ತುಮಕೂರು:ಕರ್ನಾಟಕ ಸರ್ಕಾರದ ತುಮಕೂರು ಜಿಲ್ಲಾಡಳಿತದ ಸಹಯೋಗದಲ್ಲಿ ಕಲಾಲಯ ಸಾಂಸ್ಕೃತಿಕ ಮತ್ತು ಚಾರಿಟಬಲ್ ಟ್ರಸ್ಟ್ ವತಿಯಿಂದ ಅಕ್ಟೋಬರ್ 18, 2026ರಂದು ತುಮಕೂರಿನ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ವಿಶಿಷ್ಟ ದಾಖಲೆಯನ್ನು ಸಾಧಿಸಲಾಯಿತು. ಈ ಸಾಧನೆಯು ಇಂಡಿಯನ್ ಬುಕ್ ಆಫ್ ರೆಕಾರ್ಡ್ಸ್ನಲ್ಲಿ ದಾಖಲಾಗಿದೆ.
ನಕ್ಷೆಯ ಆಕಾರದ ಮಾನವಾಕೃತಿಯಲ್ಲಿ ಅತಿ ಹೆಚ್ಚು ಸಂಖ್ಯೆಯ ಭಾಗವಹಿಸುವವರು ವಿವಿಧ ನೃತ್ಯ ಪ್ರಕಾರಗಳು ಹಾಗೂ ಗಾಯನವನ್ನು ಸತತವಾಗಿ ಪ್ರದರ್ಶಿಸುವ ಮೂಲಕ ಈ ದಾಖಲೆಯನ್ನು ನಿರ್ಮಿಸಿದರು. ಒಂದೇ ಸ್ಥಳದಲ್ಲಿ ಸಾಮೂಹಿಕವಾಗಿ ವಿವಿಧ ನೃತ್ಯ ಪ್ರಕಾರಗಳನ್ನು ಪ್ರದರ್ಶಿಸಿ, ಗಾಯನದ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದ್ದು ವಿಶೇಷವಾಗಿತ್ತು.
ಈ ವಿಶಿಷ್ಟ ದಾಖಲೆಯನ್ನು ಸಾಧಿಸುವಲ್ಲಿ ತುಮಕೂರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಶುಭ ಕಲ್ಯಾಣ್, ಐಎಎಸ್ ಅವರು ಮುಖ್ಯ ಮಾರ್ಗದರ್ಶಕರಾಗಿ (Chief Mentor) ಮಹತ್ವದ ಪಾತ್ರ ವಹಿಸಿದರು. ಅವರ ಮಾರ್ಗದರ್ಶನ ಹಾಗೂ ಜಿಲ್ಲಾಡಳಿತದ ಸಹಕಾರದಿಂದ ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಿತು.
ಕಲಾ ಪ್ರತಿಭೆ, ಸಾಮೂಹಿಕ ಪ್ರಯತ್ನ ಹಾಗೂ ಸಾಂಸ್ಕೃತಿಕ ವೈವಿಧ್ಯತೆಯನ್ನು ಒಗ್ಗೂಡಿಸಿದ ಈ ಕಾರ್ಯಕ್ರಮವು ಇಂಡಿಯನ್ ಬುಕ್ ಆಫ್ ರೆಕಾರ್ಡ್ಸ್ನಲ್ಲಿ ಸ್ಥಾನ ಪಡೆಯುವ ಮೂಲಕ ತುಮಕೂರು ಜಿಲ್ಲೆಯ ಸಾಂಸ್ಕೃತಿಕ ಕ್ಷೇತ್ರಕ್ಕೆ ಮತ್ತೊಂದು ಹೆಮ್ಮೆಯ ಸಾಧನೆಯಾಯಿತು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
