ತುಮಕೂರು: ದೇವರಾಯನದುರ್ಗ ಬೆಟ್ಟಕ್ಕೆ ಟ್ರೆಕ್ಕಿಂಗ್ ಮುಗಿಸಿ ಸ್ನೇಹಿತನೊಂದಿಗೆ ಬೈಕ್ ನಲ್ಲಿ ಬೆಂಗಳೂರಿಗೆ ಮರಳುತ್ತಿದ್ದ ಕೇರಳ ಮೂಲದ 23 ವರ್ಷದ ಯುವತಿ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.
ಬೆಂಗಳೂರಿನ ನೆಲಮಂಗಲ ತಾಲೂಕಿನ ವೀರನಂಜಿಪುರ ಬಳಿ ಈ ಅಪಘಾತ ಸಂಭವಿಸಿದ್ದು, ಲಾರಿ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ. ಘಟನೆಯ ನಂತರ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಮೂಲಗಳ ಪ್ರಕಾರ ಮೃತ ಯುವತಿಯನ್ನು ಅಲೀನಾ (23) ಎಂದು ಗುರುತಿಸಲಾಗಿದೆ.
ಅಲೀನಾ ತನ್ನ ಸ್ನೇಹಿತ ಆಲ್ವಿನ್ ಜೊತೆ ತುಮಕೂರು ಜಿಲ್ಲೆಯ ದೇವರಾಯನದುರ್ಗ ಬೆಟ್ಟಕ್ಕೆ ಟ್ರೆಕ್ಕಿಂಗ್ ಗೆ ತೆರಳಿದ್ದರು. ಅಲ್ಲಿಂದ ಬೆಂಗಳೂರಿಗೆ ಹಿಂತಿರುಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಲಾರಿಯೊಂದು ಅವರು ಪ್ರಯಾಣಿಸುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಅಲೀನಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಬೈಕ್ ನಲ್ಲಿದ್ದ ಆಲ್ವಿನ್ ಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಲೀನಾ ಮತ್ತು ಆಲ್ವಿನ್ ಇಬ್ಬರೂ ಕೇರಳ ಮೂಲದವರಾಗಿದ್ದು, ವಿದ್ಯಾಭ್ಯಾಸಕ್ಕಾಗಿ ಬೆಂಗಳೂರಿನ ಇಂದಿರಾ ನಗರದಲ್ಲಿರುವ ಪೇಯಿಂಗ್ ಗೆಸ್ಟ್ (ಪಿಜಿ) ವಸತಿಯಲ್ಲಿ ವಾಸವಿದ್ದರು ಎಂದು ವರದಿಯಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
