಬೇಕು. ಮಾಹಿತಿಗಾಗಿ 0816-2280165 ಸಂಪರ್ಕಿಸಬಹುದು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
