ಚುನಾವಣಾ ಆಯೋಗದ ಮುಖ್ಯ ಆಯುಕ್ತ (CEC) ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ, ಶಿವಮೊಗ್ಗದಲ್ಲಿ ಕೇಂದ್ರ ರೈಲ್ವೆ ಇಲಾಖೆಯ ರಾಜ್ಯ ಖಾತೆ ಸಚಿವ ವಿ. ಸೋಮಣ್ಣ ಅವರ ಕಾರಿಗೆ ಯುವ ಕಾಂಗ್ರೆಸ್ ಹಾಗೂ ಎನ್ಎಸ್ಯುಐ (NSUI) ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ ಬಿಗಡಾಯಿಸಿದ ಘಟನೆ ವರದಿಯಾಗಿದೆ.
ಕೇಂದ್ರ ಸಚಿವ ವಿ. ಸೋಮಣ್ಣ ಅವರು ಶಿವಮೊಗ್ಗ ನಗರದ ಬಿ.ಹೆಚ್. ರಸ್ತೆಯಲ್ಲಿರುವ ಪಾರೇಖ್ ವಿನಾಯಕ ಮಹಲ್‌ನಲ್ಲಿ ಆಯೋಜಿಸಲಾಗಿದ್ದ ‘ಬಿ.ಎಸ್. ಚನ್ನಬಸಪ್ಪ ಟೈಲ್ಸ್’ ಉದ್ಘಾಟನಾ ಕಾರ್ಯಕ್ರಮಕ್ಕೆ ತೆರಳುತ್ತಿದ್ದರು. ಈ ಸಂದರ್ಭದಲ್ಲಿ ಚುನಾವಣಾ ಅಕ್ರಮಗಳ ಆರೋಪ ಹಾಗೂ ಸಿಇಸಿ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಯನ್ನು ಆಗ್ರಹಿಸಿ ಯುವ ಕಾಂಗ್ರೆಸ್ ಮತ್ತು ಎನ್ಎಸ್ಯುಐ ಕಾರ್ಯಕರ್ತರು ತಮ್ಮ ಪಕ್ಷದ ಬಾವುಟಗಳನ್ನು ಹಿಡಿದು ಏಕಾಏಕಿ ಸಚಿವರ ಕಾರಿಗೆ ಮುತ್ತಿಗೆ ಹಾಕಲು ಯತ್ನಿಸಿದರು.
ಯೂತ್ ಕಾಂಗ್ರೆಸ್ ಕಾರ್ಯಕರ್ತರು ಯಾವುದೇ ಪೂರ್ವ ಸೂಚನೆ ಇಲ್ಲದೆ ದಿಢೀರ್ ಪ್ರತಿಭಟನೆಗೆ ಮುಂದಾಗಿದ್ದರಿಂದ, ಸ್ಥಳದಲ್ಲಿದ್ದ ಪೊಲೀಸರು ಸಚಿವರ ವಾಹನಕ್ಕೆ ರಕ್ಷಣೆ ಒದಗಿಸಲು ಮತ್ತು ಕಾರ್ಯಕರ್ತರನ್ನು ತಡೆಯಲು ಹರಸಾಹಸ ಪಡಬೇಕಾಯಿತು. ಬಳಿಕ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದು ಸ್ಥಳದಿಂದ ಕರೆದೊಯ್ದರು. ನಂತರ ಸಚಿವರು ಭದ್ರತೆಯೊಂದಿಗೆ ಕಾರ್ಯಕ್ರಮದ ಸ್ಥಳಕ್ಕೆ ತೆರಳಿದರು.
ಈ ಘಟನೆಯಿಂದಾಗಿ ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
