nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು ದಸರಾ ಉತ್ಸವ-2026: ಪಂಜಿನ ಕವಾಯತು ತಾಲೀಮು ವೀಕ್ಷಣೆ

    October 13, 2026

    ತುಮಕೂರು ದಸರಾ ಉತ್ಸವ–2026ರ ಅಂಗವಾಗಿ ಮಹಿಳಾ ಕೌಶಲ್ಯ ಮೇಳ ಉದ್ಘಾಟನೆ

    October 13, 2026

    ದೆಹಲಿಯ ಬೀದಿಯಲ್ಲಿ ಕಾರ್ಯಕರ್ತರೊಂದಿಗೆ ಸರಳತೆಯ ಸಹಭೋಜನ: ಜನರ ನಡುವಿನ ನಾಯಕ ಬಿ.ಕೆ. ಹರಿಪ್ರಸಾದ್

    October 13, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು ದಸರಾ ಉತ್ಸವ-2026: ಪಂಜಿನ ಕವಾಯತು ತಾಲೀಮು ವೀಕ್ಷಣೆ
    • ತುಮಕೂರು ದಸರಾ ಉತ್ಸವ–2026ರ ಅಂಗವಾಗಿ ಮಹಿಳಾ ಕೌಶಲ್ಯ ಮೇಳ ಉದ್ಘಾಟನೆ
    • ದೆಹಲಿಯ ಬೀದಿಯಲ್ಲಿ ಕಾರ್ಯಕರ್ತರೊಂದಿಗೆ ಸರಳತೆಯ ಸಹಭೋಜನ: ಜನರ ನಡುವಿನ ನಾಯಕ ಬಿ.ಕೆ. ಹರಿಪ್ರಸಾದ್
    • ಅಕ್ಟೋಬರ್ 15ರಂದು ಸಚಿವ ಈಶ್ವರ್ ಖಂಡ್ರೆ ಅವರಿಗೆ ಮಾದಿಗ ಸಮಾಜದಿಂದ ಅಭಿನಂದನಾ ಸಮಾರಂಭ
    • ಸಂಪಾದಕೀಯ: ಇಪಿಎಫ್‌ ಒ ಸಮಯೋಚಿತ ಸುತ್ತೋಲೆ ಮತ್ತು ಉದ್ಯಮ ರಂಗದ ವಾಸ್ತವ
    • ಹೆಚ್.ಐ.ವಿ ನಿಯಂತ್ರಣಕ್ಕೆ ಜನಜಾಗೃತಿ ಅತ್ಯಗತ್ಯ: ಜಿಲ್ಲಾಧಿಕಾರಿ ಸ್ನೇಹಲ್ ಆರ್.
    •  ರಾಜ್ಯದಲ್ಲಿ ಮತ್ತೆ ಮಳೆ ಅಬ್ಬರ?  ಹವಾಮಾನ ವರದಿ ಏನು ಹೇಳುತ್ತದೆ; ನಿಮ್ಮ ಜಿಲ್ಲೆಯಲ್ಲಿ ಮಳೆಯಾಗುತ್ತಾ?
    • iPhone ಹೆಸರಿನಲ್ಲಿರುವ ‘i’ ಅಂದ್ರೆ ಏನು ?ಸ್ಟೀವ್ ಜಾಬ್ಸ್ ನೀಡಿದ್ದ 5 ಅರ್ಥಗಳೇನು?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರು ದಸರಾ ಉತ್ಸವ–2026ರ ಅಂಗವಾಗಿ ಮಹಿಳಾ ಕೌಶಲ್ಯ ಮೇಳ ಉದ್ಘಾಟನೆ
    ತುಮಕೂರು October 13, 2026

    ತುಮಕೂರು ದಸರಾ ಉತ್ಸವ–2026ರ ಅಂಗವಾಗಿ ಮಹಿಳಾ ಕೌಶಲ್ಯ ಮೇಳ ಉದ್ಘಾಟನೆ

    By Ganesh TumkuruOctober 13, 2026No Comments1 Min Read
    tumakuru dasara

    ತುಮಕೂರು: ದಸರಾ ಉತ್ಸವ–2026ರ ಅಂಗವಾಗಿ ಜಿಲ್ಲಾಡಳಿತದ ವತಿಯಿಂದ ಅಕ್ಟೋಬರ್ 12ರಂದು ಆಯೋಜಿಸಲಾಗಿದ್ದ ಮಹಿಳಾ ಕೌಶಲ್ಯ ಮೇಳವನ್ನು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಉದ್ಘಾಟಿಸಿದರು.

    ಮಹಿಳೆಯರಲ್ಲಿರುವ ಕೌಶಲ್ಯ, ಸೃಜನಶೀಲತೆ ಹಾಗೂ ಉದ್ಯಮಶೀಲತೆಯನ್ನು ಗುರುತಿಸಿ, ಅವರಿಗೆ ಸೂಕ್ತ ವೇದಿಕೆ ಕಲ್ಪಿಸುವ ಉದ್ದೇಶದಿಂದ ಈ ಮೇಳವನ್ನು ಹಮ್ಮಿಕೊಳ್ಳಲಾಗಿತ್ತು.

    ಮೇಳದಲ್ಲಿ ಮಹಿಳೆಯರು ಸ್ವತಃ ತಯಾರಿಸಿದ ವಿವಿಧ ಉತ್ಪನ್ನಗಳು, ಕರಕುಶಲ ವಸ್ತುಗಳು, ಗೃಹೋಪಯೋಗಿ ಸಾಮಗ್ರಿಗಳು ಹಾಗೂ ಇತರ ಆಕರ್ಷಕ ಉತ್ಪನ್ನಗಳನ್ನು ಪ್ರದರ್ಶನ ಮತ್ತು ಮಾರಾಟಕ್ಕೆ ಇಡಲಾಗಿತ್ತು. ಮೇಳಕ್ಕೆ ಭೇಟಿ ನೀಡಿದ ಸಾರ್ವಜನಿಕರು ಉತ್ಪನ್ನಗಳನ್ನು ವೀಕ್ಷಿಸಿ, ಮಹಿಳೆಯರ ಕೈಚಳಕ ಮತ್ತು ಸೃಜನಶೀಲತೆಯನ್ನು ಮೆಚ್ಚುಗೆ ವ್ಯಕ್ತಪಡಿಸಿದರು.

    ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ಉತ್ತೇಜನ ನೀಡುವುದು, ಅವರ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸುವುದು ಹಾಗೂ ಸ್ವಯಂ ಉದ್ಯೋಗದ ಮೂಲಕ ಆದಾಯ ಗಳಿಸಲು ಪ್ರೋತ್ಸಾಹಿಸುವುದು ಮೇಳದ ಪ್ರಮುಖ ಉದ್ದೇಶವಾಗಿತ್ತು. ಇಂತಹ ಕಾರ್ಯಕ್ರಮಗಳು ಮಹಿಳಾ ಸ್ವಸಹಾಯ ಸಂಘಗಳ ಚಟುವಟಿಕೆಗಳಿಗೆ ಉತ್ತೇಜನ ನೀಡುವುದರ ಜೊತೆಗೆ, ಮಹಿಳೆಯರು ಉದ್ಯಮ ಕ್ಷೇತ್ರದಲ್ಲಿ ಮುನ್ನಡೆಯಲು ಸಹಕಾರಿಯಾಗಲಿವೆ.

    ಇದೇ ಸಂದರ್ಭದಲ್ಲಿ ತುಮಕೂರು ದಸರಾ ಉತ್ಸವದ ಅಂಗವಾಗಿ ಆಯೋಜಿಸಲಾಗಿದ್ದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ವೀಕ್ಷಿಸಲಾಯಿತು. ಕಲಾವಿದರು ತಮ್ಮ ವೈವಿಧ್ಯಮಯ ಕಲಾಪ್ರದರ್ಶನಗಳ ಮೂಲಕ ಪ್ರೇಕ್ಷಕರನ್ನು ರಂಜಿಸಿ, ದಸರಾ ಉತ್ಸವದ ಸಂಭ್ರಮಕ್ಕೆ ಮತ್ತಷ್ಟು ಮೆರುಗು ನೀಡಿದರು.

    ಕಾರ್ಯಕ್ರಮದಲ್ಲಿ ಜಿಲ್ಲಾಡಳಿತದ ಅಧಿಕಾರಿಗಳು, ವಿವಿಧ ಇಲಾಖೆಗಳ ಪ್ರತಿನಿಧಿಗಳು, ಮಹಿಳಾ ಸ್ವಸಹಾಯ ಸಂಘಗಳ ಸದಸ್ಯರು, ಉದ್ಯಮಿಗಳು, ಕಲಾವಿದರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು. ಮಹಿಳೆಯರ ಪ್ರತಿಭೆ ಮತ್ತು ಸಾಧನೆಗಳನ್ನು ಪ್ರೋತ್ಸಾಹಿಸುವ ಇಂತಹ ಮೇಳಗಳು ಮಹಿಳಾ ಸಬಲೀಕರಣಕ್ಕೆ ಪೂರಕವಾಗಿವೆ ಎಂಬ ಆಶಯ ಈ ಸಂದರ್ಭದಲ್ಲಿ ವ್ಯಕ್ತವಾಯಿತು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

    Ganesh Tumkuru
    • Website

    Related Posts

    ತುಮಕೂರು ದಸರಾ ಹೆಲಿರೈಡ್ ಗೆ ವಿಶ್ವವಿದ್ಯಾಲಯ ಕ್ಯಾಂಪಸ್ ನ ಜಾಗ ನೀಡಲು ಆಡಳಿತ ಮಂಡಳಿ ನಕಾರ: ಶೈಕ್ಷಣಿಕ ಹಿತದೃಷ್ಟಿಯಿಂದ ವಿವಿ ನಿರ್ಧಾರ

    October 12, 2026

    ತುಮಕೂರು: ವಿದ್ಯಾರ್ಥಿ ಹಿತಾಸಕ್ತಿಗಿಂತ ವಾಣಿಜ್ಯ ಲಾಭ ಮುಖ್ಯವೇ?: ತುಮಕೂರು ವಿವಿಯಲ್ಲಿ ಹೆಲಿರೈಡ್‌ ಗೆ AIDSO ತೀವ್ರ ಆಕ್ಷೇಪ

    October 12, 2026

    ಸಿಎಂ ಹುದ್ದೆ ಖಾಲಿ ಇಲ್ಲ, ಸದ್ಯಕ್ಕೆ ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ: ಡಾ. ಜಿ. ಪರಮೇಶ್ವರ್ ಸ್ಪಷ್ಟನೆ

    October 12, 2026

    Leave A Reply Cancel Reply

    Our Picks

    ದೆಹಲಿಯ ಬೀದಿಯಲ್ಲಿ ಕಾರ್ಯಕರ್ತರೊಂದಿಗೆ ಸರಳತೆಯ ಸಹಭೋಜನ: ಜನರ ನಡುವಿನ ನಾಯಕ ಬಿ.ಕೆ. ಹರಿಪ್ರಸಾದ್

    October 13, 2026

    ‘We’re Sorry’: ಸಿಜೆಪಿ ನಾಯಕ ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಸುದ್ದಿ ಮುಟ್ಟಿಸಿದ ಪೊಲೀಸ್; ವೈರಲ್ ವೀಡಿಯೊ

    October 12, 2026

    ನಾನಾ ಪಾಟೇಕರ್ ಸಾವಿಗೆ ನಿಜ ಕಾರಣ ಏನು? ಮರಣೋತ್ತರ ಪರೀಕ್ಷೆ ವರದಿ ಬಯಲು!

    October 11, 2026

     CJP ನಾಯಕರ ವಶಕ್ಕೆ ಪುರುಷ ಪೋಲಿಸರ  ಮಹಿಳಾ ಪೊಲೀಸರ ಎಂಟ್ರಿ ಹಿಂದಿನ ಕಾರಣವೇನು?

    October 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ತುಮಕೂರು ದಸರಾ ಉತ್ಸವ-2026: ಪಂಜಿನ ಕವಾಯತು ತಾಲೀಮು ವೀಕ್ಷಣೆ

    October 13, 2026

    ತುಮಕೂರು: ತುಮಕೂರು ದಸರಾ ಉತ್ಸವ-2026ರ ಅಂಗವಾಗಿ ಅಕ್ಟೋಬರ್ 12ರಂದು ತುಮಕೂರು ನಗರದ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಪಂಜಿನ ಕವಾಯತಿನ…

    ತುಮಕೂರು ದಸರಾ ಉತ್ಸವ–2026ರ ಅಂಗವಾಗಿ ಮಹಿಳಾ ಕೌಶಲ್ಯ ಮೇಳ ಉದ್ಘಾಟನೆ

    October 13, 2026

    ದೆಹಲಿಯ ಬೀದಿಯಲ್ಲಿ ಕಾರ್ಯಕರ್ತರೊಂದಿಗೆ ಸರಳತೆಯ ಸಹಭೋಜನ: ಜನರ ನಡುವಿನ ನಾಯಕ ಬಿ.ಕೆ. ಹರಿಪ್ರಸಾದ್

    October 13, 2026

    ಅಕ್ಟೋಬರ್ 15ರಂದು ಸಚಿವ ಈಶ್ವರ್ ಖಂಡ್ರೆ ಅವರಿಗೆ ಮಾದಿಗ ಸಮಾಜದಿಂದ ಅಭಿನಂದನಾ ಸಮಾರಂಭ

    October 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.