nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು ದಸರಾ ಹೆಲಿರೈಡ್ ಗೆ ವಿಶ್ವವಿದ್ಯಾಲಯ ಕ್ಯಾಂಪಸ್ ನ ಜಾಗ ನೀಡಲು ಆಡಳಿತ ಮಂಡಳಿ ನಕಾರ: ಶೈಕ್ಷಣಿಕ ಹಿತದೃಷ್ಟಿಯಿಂದ ವಿವಿ ನಿರ್ಧಾರ

    October 12, 2026

    ತುಮಕೂರು: ವಿದ್ಯಾರ್ಥಿ ಹಿತಾಸಕ್ತಿಗಿಂತ ವಾಣಿಜ್ಯ ಲಾಭ ಮುಖ್ಯವೇ?: ತುಮಕೂರು ವಿವಿಯಲ್ಲಿ ಹೆಲಿರೈಡ್‌ ಗೆ AIDSO ತೀವ್ರ ಆಕ್ಷೇಪ

    October 12, 2026

    ಶಿವಮೊಗ್ಗದಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ ಕಾರಿಗೆ ಯುವ ಕಾಂಗ್ರೆಸ್ ಮುತ್ತಿಗೆ ಯತ್ನ

    October 12, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು ದಸರಾ ಹೆಲಿರೈಡ್ ಗೆ ವಿಶ್ವವಿದ್ಯಾಲಯ ಕ್ಯಾಂಪಸ್ ನ ಜಾಗ ನೀಡಲು ಆಡಳಿತ ಮಂಡಳಿ ನಕಾರ: ಶೈಕ್ಷಣಿಕ ಹಿತದೃಷ್ಟಿಯಿಂದ ವಿವಿ ನಿರ್ಧಾರ
    • ತುಮಕೂರು: ವಿದ್ಯಾರ್ಥಿ ಹಿತಾಸಕ್ತಿಗಿಂತ ವಾಣಿಜ್ಯ ಲಾಭ ಮುಖ್ಯವೇ?: ತುಮಕೂರು ವಿವಿಯಲ್ಲಿ ಹೆಲಿರೈಡ್‌ ಗೆ AIDSO ತೀವ್ರ ಆಕ್ಷೇಪ
    • ಶಿವಮೊಗ್ಗದಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ ಕಾರಿಗೆ ಯುವ ಕಾಂಗ್ರೆಸ್ ಮುತ್ತಿಗೆ ಯತ್ನ
    • ಹಾಸನ: ಪ್ಲಾಸ್ಟಿಕ್ ಚೀಲದಲ್ಲಿ ವೃದ್ಧೆಯ ಮೃತದೇಹ ತುಂಬಿ ನಾಲೆಗೆ ಎಸೆದಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್– ಆರೋಪಿ ಬಂಧನ
    • ತಿಪಟೂರು: ಬಿ.ಎಚ್. ರಸ್ತೆಯಲ್ಲಿ ಬೃಹತ್ ಮರ ಬಿದ್ದು ನಿವೃತ್ತ ಶಿಕ್ಷಕ ದುರಂತ ಸಾವು
    • ಅಪ್ರಾಪ್ತರ ಕೈಗೆ ವಾಹನ ನೀಡಿದರೆ ಪೋಷಕರಿಗೆ ₹25 ಸಾವಿರ ದಂಡ: ಭಾಲ್ಕಿ ಡಿವೈಎಸ್ಪಿ ಎಚ್ಚರಿಕೆ
    • ದೇಶದಲ್ಲಿ ಪ್ರಜಾಪ್ರಭುತ್ವವೋ ಅಥವಾ ತುರ್ತು ಪರಿಸ್ಥಿತಿಯೋ? ಪ್ರಧಾನಿ ಮೋದಿ ಉತ್ತರಿಸಬೇಕು: ಸಿಎಂ ಡಿ.ಕೆ. ಶಿವಕುಮಾರ್ ಆಕ್ರೋಶ
    • ‘ಪ್ರೇಮದ ಊರಲಿ’ ಸಿನಿಮಾ ವೀಕ್ಷಣೆಗೆ ಹೋಗಿದ್ದ ಕುಟುಂಬಕ್ಕೆ ಶಾಕ್; ಮಂಚದ ಕೆಳಗೆ ಅವಿತಿದ್ದ ಕಳ್ಳ ರೆಡ್‌ ಹ್ಯಾಂಡ್‌ ಸಿಕ್ಕಿಬಿದ್ದ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರು ದಸರಾ ಹೆಲಿರೈಡ್ ಗೆ ವಿಶ್ವವಿದ್ಯಾಲಯ ಕ್ಯಾಂಪಸ್ ನ ಜಾಗ ನೀಡಲು ಆಡಳಿತ ಮಂಡಳಿ ನಕಾರ: ಶೈಕ್ಷಣಿಕ ಹಿತದೃಷ್ಟಿಯಿಂದ ವಿವಿ ನಿರ್ಧಾರ
    ತುಮಕೂರು October 12, 2026

    ತುಮಕೂರು ದಸರಾ ಹೆಲಿರೈಡ್ ಗೆ ವಿಶ್ವವಿದ್ಯಾಲಯ ಕ್ಯಾಂಪಸ್ ನ ಜಾಗ ನೀಡಲು ಆಡಳಿತ ಮಂಡಳಿ ನಕಾರ: ಶೈಕ್ಷಣಿಕ ಹಿತದೃಷ್ಟಿಯಿಂದ ವಿವಿ ನಿರ್ಧಾರ

    By Ganesh TumkuruOctober 12, 2026No Comments1 Min Read
    tumkur University

    ತುಮಕೂರು: ತುಮಕೂರು ದಸರಾ–2026 ಉತ್ಸವದ ಅಂಗವಾಗಿ ಜಿಲ್ಲಾಡಳಿತದಿಂದ ಆಯೋಜಿಸಲು ಉದ್ದೇಶಿಸಲಾಗಿದ್ದ ಹೆಲಿಕ್ಯಾಪ್ಟರ್ ರೈಡ್ ಗೆ (Helicopter Ride) ತುಮಕೂರು ವಿಶ್ವವಿದ್ಯಾನಿಲಯವು ತನ್ನ ಕ್ಯಾಂಪನ್ ನ ಹೆಲಿಪ್ಯಾಡ್ ಮತ್ತು ಆವರಣವನ್ನು ಬಳಸಿಕೊಳ್ಳಲು ನಿರಾಕರಿಸಿದೆ.

    ದಸರಾ ಮಹೋತ್ಸವದ ಪ್ರಯುಕ್ತ ದಿನಾಂಕ 11.10.2026 ರಿಂದ 21.10.2026 ರವರೆಗೆ ವಿವಿ ಆವರಣದ ಹೆಲಿಪ್ಯಾಡ್ ಹಾಗೂ ಜಾಗವನ್ನು ಬಳಸಿಕೊಳ್ಳಲು ಅನುಮತಿ ಕೋರಿ ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಇಂಜಿನಿಯರ್ ಹಾಗೂ ಹೆಲಿಕ್ಯಾಪ್ಟರ್ ಟೂರ್ ಸಮಿತಿ ಅಧ್ಯಕ್ಷರು ವಿಶ್ವವಿದ್ಯಾಲಯಕ್ಕೆ ಪತ್ರ ಬರೆದಿದ್ದರು.

    ವಿಶ್ವವಿದ್ಯಾಲಯದ ವಿಜ್ಞಾನ ಮತ್ತು ಕಲಾ ಕಾಲೇಜಿನ ಅಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಹೆಲಿಕ್ಯಾಪ್ಟರ್ ಹಾರಾಟದಿಂದ ಶೈಕ್ಷಣಿಕ ವಾತಾವರಣಕ್ಕೆ ಧಕ್ಕೆಯಾಗುತ್ತದೆ ಎಂದು ತೀವ್ರ ಆಕ್ಷೇಪ ವ್ಯಕ್ತಪಡಿಸಿ ಮನವಿ ಸಲ್ಲಿಸಿದ್ದರು. ಅಖಿಲ ಭಾರತ ಪ್ರಜಾಸತ್ತಾತ್ಮಕ ವಿದ್ಯಾರ್ಥಿ ಸಂಘಟನೆ ತೀವ್ರ ಆಕ್ರೋಶ ವ್ಯಕ್ತಪಡಿಸಿತ್ತು.

    ಹೆಲಿಕ್ಯಾಪ್ಟರ್ ಹಾರಾಟದಿಂದ ಬರುವ ಅತಿಯಾದ ಶಬ್ದ ಮತ್ತು ಏಳುವ ಧೂಳಿನಿಂದಾಗಿ ತರಗತಿಗಳನ್ನು ನಡೆಸುವುದು ಹಾಗೂ ವಿದ್ಯಾರ್ಥಿಗಳಿಗೆ ಅಭ್ಯಾಸ ಮಾಡುವುದು ಕಷ್ಟಕರವಾಗುತ್ತದೆ. ಹೆಲಿಕ್ಯಾಪ್ಟರ್ ನಿಂದಾಗಿ ಉಂಟಾಗುವ ಕಂಪನ ಮತ್ತು ಧೂಳಿನಿಂದ ವಿಜ್ಞಾನ ವಿಭಾಗದ ಅತ್ಯಂತ ಸೂಕ್ಷ್ಮ ಹಾಗೂ ಬೆಲೆಬಾಳುವ ಪ್ರಯೋಗಾಲಯ ಉಪಕರಣಗಳು ಹಾಳಾಗುವ ಭೀತಿ ವ್ಯಕ್ತವಾಗಿದೆ. ಸಂಶೋಧಕರು, ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರ ಶೈಕ್ಷಣಿಕ ಹಿತದೃಷ್ಟಿ ಹಾಗೂ ಕ್ಯಾಂಪಸ್ ನ ಶಾಂತಿಯುತ ವಾತಾವರಣವನ್ನು ಕಾಪಾಡುವುದು ಮುಖ್ಯವಾಗಿದೆ ಎಂದು ವಿವಿ ತಿಳಿಸಿದೆ.

    ಅಧ್ಯಾಪಕರು ಹಾಗೂ ವಿದ್ಯಾರ್ಥಿಗಳ ಈ ಮನವಿಯನ್ನು ಪರಿಗಣಿಸಿದ ಮಾನ್ಯ ಕುಲಪತಿಗಳು, ವಿಶ್ವವಿದ್ಯಾನಿಲಯದ ಆವರಣವನ್ನು ಹೆಲಿಕ್ಯಾಪ್ಟರ್ ರೈಡ್ ಗೆ ನೀಡಲು ಸಹಮತಿ ಇಲ್ಲವೆಂದು ನಿರ್ಧಾರ ಕೈಗೊಂಡಿದ್ದಾರೆ. ಈ ಕುರಿತು ಉಪಕುಲಸಚಿವರು (ಆಡಳಿತ ವಿಭಾಗ) ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಇಂಜಿನಿಯರ್ ಗೆ ಅಧಿಕೃತವಾಗಿ ಪತ್ರದ ಮೂಲಕ ಸ್ಪಷ್ಟಪಡಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

    Ganesh Tumkuru
    • Website

    Related Posts

    ತುಮಕೂರು: ವಿದ್ಯಾರ್ಥಿ ಹಿತಾಸಕ್ತಿಗಿಂತ ವಾಣಿಜ್ಯ ಲಾಭ ಮುಖ್ಯವೇ?: ತುಮಕೂರು ವಿವಿಯಲ್ಲಿ ಹೆಲಿರೈಡ್‌ ಗೆ AIDSO ತೀವ್ರ ಆಕ್ಷೇಪ

    October 12, 2026

    ಸಿಎಂ ಹುದ್ದೆ ಖಾಲಿ ಇಲ್ಲ, ಸದ್ಯಕ್ಕೆ ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ: ಡಾ. ಜಿ. ಪರಮೇಶ್ವರ್ ಸ್ಪಷ್ಟನೆ

    October 12, 2026

    ಅಖಿಲ ಭಾರತ ಪ್ರತಿಭಟನಾ ದಿನ : AIDSO

    October 12, 2026

    Leave A Reply Cancel Reply

    Our Picks

    ‘We’re Sorry’: ಸಿಜೆಪಿ ನಾಯಕ ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಸುದ್ದಿ ಮುಟ್ಟಿಸಿದ ಪೊಲೀಸ್; ವೈರಲ್ ವೀಡಿಯೊ

    October 12, 2026

    ನಾನಾ ಪಾಟೇಕರ್ ಸಾವಿಗೆ ನಿಜ ಕಾರಣ ಏನು? ಮರಣೋತ್ತರ ಪರೀಕ್ಷೆ ವರದಿ ಬಯಲು!

    October 11, 2026

     CJP ನಾಯಕರ ವಶಕ್ಕೆ ಪುರುಷ ಪೋಲಿಸರ  ಮಹಿಳಾ ಪೊಲೀಸರ ಎಂಟ್ರಿ ಹಿಂದಿನ ಕಾರಣವೇನು?

    October 11, 2026

    ಬೀದರ್‌: ರಾಷ್ಟ್ರೀಯ ಭೀಮ್ ರಾಜ್ ಸೇನಾ ಅಧ್ಯಕ್ಷ ರಾಜೇಶ್‌ ಕಾಂಬ್ಳೆಗೆ ಸನ್ಮಾನ

    October 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು ದಸರಾ ಹೆಲಿರೈಡ್ ಗೆ ವಿಶ್ವವಿದ್ಯಾಲಯ ಕ್ಯಾಂಪಸ್ ನ ಜಾಗ ನೀಡಲು ಆಡಳಿತ ಮಂಡಳಿ ನಕಾರ: ಶೈಕ್ಷಣಿಕ ಹಿತದೃಷ್ಟಿಯಿಂದ ವಿವಿ ನಿರ್ಧಾರ

    October 12, 2026

    ತುಮಕೂರು: ತುಮಕೂರು ದಸರಾ–2026 ಉತ್ಸವದ ಅಂಗವಾಗಿ ಜಿಲ್ಲಾಡಳಿತದಿಂದ ಆಯೋಜಿಸಲು ಉದ್ದೇಶಿಸಲಾಗಿದ್ದ ಹೆಲಿಕ್ಯಾಪ್ಟರ್ ರೈಡ್ ಗೆ (Helicopter Ride) ತುಮಕೂರು ವಿಶ್ವವಿದ್ಯಾನಿಲಯವು…

    ತುಮಕೂರು: ವಿದ್ಯಾರ್ಥಿ ಹಿತಾಸಕ್ತಿಗಿಂತ ವಾಣಿಜ್ಯ ಲಾಭ ಮುಖ್ಯವೇ?: ತುಮಕೂರು ವಿವಿಯಲ್ಲಿ ಹೆಲಿರೈಡ್‌ ಗೆ AIDSO ತೀವ್ರ ಆಕ್ಷೇಪ

    October 12, 2026

    ಶಿವಮೊಗ್ಗದಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ ಕಾರಿಗೆ ಯುವ ಕಾಂಗ್ರೆಸ್ ಮುತ್ತಿಗೆ ಯತ್ನ

    October 12, 2026

    ಹಾಸನ: ಪ್ಲಾಸ್ಟಿಕ್ ಚೀಲದಲ್ಲಿ ವೃದ್ಧೆಯ ಮೃತದೇಹ ತುಂಬಿ ನಾಲೆಗೆ ಎಸೆದಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್– ಆರೋಪಿ ಬಂಧನ

    October 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.