ತುಮಕೂರು: ತಾಲೂಕಿನ ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಗಳ ಅಧೀನದ ಕಿತ್ತೂರು ರಾಣಿ ಚೆನ್ನಮ್ಮ ವಸತಿ/ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಖಾಲಿ ಇರುವ ಗಣಿತ ಹಾಗೂ ಹಿಂದಿ ವಿಷಯದ ಅತಿಥಿ ಶಿಕ್ಷಕ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಅತಿಥಿ ಶಿಕ್ಷಕರನ್ನು ಗೌರವ ಧನದ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುವುದು. ಗಣಿತ ವಿಷಯ ಶಿಕ್ಷಕ ಹುದ್ದೆಗೆ ಬಿ.ಎಸ್.ಸಿ/ಬಿ.ಎಡ್/ಟಿಇಟಿ ಉತ್ತೀರ್ಣ ಹಾಗೂ ಹಿಂದಿ ವಿಷಯ ಶಿಕ್ಷಕ ಹುದ್ದೆಗೆ ಬಿ.ಎ/ಎಂ.ಎ/ಬಿ.ಎಡ್/ಟಿಇಟಿ ಉತ್ತೀರ್ಣರಾಗಿ ಅನುಭವ ಹೊಂದಿರುವವರು ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಅಕ್ಟೋಬರ್ 19 ಕಡೆಯ ದಿನವಾಗಿದ್ದು, ಭರ್ತಿ ಮಾಡಿದ ಅರ್ಜಿಯನ್ನು ಸಮೀಪದ ವಸತಿ ಶಾಲೆ ಅಥವಾ ಇ-ಮೇಲ್ principalteacher0408@gmail.com ಗೆ ಕಳುಹಿಸಬಹುದು. ಹೆಚ್ಚಿನ ಮಾಹಿತಿಗಾಗಿ ಮೊ.ಸಂ. 9880056870 / 8073753685 ನ್ನು ಸಂಪರ್ಕಿಸಬೇಕೆಂದು ಪ್ರಕಟಣೆ ತಿಳಿಸಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
