ಫೈನಾನ್ಸ್ ಮತ್ತು ಕಾಮರ್ಸ್ ವಿಭಾಗದಲ್ಲಿ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶವೊಂದು ದೊರೆತಿದೆ. ರಾಮನ್ ಕಾಂತ್ ಮುಂಜಾಲ್ ಫೌಂಡೇಷನ್ ಹಾಗೂ ಹೀರೋ ಫಿನ್‌ಕಾರ್ಪ್ ಸಹಯೋಗದಲ್ಲಿ 2026-27ನೇ ಸಾಲಿನ ರಾಮನ್ ಕಾಂತ್ ಮುಂಜಾಲ್ ಸ್ಕಾಲರ್‌ಶಿಪ್ ಘೋಷಿಸಲಾಗಿದೆ.ಈ ಸ್ಕಾಲರ್‌ಶಿಪ್ ಅಡಿಯಲ್ಲಿ ಅರ್ಹ ವಿದ್ಯಾರ್ಥಿಗಳಿಗೆ ಮೂರು ವರ್ಷಗಳವರೆಗೆ ಪ್ರತಿ ವರ್ಷ ಗರಿಷ್ಠ ₹5.5 ಲಕ್ಷದವರೆಗೆ ಆರ್ಥಿಕ ನೆರವು ನೀಡಲಾಗುತ್ತದೆ. ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಯಾರು ಅರ್ಜಿ ಸಲ್ಲಿಸಬಹುದು?
ಬಿಬಿಎ, ಬಿಎಫ್‌ಐಎ, ಬಿ.ಕಾಂ, ಬ್ಯಾಚುಲರ್ ಆಫ್ ಮ್ಯಾನೇಜ್‌ಮೆಂಟ್ ಸ್ಟಡೀಸ್ (ಬಿಎಂಎಸ್), ಇಂಟಿಗ್ರೇಟೆಡ್ ಪ್ರೋಗ್ರಾಂ ಇನ್ ಮ್ಯಾನೇಜ್‌ಮೆಂಟ್ (ಐಪಿಎಂ), ಬಿಎ ಅರ್ಥಶಾಸ್ತ್ರ ಹಾಗೂ ಬ್ಯಾಚುಲರ್ ಇನ್ ಬಿಸಿನೆಸ್ ಸ್ಟಡೀಸ್ (ಬಿಬಿಎಸ್) ಸೇರಿದಂತೆ ವಿವಿಧ ಕೋರ್ಸ್‌ಗಳ ಮೊದಲ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.ಅರ್ಜಿದಾರರು 10ನೇ ಹಾಗೂ 12ನೇ ತರಗತಿಯಲ್ಲಿ ಕನಿಷ್ಠ ಶೇ.80 ಅಂಕಗಳನ್ನು ಪಡೆದಿರಬೇಕು. ವಿದ್ಯಾರ್ಥಿಯ ಪೋಷಕರ ವಾರ್ಷಿಕ ಒಟ್ಟು ಆದಾಯವು ಎಲ್ಲ ಮೂಲಗಳಿಂದ ₹6 ಲಕ್ಷ ಮೀರಿರಬಾರದು. ಭಾರತೀಯ ಪ್ರಜೆಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ.
ಹೀರೋ ಫಿನ್‌ಕಾರ್ಪ್, ರಾಮನ್ ಕಾಂತ್ ಮುಂಜಾಲ್ ಫೌಂಡೇಷನ್ ಹಾಗೂ ಬಡಿ4ಸ್ಟಡಿ ಸಂಸ್ಥೆಗಳ ಉದ್ಯೋಗಿಗಳು ಅಥವಾ ಗುತ್ತಿಗೆ ನೌಕರರ ಮಕ್ಕಳು ಈ ಸ್ಕಾಲರ್‌ಶಿಪ್‌ಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುವುದಿಲ್ಲ.ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್‌ನಲ್ಲಿ ಆದ್ಯತೆ ನೀಡಲಾಗುತ್ತದೆ. ವಿಶೇಷವಾಗಿ ರೈತರು, ಮನೆಕೆಲಸಗಾರರು ಹಾಗೂ ಆರ್ಥಿಕವಾಗಿ ದುರ್ಬಲ ಕುಟುಂಬಗಳ ಮಕ್ಕಳಿಗೆ ಆದ್ಯತೆ ನೀಡಲಾಗುತ್ತದೆ ಎಂದು ತಿಳಿಸಲಾಗಿದೆ.
ಅಗತ್ಯ ದಾಖಲೆಗಳೇನು?
ಅರ್ಜಿ ಸಲ್ಲಿಸುವಾಗ ಇತ್ತೀಚಿನ ಪಾಸ್‌ಪೋರ್ಟ್ ಗಾತ್ರದ ಫೋಟೋ, ಕಾಲೇಜು ಪ್ರವೇಶಾತಿ ದಾಖಲೆ, ಪೋಷಕರ ಆದಾಯ ಪ್ರಮಾಣಪತ್ರ, SSLC ಅಂಕಪಟ್ಟಿ, PUC ಅಂಕಪಟ್ಟಿ, ಕಾಲೇಜು ಐಡಿ ಕಾರ್ಡ್ ಹಾಗೂ ಬ್ಯಾಂಕ್ ಪಾಸ್‌ಬುಕ್ ಸೇರಿದಂತೆ ಅಗತ್ಯ ದಾಖಲೆಗಳನ್ನು ಸಲ್ಲಿಸಬೇಕು.
ಅರ್ಹ ವಿದ್ಯಾರ್ಥಿಗಳು ಅಕ್ಟೋಬರ್ 15ರೊಳಗೆ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಬಡಿ4ಸ್ಟಡಿ ವೆಬ್‌ಸೈಟ್‌ನಲ್ಲಿರುವ ರಾಮನ್ ಕಾಂತ್ ಮುಂಜಾಲ್ ಸ್ಕಾಲರ್‌ಶಿಪ್ ಪುಟವನ್ನು ಬಳಸಬಹುದು.
ಇತ್ತೀಚಿನ ಪಾಸ್ಟ್ ಪೋರ್ಟ್ ಸೈಜಿನ ಫೋಟೋ, ಕಾಲೇಜು ಪ್ರವೇಶಾತಿ ದಾಖಲೆ, ಪೋಷಕರ ಆದಾಯ ಪ್ರಮಾಣಪತ್ರ, ಎಸ್ಸೆಸ್ಸೆಲ್ಸಿ, ಪಿಯುಸಿ ಅಂಕಪಟ್ಟಿ, ಕಾಲೇಜು ಐ.ಡಿ ಕಾರ್ಡ್, ಪಾಸ್ ಬುಕ್ ಸೇರಿ ಹಲವು ದಾಖಲೆಗಳನ್ನು ಸಲ್ಲಿಸಬೇಕು. ಅಭ್ಯರ್ಥಿಗಳು https://www.buddy4study.com/page/raman-kant-munjal-scholarships# ಗೆ ಭೇಟಿ ನೀಡಿ, ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಅಕ್ಟೋಬರ್ 15 ಕೊನೆಯ ದಿನ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
