ಬಹುನಿರೀಕ್ಷಿತ ‘ಪಂಚ’ ರಾಜ್ಯಗಳ ಚುನಾವಣಾ ಫಲಿತಾಂಶ ಇಂದು ಹೊರಬೀಳಲಿದ್ದು, ಐದೂ ರಾಜ್ಯಗಳಲ್ಲಿ ಯಾವ ಪಕ್ಷ ಅಧಿಕಾರದ ಗದ್ದುಗೆ ಏರಲಿದೆ ಎಂಬುದರ ಬಗ್ಗೆ ತೀವ್ರ ಕುತೂಹಲ ಮೂಡಿದೆ. ಮತದಾರ ಪ್ರಭು ಯಾರಿಗೆ ಆಶೀರ್ವಾದ ಮಾಡಿದ್ದಾನೆಂಬುದು ಇಂದು ತಿಳಿದುಬರಲಿದೆ.
ಉತ್ತರಪ್ರದೇಶ, ಪಂಜಾಬ್, ಗೋವಾ, ಉತ್ತರಾಖಂಡ ಮತ್ತು ಮಣಿಪುರ ರಾಜ್ಯಗಳ ವಿಧಾನಸಭಾ ಚುನಾವಣೆಯ ಫಲಿತಾಂಶದ ತಾಜಾ ಮಾಹಿತಿಯನ್ನು ನಾವು ಇಲ್ಲಿ ನಿಮಗೆ ನೀಡಲಿದ್ದೇವೆ.
ಆರಂಭಿಕ ಟ್ರೆಂಡ್ ನ ಪ್ರಕಾರ ಪಂಜಾಬ್ನ ಮುಕೇರಿಯನ್ ವಿಧಾನಸಭಾ ಕ್ಷೇತ್ರದಲ್ಲಿ ಶಿರೋಮಣಿ ಅಕಾಲಿದಳ ಮುನ್ನಡೆ ಸಾಧಿಸಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.ವಿಧಾನಸಭಾ ಚುನಾವಣೆಯ ಫಲಿತಾಂಶದ ದಿನದಂದು ಮಣಿಪುರ ಸಿಎಂ ಎನ್.ಬಿರೇನ್ ಸಿಂಗ್ ಇಂಫಾಲ್ನ ಶ್ರೀ ಗೋವಿಂದಜೀ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು.
ಉತ್ತರಪ್ರದೇಶ ವಿಧಾನಸಭಾ ಚುನಾವಣೆಯನ್ನು ದೇಶದ ಮಿನಿ ಮಹಾಚುನಾವಣೆ ಎಂದು ಪರಿಗಣಿಸಲಾಗುತ್ತದೆ. ಉತ್ತರಪ್ರದೇಶ ಮತ್ತು ಮಣಿಪುರದಲ್ಲಿ ಬಿಜೆಪಿಗೆ ಸ್ಪಷ್ಟ ಗೆಲುವು ಸಿಗಲಿದೆ, ಪಂಜಾಬ್ನಲ್ಲಿ ಆಮ್ ಆದ್ಮಿ ಪಕ್ಷ ಕಮಾಲ್ ಮಾಡಿದರೆ, ಉತ್ತರಾಖಂಡ ಮತ್ತು ಗೋವಾದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಜಿದ್ದಾಜಿದ್ದಿನ ಪೈಪೋಟಿ ನಡೆಯಲಿದೆ ಎಂದು ಚುನಾವಣೋತ್ತರ ಮತದಾನ ಸಮೀಕ್ಷೆಗಳು ಭವಿಷ್ಯ ನುಡಿದಿವೆ.
ಹೀಗಾಗಿ ‘ಪಂಚ’ರಾಜ್ಯ ಚುನಾವಣೆಯಲ್ಲಿ ಮತದಾರ ಪ್ರಭು ಯಾರಿಗೆ ವಿಜಯಮಾಲೆ ಹಾಕಲಿದ್ದಾನೆಂಬುದು ತೀವ್ರ ಕುತೂಹಲ ಕೆರಳಿಸಿದೆ. 5 ರಾಜ್ಯಗಳ ಮತ ಎಣಿಕೆ ಪ್ರಾರಂಭವಾಗುತ್ತಿದ್ದಂತೆ, ಚುನಾವಣಾ ಆಯೋಗದ ಅಧಿಕೃತ ವೆಬ್ಸೈಟ್ https://eci.gov.in ನಲ್ಲಿ ಫಲಿತಾಂಶ ಲಭ್ಯವಿರುತ್ತವೆ.
#PunjabElections2022: ಪಂಜಾಬ್ ವಿಧಾನಸಭಾ ಫಲಿತಾಂಶ ಕೂಡ ಭಾರೀ ಕುತೂಹಲ ಕೆರಳಿಸಿದೆ. ಈಗಾಗಲೇ ಅಂಚೆ ಮತಗಳನ್ನು ಸಿಬ್ಬಂದಿ ಎಣಿಕೆ ಮಾಡುತ್ತಿದ್ದಾರೆ. ಗುರುದಾಸಪುರದಲ್ಲಿ ಅಂಚೆ ಮತಗಳ ಏಣಿಕೆಯಲ್ಲಿ ಬ್ಯುಸಿಯಾಗಿರುವ ಸಿಬ್ಬಂದಿಯನ್ನು ಕಾಣಬಹುದು.
GoaElections2022: ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರು ಚುನಾವಣಾ ಫಲಿತಾಂಶ ಹಿನ್ನೆಲೆ ಗುರುವಾರ ಶ್ರೀ ದತ್ತ ದೇವಸ್ಥಾನಕ್ಕೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು. ಗೋವಾ ಚುನಾವಣೆ ಮತ ಏಣಿಕೆ ಪ್ರಕ್ರಿಯೆ ಶುರುವಾಗಿದ್ದು, ಫಲಿತಾಂಶ ತೀವ್ರ ಕುತೂಹಲ ಕೆರಳಿಸಿದೆ.5 State Election Results 2022 Live Updates: ‘ಪಂಚ’ರಾಜ್ಯಗಳ ವಿಧಾನಸಭಾ ಚುನಾವಣೆ ಮತ ಎಣಿಕೆ ಆರಂಭವಾಗಿದೆ. ಉತ್ತರ ಪ್ರದೇಶ, ಉತ್ತರಾಖಂಡ್, ಮಣಿಪುರ, ಪಂಜಾಬ್, ಗೋವಾ ರಾಜ್ಯಗಳ ವಿಧಾನಸಭಾ ಚುನಾವಣೆಯ ಮತ ಎಣಿಕೆ ಆರಂಭವಾಗಿದ್ದು, ಅಂಚೆ ಮತಗಳನ್ನು ಸಿಬ್ಬಂದಿ ಎಣಿಕೆ ಮಾಡುತ್ತಿದ್ದಾರೆ.
ವರದಿ: ಆಂಟೋನಿ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB