ತುಮಕೂರು: ದಸರಾ ಮಹೋತ್ಸವ ಅಂಗವಾಗಿ ಜಿಲ್ಲಾಡಳಿತದ ವತಿಯಿಂದ ಅಕ್ಟೋಬರ್ 17ರಂದು ಬೆಳಿಗ್ಗೆ 10.30 ಗಂಟೆಗೆ ದಸರಾ ಕವಿಗೋಷ್ಠಿಯನ್ನು ಆಯೋಜಿಸಲಾಗಿದೆ.
ಕವಿಗೋಷ್ಠಿಯು ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ನಿರ್ಮಿಸಿರುವ ಅಮರಶಿಲ್ಪಿ ಜಕ್ಕಣಾಚಾರಿ ಸಾಂಸ್ಕೃತಿಕ ವೈಭವ ಮಹಾವೇದಿಕೆಯಲ್ಲಿ ನಡೆಯಲಿದೆ.
ಕವಿಗೋಷ್ಠಿಯು ಹಿರಿಯರು ಮತ್ತು ಕಿರಿಯರ ವಿಭಾಗದಲ್ಲಿ ನಡೆಯಲಿದ್ದು, ಬೆಳಿಗ್ಗೆ 11 ಗಂಟೆಗೆ ನಡೆಯಲಿರುವ ಹಿರಿಯರ ಕವಿಗೋಷ್ಠಿಯನ್ನು ಪ್ರಸಿದ್ಧ ಕವಯಿತ್ರಿ ಲಲಿತಾ ಸಿದ್ಧಬಸವಯ್ಯ ಉದ್ಘಾಟಿಸಲಿದ್ದಾರೆ. ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎಲ್.ಎನ್. ಮುಕುಂದರಾಜ್ ಅಧ್ಯಕ್ಷತೆ ವಹಿಸಲಿದ್ದಾರೆ. ವಿವಿಧ ಸಂಘ–ಸಂಸ್ಥೆ, ಅಕಾಡೆಮಿ ಪದಾಧಿಕಾರಿಗಳು ಉಪಸ್ಥಿತರಿರುತ್ತಾರೆ.
ನಂತರ ಮಧ್ಯಾಹ್ನ 1 ಗಂಟೆಗೆ ನಡೆಯಲಿರುವ ಕಿರಿಯರ ಕವಿಗೋಷ್ಠಿ ಅಧ್ಯಕ್ಷತೆಯನ್ನು ಜಿಡಗೇಟಿ ರಂಗನಾಥ್ ವಹಿಸಲಿದ್ದು, ಡಾ.ಸಣ್ಣ ಹೊನ್ನಯ್ಯ ಕಂಟಲಗೆರೆ ಆಶಯ ನುಡಿಗಳನ್ನಾಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
