nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಳೆ ಬಗ್ಗೆ ಕೋಡಿಮಠ ಶ್ರೀ ಸ್ಫೋಟಕ ಭವಿಷ್ಯ:  ಶ್ರೀಗಳು ನೀಡಿದ ಎಚ್ಚರಿಕೆ ಏನು?

    October 20, 2026

    ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭರ್ಜರಿ ಕಾರ್ಯಾಚರಣೆ: ₹9.67 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಜಪ್ತಿ, ಇಬ್ಬರ ಬಂಧನ

    October 20, 2026

    ಇಂಡಿಯನ್ ಬುಕ್ ಆಫ್ ರೆಕಾರ್ಡ್ಸ್‌ನಲ್ಲಿ ತುಮಕೂರಿನ ಸಾಧನೆ: ನಕ್ಷೆಯ ಆಕಾರದ ಮಾನವಾಕೃತಿಯಲ್ಲಿ ಸಾಮೂಹಿಕ ನೃತ್ಯ ಮತ್ತು ಗಾಯನ

    October 20, 2026
    Facebook Twitter Instagram
    ಟ್ರೆಂಡಿಂಗ್
    • ಮಳೆ ಬಗ್ಗೆ ಕೋಡಿಮಠ ಶ್ರೀ ಸ್ಫೋಟಕ ಭವಿಷ್ಯ:  ಶ್ರೀಗಳು ನೀಡಿದ ಎಚ್ಚರಿಕೆ ಏನು?
    • ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭರ್ಜರಿ ಕಾರ್ಯಾಚರಣೆ: ₹9.67 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಜಪ್ತಿ, ಇಬ್ಬರ ಬಂಧನ
    • ಇಂಡಿಯನ್ ಬುಕ್ ಆಫ್ ರೆಕಾರ್ಡ್ಸ್‌ನಲ್ಲಿ ತುಮಕೂರಿನ ಸಾಧನೆ: ನಕ್ಷೆಯ ಆಕಾರದ ಮಾನವಾಕೃತಿಯಲ್ಲಿ ಸಾಮೂಹಿಕ ನೃತ್ಯ ಮತ್ತು ಗಾಯನ
    • ರೈಲಿನಲ್ಲಿ ಜೋರಾಗಿ ಹಾಡು, ರೀಲ್ಸ್‌ ಕೇಳಿದರೆ  ದಂಡ! ತೊಂದರೆ ನೀಡುವವರ ವಿರುದ್ಧ ದೂರು ನೀಡುವುದು ಹೇಗೆ?
    • ಫೇಸ್‌ ಬುಕ್‌, ಇನ್‌ ಸ್ಟಾಗ್ರಾಂನಲ್ಲಿ ರಾಜಕೀಯ ಪೋಸ್ಟ್‌ ಗಳಿಗೆ ಬ್ರೇಕ್‌? ಮೆಟಾಗೆ ಕೇಂದ್ರದ ಮಹತ್ವದ ಸೂಚನೆ!
    • ಇಎಸ್‌ ಐಸಿ ಮಹತ್ವದ ಅಪ್‌ ಡೇಟ್:  ಇಎಸ್‌ ಐಸಿ ವಿಮಾದಾರರಿಗೆ ಸಿಹಿ ಸುದ್ದಿ:‌ ಎಷ್ಟು ಸಿಗಲಿದೆ ಈ ಹಣ?
    • ಗೃಹಜ್ಯೋತಿ ಯೋಜನೆಯ ಫಲಾನುಭವಿಗಳಿಗೆ ಹೊಸ ಸಂಕಷ್ಟ? ದಾಖಲೆ ಪರಿಶೀಲನೆ ಬಗ್ಗೆ ಮಹತ್ವದ ಮಾಹಿತಿ
    • ತುಮಕೂರಿನ ದೇವರಾಯನದುರ್ಗದಲ್ಲಿ ನಿಜಕ್ಕೂ ಕಾಡುಮನುಷ್ಯರು ಪ್ರತ್ಯಕ್ಷರಾಗಿದ್ದಾರಾ? ಪೊಲೀಸರ ಸ್ಪಷ್ಟನೆ ಇಲ್ಲಿದೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಳೆ ಬಗ್ಗೆ ಕೋಡಿಮಠ ಶ್ರೀ ಸ್ಫೋಟಕ ಭವಿಷ್ಯ:  ಶ್ರೀಗಳು ನೀಡಿದ ಎಚ್ಚರಿಕೆ ಏನು?
    ರಾಜ್ಯ ಸುದ್ದಿ October 20, 2026

    ಮಳೆ ಬಗ್ಗೆ ಕೋಡಿಮಠ ಶ್ರೀ ಸ್ಫೋಟಕ ಭವಿಷ್ಯ:  ಶ್ರೀಗಳು ನೀಡಿದ ಎಚ್ಚರಿಕೆ ಏನು?

    By Ganesh TumkuruOctober 20, 2026No Comments2 Mins Read
    kodi shree

    ಧಾರವಾಡ: ಪ್ರಸಕ್ತ ಸಾಲಿನ ಮುಂಗಾರು ಮಳೆಯು ಕೆಲವು ಪ್ರದೇಶಗಳಲ್ಲಿ ನಿರೀಕ್ಷಿತ ಮಟ್ಟದಲ್ಲಿ ಸುರಿಯದೆ ರೈತರಿಗೆ ಹಾಗೂ ಜನಸಾಮಾನ್ಯರಿಗೆ ತೀವ್ರ ನಿರಾಶೆಯನ್ನುಂಟು ಮಾಡಿದ್ದರೂ, ಮುಂಬರುವ ಹಿಂಗಾರು ಋತುವಿನಲ್ಲಿ ರಾಜ್ಯಾದ್ಯಂತ ಅತ್ಯುತ್ತಮ ಹಾಗೂ ಸಮೃದ್ಧ ಮಳೆಯಾಗಲಿದೆ ಎಂದು ಕೋಡಿಮಠದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.

    ಧಾರವಾಡದಲ್ಲಿ ನಡೆಯುತ್ತಿರುವ ಸಾಂಸ್ಕೃತಿಕ ಉತ್ಸವ ಹಾಗೂ ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದ ಹವಾಮಾನ, ಕೃಷಿ ಹಾಗೂ ಪ್ರಕೃತಿಯ ಸ್ಥಿತಿಗತಿಗಳ ಕುರಿತು ಹಲವು ಮಹತ್ವದ ಮುನ್ಸೂಚನೆಗಳನ್ನು ಹಂಚಿಕೊಂಡಿದ್ದಾರೆ.

    ಈ ಕುರಿತು ವಿವರವಾಗಿ ಮಾತನಾಡಿರುವ ಶ್ರೀಗಳು, “ಈ ಹಿಂದೆ ತಿಳಿಸಿದಂತೆ ಮುಂಗಾರು ಮಳೆ ಸಮರ್ಪಕವಾಗಿ ಆಗದೆ ಇದ್ದುದರಿಂದ ರಾಜ್ಯದಲ್ಲಿ ನೀರಿನ ತೀವ್ರ ಅಭಾವ, ಕುಡಿಯುವ ನೀರಿಗಾಗಿ ಪರದಾಟ ಹಾಗೂ ಜನಜೀವನದಲ್ಲಿ ನಾನಾ ಸಂಕಷ್ಟಗಳು ಎದುರಾಗಿದ್ದವು. ಆದರೆ ಈಗ ಮುಂಬರುವ ಹಿಂಗಾರು ಮಳೆ ಅತ್ಯಂತ ಫಲಪ್ರದವಾಗಿ ಸುರಿಯಲಿದೆ. ಇದರಿಂದ ನಾಡಿನಲ್ಲಿ ಸುಭಿಕ್ಷೆ ನೆಲೆಸಲಿದೆ. ಜನರಿಗೆ ಎದುರಾಗಿದ್ದ ಹಿಂದಿನ ಕಷ್ಟ–ನಷ್ಟಗಳು ದೂರವಾಗಿ ನೆಮ್ಮದಿ ಮತ್ತು ಶಾಂತಿ ಸಿಗಲಿದೆ. ಜಲಾಶಯಗಳು ಮರುಪೂರ್ಣಗೊಂಡು ಜಲಚರಗಳಿಗೂ ಒಳಿತಾಗಲಿದೆ” ಎಂದು ವಿವರಿಸಿದ್ದಾರೆ.

    ಮುಂಗಾರು ಕೈಕೊಟ್ಟಿದ್ದರಿಂದ ಕಂಗಾಲಾಗಿರುವ ಅನ್ನದಾತರಿಗೆ ಹಿಂಗಾರು ಮಳೆಯು ದೊಡ್ಡ ಮಟ್ಟದ ಆಸರೆಯಾಗಲಿದೆ. ಈ ಮಳೆಯಿಂದಾಗಿ ಕೆರೆ–ಕಟ್ಟೆಗಳು ಹಾಗೂ ಒಣಗಿರುವ ಜಲಮೂಲಗಳು ಭರ್ತಿಯಾಗಲಿದ್ದು, ರೈತರು ಯಾವುದೇ ಕಾರಣಕ್ಕೂ ಧೃತಿಗೆಡಬೇಕಿಲ್ಲ. ಹಿಂಗಾರು ಋತುವು ಖಂಡಿತವಾಗಿಯೂ ರೈತರ ಕೈಹಿಡಿಯಲಿದೆ ಎಂದು ಅವರು ಅಭಯ ನೀಡಿದ್ದಾರೆ.

    ಕೇವಲ ಮಳೆ ಮತ್ತು ಕೃಷಿಯಷ್ಟೇ ಅಲ್ಲದೆ, ಪ್ರಕೃತಿಯ ಮೇಲಾಗುತ್ತಿರುವ ಮಾನವ ಹಸ್ತಕ್ಷೇಪದ ಬಗ್ಗೆಯೂ ಶ್ರೀಗಳು ಗಂಭೀರ ಕಳವಳ ವ್ಯಕ್ತಪಡಿಸಿದ್ದಾರೆ. ಆಧುನಿಕತೆಯ ಭರಾಟೆಯಲ್ಲಿ ಮನುಷ್ಯನ ಅತಿಯಾದ ಆಸೆಯಿಂದಾಗಿ ಭೂಮಿಯಲ್ಲಿ ವಿಪರೀತ ಬೋರ್‌ ವೆಲ್‌ ಗಳನ್ನು ಕೊರೆಯಲಾಗುತ್ತಿದೆ. ಇದರಿಂದ ಭೂಮಿಯ ಒಳಭಾಗದ ತಳಪಾಯ ಸಡಿಲಗೊಳ್ಳುತ್ತಿದ್ದು, ಮುಂಬರುವ ದಿನಗಳಲ್ಲಿ ಇದು ಜಲಪ್ರಳಯ, ಬೆಟ್ಟ ಕುಸಿತ (ಲ್ಯಾಂಡ್‌ ಸ್ಲೈಡ್) ಹಾಗೂ ತೀವ್ರ ಸ್ವರೂಪದ ಪ್ರಕೃತಿ ವಿಕೋಪಗಳಿಗೆ ಕಾರಣವಾಗಬಹುದು ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಕೃತಿ ವಿಕೋಪಗಳ ದುಷ್ಪರಿಣಾಮಗಳಿಂದ ನಾಡನ್ನು ರಕ್ಷಿಸುವಂತೆ ಎಲ್ಲರೂ ಭಗವಂತನಲ್ಲಿ ಪ್ರಾರ್ಥಿಸಬೇಕು ಎಂದು ಅವರು ವಿನಂತಿಸಿದ್ದಾರೆ.

    ಇದೇ ವೇಳೆ ಧಾರವಾಡದ ಐತಿಹಾಸಿಕ ದಸರಾ ಜಂಬೂ ಸವಾರಿಯನ್ನು ಮುಕ್ತಕಂಠದಿಂದ ಶ್ಲಾಘಿಸಿದ ಕೋಡಿಮಠದ ಶ್ರೀಗಳು, “ಅಖಂಡ ಕರ್ನಾಟಕ ಒಂದಾಗಿ ಸಾಗಬೇಕು, ಸಮಸ್ತ ಮನುಕುಲಕ್ಕೂ ಒಳ್ಳೆಯದಾಗಬೇಕು ಎಂಬ ಸದುದ್ದೇಶದೊಂದಿಗೆ ಈ ಉತ್ಸವ ನಡೆಯುತ್ತಿದೆ. ಮೈಸೂರಿನಲ್ಲಿ ದಕ್ಷಿಣ ಕರ್ನಾಟಕದ ಸಾಂಸ್ಕೃತಿಕ ಸಂಭ್ರಮವಿದ್ದರೆ, ಉತ್ತರ ಕರ್ನಾಟಕಕ್ಕೆ ಧಾರವಾಡ ದಸರಾ ಅಷ್ಟೇ ಪ್ರಮುಖವಾದ ಅಸ್ಮಿತೆಯಾಗಿದೆ. ಇದು ರಾಜ್ಯದ ಏಕತಾ ಭಾವನೆಯನ್ನು ಬಿಂಬಿಸುತ್ತದೆ” ಎಂದು ಅಭಿಪ್ರಾಯಪಟ್ಟರು. ಮನುಷ್ಯನು ತನ್ನ ಮೂಲ ಮೌಲ್ಯಗಳನ್ನು ಮರೆಯುತ್ತಿರುವ ಇಂದಿನ ಕಾಲಘಟ್ಟದಲ್ಲಿ ಹಿರಿಯರ ಸಂಪ್ರದಾಯಗಳು ಹಾಗೂ ಸಾಂಸ್ಕೃತಿಕ ಹಬ್ಬಗಳು ಸಮಾಜವನ್ನು ಮಾನವೀಯತೆಯೊಂದಿಗೆ ಒಗ್ಗೂಡಿಸಲು ಪ್ರಮುಖ ಪಾತ್ರ ವಹಿಸುತ್ತವೆ ಎಂದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

    Ganesh Tumkuru
    • Website

    Related Posts

    ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭರ್ಜರಿ ಕಾರ್ಯಾಚರಣೆ: ₹9.67 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಜಪ್ತಿ, ಇಬ್ಬರ ಬಂಧನ

    October 20, 2026

    ಗೃಹಜ್ಯೋತಿ ಯೋಜನೆಯ ಫಲಾನುಭವಿಗಳಿಗೆ ಹೊಸ ಸಂಕಷ್ಟ? ದಾಖಲೆ ಪರಿಶೀಲನೆ ಬಗ್ಗೆ ಮಹತ್ವದ ಮಾಹಿತಿ

    October 20, 2026

    ರೇಷನ್ ಕಾರ್ಡ್‌ದಾರರಿಗೆ ಗುಡ್‌ ನ್ಯೂಸ್‌! ಇ–ಕೆವೈಸಿ ಗಡುವು ವಿಸ್ತರಣೆ, ಎಲ್ಲಿಯವರೆಗೆ?

    October 19, 2026

    Leave A Reply Cancel Reply

    Our Picks

    ಫೇಸ್‌ ಬುಕ್‌, ಇನ್‌ ಸ್ಟಾಗ್ರಾಂನಲ್ಲಿ ರಾಜಕೀಯ ಪೋಸ್ಟ್‌ ಗಳಿಗೆ ಬ್ರೇಕ್‌? ಮೆಟಾಗೆ ಕೇಂದ್ರದ ಮಹತ್ವದ ಸೂಚನೆ!

    October 20, 2026

    ಇಎಸ್‌ ಐಸಿ ಮಹತ್ವದ ಅಪ್‌ ಡೇಟ್:  ಇಎಸ್‌ ಐಸಿ ವಿಮಾದಾರರಿಗೆ ಸಿಹಿ ಸುದ್ದಿ:‌ ಎಷ್ಟು ಸಿಗಲಿದೆ ಈ ಹಣ?

    October 20, 2026

    ಜಿಯೋ ಗ್ರಾಹಕರಿಗೆ ಶಾಕ್! ಉಚಿತ ಹಾಟ್‌ ಸ್ಟಾರ್ ಸೌಲಭ್ಯ ಬಂದ್‌; OTT ಪ್ರಿಯರಿಗೆ ಇನ್ನು ಯಾವುದು ಬೆಸ್ಟ್‌ ಪ್ಲಾನ್?

    October 19, 2026

    ತೆರಿಗೆದಾರರೇ ಗಮನಿಸಿ! ಟ್ಯಾಕ್ಸ್ ಆಡಿಟ್ ಸಲ್ಲಿಕೆಗೆ ಅಕ್ಟೋಬರ್ 21 ಕೊನೆಯ ದಿನ; ತಪ್ಪಿದರೆ ಎಷ್ಟು ಲಕ್ಷ ದಂಡ?

    October 19, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಮಳೆ ಬಗ್ಗೆ ಕೋಡಿಮಠ ಶ್ರೀ ಸ್ಫೋಟಕ ಭವಿಷ್ಯ:  ಶ್ರೀಗಳು ನೀಡಿದ ಎಚ್ಚರಿಕೆ ಏನು?

    October 20, 2026

    ಧಾರವಾಡ: ಪ್ರಸಕ್ತ ಸಾಲಿನ ಮುಂಗಾರು ಮಳೆಯು ಕೆಲವು ಪ್ರದೇಶಗಳಲ್ಲಿ ನಿರೀಕ್ಷಿತ ಮಟ್ಟದಲ್ಲಿ ಸುರಿಯದೆ ರೈತರಿಗೆ ಹಾಗೂ ಜನಸಾಮಾನ್ಯರಿಗೆ ತೀವ್ರ ನಿರಾಶೆಯನ್ನುಂಟು…

    ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭರ್ಜರಿ ಕಾರ್ಯಾಚರಣೆ: ₹9.67 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಜಪ್ತಿ, ಇಬ್ಬರ ಬಂಧನ

    October 20, 2026

    ಇಂಡಿಯನ್ ಬುಕ್ ಆಫ್ ರೆಕಾರ್ಡ್ಸ್‌ನಲ್ಲಿ ತುಮಕೂರಿನ ಸಾಧನೆ: ನಕ್ಷೆಯ ಆಕಾರದ ಮಾನವಾಕೃತಿಯಲ್ಲಿ ಸಾಮೂಹಿಕ ನೃತ್ಯ ಮತ್ತು ಗಾಯನ

    October 20, 2026

    ರೈಲಿನಲ್ಲಿ ಜೋರಾಗಿ ಹಾಡು, ರೀಲ್ಸ್‌ ಕೇಳಿದರೆ  ದಂಡ! ತೊಂದರೆ ನೀಡುವವರ ವಿರುದ್ಧ ದೂರು ನೀಡುವುದು ಹೇಗೆ?

    October 20, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.