ತುಮಕೂರು: ರುಡ್ ಸೆಟ್ ಸಂಸ್ಥೆ ವತಿಯಿಂದ ಅಕ್ಟೋಬರ್ 22 ರಿಂದ 12 ದಿನಗಳ ಉಚಿತ ಫಾಸ್ಟ್ ಫುಡ್ ತಯಾರಿಕೆ ತರಬೇತಿ ನೀಡಲು ಅರ್ಹ ಗ್ರಾಮೀಣ ನಿರುದ್ಯೋಗಿ ಯುವಕ, ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 18 ರಿಂದ 50 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಆಧಾರ್ ಕಾರ್ಡ್ ಹಾಗೂ ಬಿಪಿಎಲ್ ಕಾರ್ಡ್ ಹೊಂದಿರಬೇಕು.
ತರಬೇತಿಯು ವಸತಿಯುತವಾಗಿದ್ದು, ತರಬೇತಿ ಅವಧಿಯಲ್ಲಿ ಉಚಿತ ಊಟದ ವ್ಯವಸ್ಥೆ ಕಲ್ಪಿಸಲಾಗುವುದು. ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.
ಆಸಕ್ತರು ಹೆಚ್ಚಿನ ಮಾಹಿತಿಗಾಗಿ ರುಡ್ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಥವಾ ಮೊಬೈಲ್ ಸಂಖ್ಯೆ: 9481506564, 9380162042, 9241482541 ನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್ಸೆಟ್ ಸಂಸ್ಥೆ ಬೆಂಗಳೂರು ಶಾಖೆಯ ನಿರ್ದೇಶಕ ಗಿರಿಧರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
