ತುಮಕೂರು: ಹಾಲಿನ ಟ್ಯಾಂಕರ್ ವೊಂದು ಡಿಕ್ಕಿ ಹೊಡೆದ ಪರಿಣಾಂ ಮಗುವೊಂದು ಸಾವನ್ನಪ್ಪಿರುವ ಘಟನೆ ತುಮಕೂರು ತಾಲೂಕಿನ ಭೋವಿಪಾಳ್ಯದಲ್ಲಿ ನಡೆದಿದೆ.
ಮೃತ ಮಗುವನ್ನು ಪವನ್ ಕುಮಾರ್ (5) ಎಂದು ಗುರುತಿಸಲಾಗಿದೆ. ಪವನ್ ಸೈಕಲ್ ನಲ್ಲಿ ಹೋಗುತ್ತಿದ್ದಾಗ ಹಿಂಬದಿಯಿಂದ ಬಂದ ಟ್ಯಾಂಕರ್ ಡಿಕ್ಕಿ ಹೊಡೆಯಿತು. ಇದರಿಂದ ತೀವ್ರ ರಕ್ತಸ್ರಾವವಾಗಿದ್ದ ಪವನ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ.
ಮಗುವನ್ನು ಕಳೆದುಕೊಂಡ ನವೀನ್ ಕುಮಾರ್ ನಾಗರತ್ನ ದಂಪತಿಗಳ ಆಕ್ರಂದನ ಮುಗಿಲು ಮುಟ್ಟಿತ್ತು. ಘಟನೆಯ ಬಳಿಕ ಟ್ಯಾಂಕರ್ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ಹೆಬ್ಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
