nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬರಪೀಡಿತ ತುಮಕೂರು: ಸಾಲ ವಸೂಲಾತಿಯಲ್ಲಿ ಕಠಿಣ ಕ್ರಮ ಕೈಗೊಳ್ಳದಂತೆ ಮೈಕ್ರೋ ಫೈನಾನ್ಸ್‌ಗಳಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ

    October 9, 2026

    KSET ಪರೀಕ್ಷೆ ಸುಸೂತ್ರವಾಗಿ ನಡೆಸಲು ಅಗತ್ಯ ಸಿದ್ಧತೆ ಕೈಗೊಳ್ಳಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ

    October 9, 2026

    ಕರ್ನಾಟಕ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲು ಅಗತ್ಯ ಸಿದ್ಧತೆ ಕೈಗೊಳ್ಳಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ

    October 9, 2026
    Facebook Twitter Instagram
    ಟ್ರೆಂಡಿಂಗ್
    • ಬರಪೀಡಿತ ತುಮಕೂರು: ಸಾಲ ವಸೂಲಾತಿಯಲ್ಲಿ ಕಠಿಣ ಕ್ರಮ ಕೈಗೊಳ್ಳದಂತೆ ಮೈಕ್ರೋ ಫೈನಾನ್ಸ್‌ಗಳಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ
    • KSET ಪರೀಕ್ಷೆ ಸುಸೂತ್ರವಾಗಿ ನಡೆಸಲು ಅಗತ್ಯ ಸಿದ್ಧತೆ ಕೈಗೊಳ್ಳಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ
    • ಕರ್ನಾಟಕ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲು ಅಗತ್ಯ ಸಿದ್ಧತೆ ಕೈಗೊಳ್ಳಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ
    • ಸ್ಪರ್ಧಾತ್ಮಕ ಯುಗದಲ್ಲಿ ಗೆಲುವು ಸಾಧಿಸಬೇಕಾದರೆ ಸ್ಪರ್ಧೆ ಮಾಡಲೇ ಬೇಕು: ಮಾಜಿ ಶಾಸಕ  ಬಿ.ವಿ.ರಾಮಸ್ವಾಮಿಗೌಡ
    • ಪದವಿ ವಿದ್ಯಾರ್ಥಿಗಳಿಗೆ ಭರ್ಜರಿ ಅವಕಾಶ; ₹5.5 ಲಕ್ಷ ಸ್ಕಾಲರ್‌ ಶಿಪ್‌ ಗೆ ಅರ್ಜಿ ಆಹ್ವಾನ!
    • ಹಾಳಾದ ದೇವರ ಫೋಟೋಗಳನ್ನು ಏನು ಮಾಡಬೇಕು? ಮರದ ಕೆಳಗೆ, ದೇವಸ್ಥಾನದ ಬಳಿ ಇಡುವ ಮುನ್ನ ಈ ವಿಷಯ ತಿಳಿಯಿರಿ!
    • ರೇಣುಕಾಸ್ವಾಮಿ ಕೇಸ್‌ ನಲ್ಲಿ ಟ್ವಿಸ್ಟ್‌; ಪ್ರದೋಶ್‌ ಅಪ್ರೂವರ್‌ ವಿಚಾರದಲ್ಲಿ ಸುಪ್ರೀಂ ಕೋರ್ಟ್‌ ಹೇಳಿದ್ದೇನು?
    • ರೈಲ್ವೆಯಲ್ಲಿ 3,477 ಉದ್ಯೋಗ ಅವಕಾಶ; ಪದವೀಧರರಿಗೆ ಭರ್ಜರಿ ಚಾನ್ಸ್!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬರಪೀಡಿತ ತುಮಕೂರು: ಸಾಲ ವಸೂಲಾತಿಯಲ್ಲಿ ಕಠಿಣ ಕ್ರಮ ಕೈಗೊಳ್ಳದಂತೆ ಮೈಕ್ರೋ ಫೈನಾನ್ಸ್‌ಗಳಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ
    Uncategorized October 9, 2026

    ಬರಪೀಡಿತ ತುಮಕೂರು: ಸಾಲ ವಸೂಲಾತಿಯಲ್ಲಿ ಕಠಿಣ ಕ್ರಮ ಕೈಗೊಳ್ಳದಂತೆ ಮೈಕ್ರೋ ಫೈನಾನ್ಸ್‌ಗಳಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ

    By Ganesh TumkuruOctober 9, 2026No Comments1 Min Read
    shubha kalyan

    ತುಮಕೂರು: ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಿರುವ ಹಿನ್ನೆಲೆಯಲ್ಲಿ, ಆರ್ಥಿಕ ಸಂಕಷ್ಟದಲ್ಲಿರುವ ರೈತರಿಂದ ಮೈಕ್ರೋ ಫೈನಾನ್ಸ್ ಹಾಗೂ ವಿವಿಧ ಹಣಕಾಸು ಸಂಸ್ಥೆಗಳು ಸಾಲ ವಸೂಲಾತಿ ಸಂದರ್ಭದಲ್ಲಿ ಕಠಿಣ ಕ್ರಮ ಕೈಗೊಳ್ಳಬಾರದು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದಾರೆ.

    ಅಕ್ಟೋಬರ್ 06, 2026ರಂದು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ತುಮಕೂರಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಮೈಕ್ರೋ ಫೈನಾನ್ಸ್ ಹಾಗೂ ವಿವಿಧ ಹಣಕಾಸು ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ನಡೆದ ಪರಿಶೀಲನಾ ಸಭೆಯಲ್ಲಿ ಅವರು ಈ ಸೂಚನೆಗಳನ್ನು ನೀಡಿದರು.

    ತುಮಕೂರು ಜಿಲ್ಲೆಯನ್ನು 2026ರ ಆಗಸ್ಟ್ 27ರಿಂದಲೇ ಬರಪೀಡಿತ ಜಿಲ್ಲೆ ಎಂದು ಘೋಷಿಸಲಾಗಿದೆ. ಇದರ ಮುಂದುವರಿದ ಭಾಗವಾಗಿ ಸೆಪ್ಟೆಂಬರ್ 10ರಂದು ನಡೆದ 177ನೇ ವಿಶೇಷ ಎಸ್ಎಲ್ಬಿಸಿ (SLBC) ಸಭೆಯಲ್ಲಿ, ಬರಪೀಡಿತ ಸಾಲಗಾರರಿಗೆ ಆರ್ಬಿಐ (RBI) ಮಾರ್ಗಸೂಚಿಗಳಂತೆ ಸಾಲ ಮರುರಚನೆ, ಮೋರಟೋರಿಯಂ ಹಾಗೂ ಮರುಪಾವತಿ ಅವಧಿ ವಿಸ್ತರಣೆಯಂತಹ ಅಗತ್ಯ ಪರಿಹಾರ ಕ್ರಮಗಳನ್ನು ಕೈಗೊಳ್ಳಲು ಶಿಫಾರಸು ಮಾಡಲಾಗಿತ್ತು.

    ಬರದಿಂದ ತತ್ತರಿಸಿ ಕಷ್ಟದಲ್ಲಿರುವ ರೈತರ ಆರ್ಥಿಕ ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿ, ಸಾಲ ವಸೂಲಾತಿ ಪ್ರಕ್ರಿಯೆಯಲ್ಲಿ ಹಣಕಾಸು ಸಂಸ್ಥೆಗಳು ಕಡ್ಡಾಯವಾಗಿ ಮಾನವೀಯ ಹಾಗೂ ನಿಯಮಬದ್ಧ ಕ್ರಮಗಳನ್ನು ಅನುಸರಿಸಬೇಕು.

    ಸಾಲ ವಸೂಲಾತಿಯ ಹೆಸರಿನಲ್ಲಿ ರೈತರಿಗೆ ಯಾವುದೇ ರೀತಿಯ ಅನಗತ್ಯ ಮಾನಸಿಕ ಅಥವಾ ಆರ್ಥಿಕ ಒತ್ತಡ ಉಂಟಾಗದಂತೆ ಎಚ್ಚರಿಕೆ ವಹಿಸಬೇಕು. ಸರ್ಕಾರದ ನಿರ್ದೇಶನಗಳು ಹಾಗೂ ಅನ್ವಯವಾಗುವ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು.  ಸಾಲ ವಸೂಲಾತಿಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಬಂದಿರುವ ದೂರುಗಳನ್ನು ಕೂಲಂಕಷವಾಗಿ ಪರಿಶೀಲಿಸಿ, ಅವುಗಳನ್ನು ತ್ವರಿತವಾಗಿ ಪರಿಹರಿಸುವಂತೆ ಹಣಕಾಸು ಸಂಸ್ಥೆಗಳ ಪ್ರತಿನಿಧಿಗಳಿಗೆ ಸೂಚಿಸಲಾಗಿದೆ.

    ಸಭೆಯಲ್ಲಿ ಸಾಲ ವಸೂಲಾತಿ ಪ್ರಕ್ರಿಯೆ, ಬಡ್ಡಿ ದರಗಳು, ಸಾರ್ವಜನಿಕರಿಂದ ಸಲ್ಲಿಕೆಯಾಗಿರುವ ದೂರುಗಳು ಹಾಗೂ ನಿಯಮಗಳ ಪಾಲನೆ ಕುರಿತು ಸಮಗ್ರವಾಗಿ ಪರಿಶೀಲನೆ ನಡೆಸಲಾಯಿತು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

    Ganesh Tumkuru
    • Website

    Related Posts

    ಹಳೆಯ ಆತ್ಮವೇ? ಹೊಸ ಆತ್ಮವೇ? ವ್ಯಕ್ತಿಯ ಗುಣಗಳಿಂದ ಆತ್ಮದ ಪಯಣ ಗುರುತಿಸಬಹುದೇ?

    October 8, 2026

    ಬೆಂಗಳೂರಲ್ಲಿ ಬಿಡಾಡಿ ದನಗಳ ‘ಟೋಯಿಂಗ್‌ಗೆ’ ವಿಶೇಷ ವಾಹನ: ರಸ್ತೆಗೆ ಜಾನುವಾರು ಬಿಡುವವರಿಗೆ ಬಿಸಿ!

    October 6, 2026

    ಸಿಂಹಾದ್ರಿ ಹತ್ಯೆ ಪ್ರಕರಣ:  ದಲಿತ ಸಂಘಟನೆ ಮುಖಂಡರಿಂದ ಕುಟುಂಬಸ್ಥರ ಭೇಟಿ: ನ್ಯಾಯಕ್ಕಾಗಿ ಆಗ್ರಹ

    October 2, 2026

    Leave A Reply Cancel Reply

    Our Picks

    ನಾನಾ ಪಾಟೇಕರ್ ಆಸ್ತಿ–ಪಾಸ್ತಿ ಎಷ್ಟು ಗೊತ್ತಾ? ಅವರ ಕುಟುಂಬದ ಬಗ್ಗೆ ಇಲ್ಲಿದೆ ರಹಸ್ಯಕರ ಮಾಹಿತಿ!

    October 9, 2026

    ಹಿರಿಯ ನಟ ನಾನಾ ಪಾಟೇಕರ್ ನಿಧನ: ಪ್ರಧಾನಿ ಮೋದಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಿಂದ ಸಂತಾಪ

    October 8, 2026

    50 ಪೈಸೆ ನಾಣ್ಯ ಇನ್ನೂ ಮಾನ್ಯವೇ? RBI ನಿಯಮ ತಿಳಿದರೆ ಅಚ್ಚರಿಯಾಗುತ್ತೆ!

    October 6, 2026

    35 ವರ್ಷಗಳ ಬಳಿಕ ಮರಳಿ ಕುಟುಂಬ ಸೇರಿದ ಮಹಿಳೆ: ಪತ್ತೆಗೆ ಸುಳಿವು ನೀಡಿದ ಕೈಯಲ್ಲಿದ್ದ ಹಚ್ಚೆ!

    October 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    Uncategorized

    ಬರಪೀಡಿತ ತುಮಕೂರು: ಸಾಲ ವಸೂಲಾತಿಯಲ್ಲಿ ಕಠಿಣ ಕ್ರಮ ಕೈಗೊಳ್ಳದಂತೆ ಮೈಕ್ರೋ ಫೈನಾನ್ಸ್‌ಗಳಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ

    October 9, 2026

    ತುಮಕೂರು: ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಿರುವ ಹಿನ್ನೆಲೆಯಲ್ಲಿ, ಆರ್ಥಿಕ ಸಂಕಷ್ಟದಲ್ಲಿರುವ ರೈತರಿಂದ ಮೈಕ್ರೋ ಫೈನಾನ್ಸ್ ಹಾಗೂ ವಿವಿಧ ಹಣಕಾಸು ಸಂಸ್ಥೆಗಳು…

    KSET ಪರೀಕ್ಷೆ ಸುಸೂತ್ರವಾಗಿ ನಡೆಸಲು ಅಗತ್ಯ ಸಿದ್ಧತೆ ಕೈಗೊಳ್ಳಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ

    October 9, 2026

    ಕರ್ನಾಟಕ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲು ಅಗತ್ಯ ಸಿದ್ಧತೆ ಕೈಗೊಳ್ಳಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ

    October 9, 2026

    ಸ್ಪರ್ಧಾತ್ಮಕ ಯುಗದಲ್ಲಿ ಗೆಲುವು ಸಾಧಿಸಬೇಕಾದರೆ ಸ್ಪರ್ಧೆ ಮಾಡಲೇ ಬೇಕು: ಮಾಜಿ ಶಾಸಕ  ಬಿ.ವಿ.ರಾಮಸ್ವಾಮಿಗೌಡ

    October 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.