ಚಿಕ್ಕನಾಯಕನಹಳ್ಳಿ: ಸಾಹಿತ್ಯ, ರಂಗಭೂಮಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದಂತಹ ಸಾಧಕರು ತಮ್ಮ ವಿವರಗಳನ್ನೊಳಗೊಂಡ ಮಾಹಿತಿಯೊಂದಿಗೆ ತಾಲೂಕು ಕಚೇರಿಗೆ ಅರ್ಜಿ ಸಲ್ಲಿಸಿ ಎಂದು ತಹಸೀಲ್ದಾರ್ ಮಮತ ಎಂ ತಿಳಿಸಿದರು.
ತಾಲೂಕಿನ ಆಡಳಿತ ಸೌಧದಲ್ಲಿ ಹಮ್ಮಿಕೊಂಡಿದ್ದ ಕನ್ನಡ ರಾಜ್ಯೋತ್ಸವ ಆಚರಣೆ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ತಾಲೂಕು ಸಮಿತಿಯು ಅಂತಹವರನ್ನು ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡುವುದು ಎಂದು ಮಾಹಿತಿ ನೀಡಿದರು.
ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಎಸ್. ರವಿಕುಮಾರ್ ಮಾತನಾಡಿ, ರಾಜ್ಯೋತ್ಸವದಂದು ಕಚೇರಿಗಳು ಸೇರಿ ನಗರಾಲಂಕಾರಕ್ಕೆ ಒತ್ತು ನೀಡಬೇಕು ಹಾಗೂ ಯಾವುದಾದರೂ ಕ್ಷೇತ್ರದಲ್ಲಿ ಅರ್ಜಿಗಳು ಸಲ್ಲಿಕೆಯಾಗದಿದ್ದರೆ ಅಂತಹ ಕ್ಷೇತ್ರದಲ್ಲಿ ಸಾಧನೆ ಮಾಡಿದಂತಹ ಸಾಧಕರನ್ನು ಗುರುತಿಸಿ ರಾಜ್ಯೋತ್ಸವ ಪ್ರಶಸ್ತಿ ನೀಡಬೇಕೆಂದು ತಿಳಿಸಿದರು.
ಕನ್ನಡ ಸಂಘದ ಅಧ್ಯಕ್ಷ ಸಿ.ಬಿ.ರೇಣುಕಸ್ವಾಮಿ ಮಾತನಾಡಿ, ಕನ್ನಡ ಸಂಘದ ವೇದಿಕೆಯಲ್ಲಿ ರಾಜ್ಯೋತ್ಸವ ದಿನದಂದು ಸಂಜೆ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದರು.
ಪೂರ್ವಭಾವಿ ಸಭೆಗೆ ಗೈರಾದ ಅಧಿಕಾರಿಗಳಿಗೆ ನೋಟೀಸ್ ನೀಡಲಾಗುವುದು. ನ.1 ರಂದು ಎಲ್ಲಾ ತಾಲೂಕು ಮಟ್ಟದ ಅಧಿಕಾರಿಗಳು ತಮ್ಮ ಕಛೇರಿಗಳಲ್ಲಿ ರಾಜ್ಯೋತ್ಸವ ಆಚರಣೆ ಮಾಡಿ ತಾಲೂಕು ಕ್ರೀಡಾಂಗಣಕ್ಕೆ ಬಂದು ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕು. ಈ ಬಾರಿಯ ತಾಲೂಕು ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಹರನ್ನು ಸಮಿತಿಯ ಮೂಲಕ ಆಯ್ಕೆ ಮಾಡಲಾಗುವುದು. ತಾಲೂಕಿನಲ್ಲಿ ಯಾವುದಾದರೂ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿದ್ದರೆ ಅಂತಹವರು ಅರ್ಜಿ ಸಲ್ಲಿಸಬಹುದಾಗಿದೆ.
— ಮಮತ ಎಂ., ತಹಶೀಲ್ದಾರ್.
ಸಭೆಯಲ್ಲಿ ಕನ್ನಡ ಪರ ಸಂಘಟನೆಗಳ ಮುಖಂಡರು ಸೇರಿದಂತೆ ವಿವಿಧ ಸಂಘಸಂಸ್ಥೆಗಳ ಪದಾಧಿಕಾರಿಗಳು ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
