ಬೀದರ್: ಸತತ ಮೂರು ಬಾರಿ ಸಚಿವರಾಗಿ ಆಯ್ಕೆಯಾಗಿ, ಪ್ರಸ್ತುತ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಬೀದರ್ ಜಿಲ್ಲಾ ಉಸ್ತುವಾರಿ ಸಚಿವರಾಗಿ ಸೇವೆ ಸಲ್ಲಿಸುತ್ತಿರುವ ಈಶ್ವರ್ ಖಂಡ್ರೆ ಅವರಿಗೆ ಮಾದಿಗ ಸಮಾಜದ ವತಿಯಿಂದ ಭವ್ಯ ಸನ್ಮಾನ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ.
ಈ ಗೌರವ ಸಮಾರಂಭವು ದಿನಾಂಕ 15/10/2026, ಗುರುವಾರ ಬೆಳಿಗ್ಗೆ 11:00 ರಿಂದ ಮಧ್ಯಾಹ್ನ 2:00 ಗಂಟೆಯವರೆಗೆ ನಾವದಗೇರಿಯಲ್ಲಿರುವ ದಶರಥ ಜಯಂತರಾವ್ ಅವರ ಮನೆ ಆವರಣದಲ್ಲಿ ನಡೆಯಲಿದೆ.
ಚಂದ್ರಕಾಂತ್ ಹಿಪ್ಪಳಗಾಂವ ಅವರ ಮಾರ್ಗದರ್ಶನ ಹಾಗೂ ನೇತೃತ್ವದಲ್ಲಿ ಈ ಅಭಿನಂದನಾ ಕಾರ್ಯಕ್ರಮವು ಆಯೋಜನೆಯಾಗಿದೆ.
ಈ ಸಂದರ್ಭದಲ್ಲಿ ಮಾತನಾಡಿದ ಕರ್ನಾಟಕ ಮಾದಿಗರ ಮಹಾಸಭಾದ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ್ ಹಿಪ್ಪಳಗಾಂವ ಅವರು, ಬೀದರ್ ಜಿಲ್ಲೆಯ ಮಾದಿಗ ಸಮಾಜದ ಬಾಂಧವರು ಹಾಗೂ ಹಿತೈಷಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ವಿನಂತಿಸಿಕೊಂಡಿದ್ದಾರೆ.
ವರದಿ: ಅರವಿಂದ್ ಮಲ್ಲೀಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
