nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮುರಿದು ಬಿದ್ದಿರುವ ಕ್ರಾಶ್ ಬ್ಯಾರಿಯರ್ ದುರಸ್ತಿ ಮಾಡೋರು ಯಾರು? | ಅನಾಹುತಕ್ಕೂ ಮುನ್ನ ಎಚ್ಚೆತ್ತುಕೊಳ್ಳುತ್ತಾರೆಯೇ ಅಧಿಕಾರಿಗಳು?

    October 22, 2026

    ಯುಜಿ ನೀಟ್–2026: ವೈದ್ಯಕೀಯ ಮತ್ತು ದಂತವೈದ್ಯಕೀಯ ಆನ್‌ ಲೈನ್‌ ಸ್ಟ್ರೇ ವೇಕೆನ್ಸಿ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಪ್ರಕಟ

    October 22, 2026

    ವೈದ್ಯಕೀಯ ಸೀಟುಗಳ ಹೆಚ್ಚುವರಿ ಸ್ಟ್ರೇ ವೇಕೆನ್ಸಿ ಸುತ್ತು: ಕೆಇಎ (KEA) ಮಹತ್ವದ ಪ್ರಕಟಣೆ

    October 22, 2026
    Facebook Twitter Instagram
    ಟ್ರೆಂಡಿಂಗ್
    • ಮುರಿದು ಬಿದ್ದಿರುವ ಕ್ರಾಶ್ ಬ್ಯಾರಿಯರ್ ದುರಸ್ತಿ ಮಾಡೋರು ಯಾರು? | ಅನಾಹುತಕ್ಕೂ ಮುನ್ನ ಎಚ್ಚೆತ್ತುಕೊಳ್ಳುತ್ತಾರೆಯೇ ಅಧಿಕಾರಿಗಳು?
    • ಯುಜಿ ನೀಟ್–2026: ವೈದ್ಯಕೀಯ ಮತ್ತು ದಂತವೈದ್ಯಕೀಯ ಆನ್‌ ಲೈನ್‌ ಸ್ಟ್ರೇ ವೇಕೆನ್ಸಿ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಪ್ರಕಟ
    • ವೈದ್ಯಕೀಯ ಸೀಟುಗಳ ಹೆಚ್ಚುವರಿ ಸ್ಟ್ರೇ ವೇಕೆನ್ಸಿ ಸುತ್ತು: ಕೆಇಎ (KEA) ಮಹತ್ವದ ಪ್ರಕಟಣೆ
    • ದಸರಾ ವೇದಿಕೆಯಲ್ಲಿ ಸಚಿವರನ್ನು ತಡೆದ ಪೊಲೀಸ್ ಅಧಿಕಾರಿ; ತನಿಖೆಗೆ ಸಿಎಂ ಆದೇಶ
    • ನವೆಂಬರ್ 13ರಂದು ಜಗತ್ತು ಅಂತ್ಯವಾಗುತ್ತಾ? 1960ರ ವಿಜ್ಞಾನಿಗಳ ಲೆಕ್ಕಾಚಾರ ಮತ್ತೆ ಚರ್ಚೆಯಲ್ಲಿ!
    • ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ! ಮುಂದಿನ 3 ದಿನ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
    • ಕುಣಿಗಲ್ ನಲ್ಲಿ ವಿಜಯ ದಶಮಿ ಆಚರಣೆ: ಹರಿದು ಬಂದ ಜನ ಸಾಗರ, ಕುದುರೆ ಏರಿದ ತಹಶೀಲ್ದಾರ್
    • ಹಬ್ಬಗಳ ಆಚರಣೆಯಿಂದ ಧಾರ್ಮಿಕ ಚಿಂತನೆ ಜಾಗೃತಿ: ಶಮಿಪೂಜೆಯಲ್ಲಿ ಶ್ರೀ ಶಿವಸಿದ್ಧೇಶ್ವರ ಸ್ವಾಮೀಜಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮುರಿದು ಬಿದ್ದಿರುವ ಕ್ರಾಶ್ ಬ್ಯಾರಿಯರ್ ದುರಸ್ತಿ ಮಾಡೋರು ಯಾರು? | ಅನಾಹುತಕ್ಕೂ ಮುನ್ನ ಎಚ್ಚೆತ್ತುಕೊಳ್ಳುತ್ತಾರೆಯೇ ಅಧಿಕಾರಿಗಳು?
    ಕೊರಟಗೆರೆ October 22, 2026

    ಮುರಿದು ಬಿದ್ದಿರುವ ಕ್ರಾಶ್ ಬ್ಯಾರಿಯರ್ ದುರಸ್ತಿ ಮಾಡೋರು ಯಾರು? | ಅನಾಹುತಕ್ಕೂ ಮುನ್ನ ಎಚ್ಚೆತ್ತುಕೊಳ್ಳುತ್ತಾರೆಯೇ ಅಧಿಕಾರಿಗಳು?

    By Ganesh TumkuruOctober 22, 2026No Comments3 Mins Read
    crash barrier

    ವರದಿ : ಮಂಜುಸ್ವಾಮಿ ಎಂ.ಎನ್.

    ಕೊರಟಗೆರೆ : ತಾಲೂಕಿನ ತುಂಬಾಡಿಯಿಂದ ಸಿದ್ದರಬೆಟ್ಟಕ್ಕೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯ ಬದಿಯಲ್ಲಿ ಅಳವಡಿಸಿರುವ ರಕ್ಷಣಾತ್ಮಕ ತಡೆಗೋಡೆಗಳು (ಕ್ರಾಶ್ ಬ್ಯಾರಿಯರ್‌ ಗಳು) ತೀವ್ರವಾಗಿ ಹಾನಿಗೊಳಗಾಗಿ ಮುರಿದು ಬಿದ್ದಿವೆ. ವಾಹನ ಸವಾರರ ಸುರಕ್ಷತೆಗಾಗಿ ಅಳವಡಿಸಿರುವ ಈ ತಡೆಗೋಡೆಗಳೇ ಈಗ ಅಪಾಯಕ್ಕೆ ಆಹ್ವಾನ ನೀಡುವಂತಿದ್ದು, ಸಂಬಂಧಪಟ್ಟ ಅಧಿಕಾರಿಗಳ ಕಾರ್ಯವೈಖರಿ ವಿರುದ್ಧ ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.

    ರಸ್ತೆಯ ಬದಿಯ ತಗ್ಗು ಪ್ರದೇಶ ಹಾಗೂ ಕಂದಕಗಳಿಗೆ ವಾಹನಗಳು ಉರುಳದಂತೆ ತಡೆಯಲು ಕ್ರಾಶ್ ಬ್ಯಾರಿಯರ್‌ ಗಳನ್ನು ಅಳವಡಿಸಲಾಗುತ್ತದೆ. ಆದರೆ, ತುಂಬಾಡಿ–ಸಿದ್ದರಬೆಟ್ಟ ರಸ್ತೆಯ ಕೆಲವು ಭಾಗಗಳಲ್ಲಿ ತಡೆಗೋಡೆಗಳು ಬಾಗಿದ್ದು, ಹಾನಿಗೊಳಗಾಗಿರುವುದು ವಾಹನ ಸವಾರರಲ್ಲಿ ಆತಂಕ ಮೂಡಿಸಿದೆ. ಇಂತಹ ಅಪಾಯಕಾರಿ ಸ್ಥಿತಿಯಲ್ಲಿರುವ ತಡೆಗೋಡೆಗಳನ್ನು ತಕ್ಷಣ ದುರಸ್ತಿಗೊಳಿಸದಿದ್ದರೆ ಭವಿಷ್ಯದಲ್ಲಿ ಗಂಭೀರ ಅಪಘಾತ ಸಂಭವಿಸುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ.

     ವಾಹನ ಚಾಲಕರಿಗೆ ರಾತ್ರಿ ಸಂಚಾರವೇ ಸವಾಲು!

    ಈ ರಸ್ತೆಯಲ್ಲಿ ರಾತ್ರಿ ವೇಳೆ ಸಂಚರಿಸುವ ವಾಹನ ಸವಾರರಿಗೆ ಹಾನಿಗೊಳಗಾದ ತಡೆಗೋಡೆಗಳು ಮತ್ತಷ್ಟು ಆತಂಕ ಉಂಟುಮಾಡುತ್ತಿವೆ. ಬೆಳಕಿನ ಕೊರತೆ, ಮಂಜು ಅಥವಾ ಪ್ರತಿಕೂಲ ಹವಾಮಾನದ ಸಂದರ್ಭದಲ್ಲಿ ರಸ್ತೆ ಬದಿಯ ಅಪಾಯಕಾರಿ ಭಾಗಗಳು ಸ್ಪಷ್ಟವಾಗಿ ಕಾಣದಿದ್ದರೆ, ವಾಹನಗಳು ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳುವ ಅಪಾಯವಿದೆ.

    ಇದಲ್ಲದೆ, ಮುರಿದಿರುವ ಲೋಹದ ಭಾಗಗಳು ಹೊರಚಾಚಿಕೊಂಡಿದ್ದರೆ ದ್ವಿಚಕ್ರ ವಾಹನ ಸವಾರರಿಗೂ ಅಪಾಯ ಉಂಟಾಗಬಹುದು. ಹೀಗಾಗಿ ಸಂಬಂಧಪಟ್ಟ ಅಧಿಕಾರಿಗಳು ಯಾವುದೇ ಅನಾಹುತ ಸಂಭವಿಸುವ ಮೊದಲು ಸ್ಥಳ ಪರಿಶೀಲನೆ ನಡೆಸಿ ತುರ್ತು ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ.

    ಸಾರ್ವಜನಿಕರ ಸುರಕ್ಷತೆಗಿಂತ ನಿರ್ಲಕ್ಷ್ಯವೇ ಮೇಲುಗೈ?

    ರಸ್ತೆ ಸುರಕ್ಷತೆಯ ದೃಷ್ಟಿಯಿಂದ ಅಳವಡಿಸಿರುವ ರಕ್ಷಣಾತ್ಮಕ ತಡೆಗೋಡೆಗಳನ್ನು ನಿರಂತರವಾಗಿ ಪರಿಶೀಲಿಸಿ, ಹಾನಿಗೊಳಗಾದ ಕೂಡಲೇ ದುರಸ್ತಿಗೊಳಿಸುವುದು ಸಂಬಂಧಪಟ್ಟ ಇಲಾಖೆಯ ಪ್ರಮುಖ ಜವಾಬ್ದಾರಿಯಾಗಿದೆ. ಆದರೆ, ಈ ರಸ್ತೆಯಲ್ಲಿನ ತಡೆಗೋಡೆಗಳ ದುಸ್ಥಿತಿಯ ಬಗ್ಗೆ ಸಾರ್ವಜನಿಕರು ಆತಂಕ ವ್ಯಕ್ತಪಡಿಸುತ್ತಿದ್ದು, ಸಮಸ್ಯೆಗೆ ಶೀಘ್ರ ಪರಿಹಾರ ದೊರೆಯಬೇಕೆಂದು ಒತ್ತಾಯಿಸುತ್ತಿದ್ದಾರೆ.

    ಹಾನಿಗೊಳಗಾದ ತಡೆಗೋಡೆಗಳನ್ನು ದುರಸ್ತಿಗೊಳಿಸಲು ಅಧಿಕಾರಿಗಳು ಇನ್ನೂ ಎಷ್ಟು ದಿನ ಕಾಯಬೇಕು? ಅಪಘಾತ ಸಂಭವಿಸಿದ ಬಳಿಕವೇ ಕ್ರಮ ಕೈಗೊಳ್ಳಬೇಕೇ? ಸಾರ್ವಜನಿಕರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಈಗಲೇ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲವೇ? ಎಂಬ ಪ್ರಶ್ನೆಗಳು ಸ್ಥಳೀಯರಲ್ಲಿ ಕೇಳಿ ಬರುತ್ತಿವೆ.

    ತುಂಬಾಡಿಯಿಂದ ಸಿದ್ದರಬೆಟ್ಟಕ್ಕೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯ ಬದಿಯಲ್ಲಿರುವ ರಕ್ಷಣಾತ್ಮಕ ತಡೆಗೋಡೆಗಳು ತೀವ್ರವಾಗಿ ಹಾನಿಗೊಳಗಾಗಿರುವುದು ಕಳವಳಕಾರಿ ಸಂಗತಿಯಾಗಿದೆ. ಈ ರಸ್ತೆ ತಗ್ಗು ಪ್ರದೇಶ ಹಾಗೂ ಪ್ರಪಾತದ ಸಮೀಪದಲ್ಲಿರುವುದರಿಂದ, ವಾಹನಗಳು ನಿಯಂತ್ರಣ ತಪ್ಪಿದ ಸಂದರ್ಭದಲ್ಲಿ ಕ್ರಾಶ್ ಬ್ಯಾರಿಯರ್‌ಗಳು ಜೀವ ರಕ್ಷಕವಾಗಿ ಕಾರ್ಯನಿರ್ವಹಿಸುತ್ತವೆ. ಆದರೆ, ತಡೆಗೋಡೆಗಳು ಬಾಗಿಕೊಂಡು ಹಾನಿಗೊಳಗಾಗಿರುವುದರಿಂದ ಅವುಗಳ ರಕ್ಷಣಾತ್ಮಕ ಸಾಮರ್ಥ್ಯ ಕುಂಠಿತಗೊಂಡಿದೆ. ವಿಶೇಷವಾಗಿ ರಾತ್ರಿ ವೇಳೆ ಈ ಮಾರ್ಗದಲ್ಲಿ ಸಂಚರಿಸುವ ವಾಹನ ಸವಾರರಿಗೆ ಅಪಾಯ ಎದುರಾಗುವ ಸಾಧ್ಯತೆಯಿದೆ. ಆದ್ದರಿಂದ ಸಂಬಂಧಪಟ್ಟ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಕೂಡಲೇ ಸ್ಥಳ ಪರಿಶೀಲನೆ ನಡೆಸಿ, ಹಾನಿಗೊಳಗಾದ ತಡೆಗೋಡೆಗಳನ್ನು ತುರ್ತಾಗಿ ದುರಸ್ತಿಗೊಳಿಸಬೇಕು ಎಂದು ಮಾಜಿ ಗ್ರಾಮ ಪಂಚಾಯಿತಿ ಸದಸ್ಯ ರವಿಕುಮಾರ್ ಒತ್ತಾಯಿಸಿದ್ದಾರೆ.

     ಸ್ಥಳೀಯ ವಾಹನ ಸವಾರರ ಮನವಿ :

    ಹಾನಿಗೊಳಗಾದ ಕ್ರಾಶ್ ಬ್ಯಾರಿಯರ್‌ ಗಳನ್ನು ದುರಸ್ತಿಪಡಿಸಲು ಸಾಧ್ಯವಾಗದಿದ್ದಲ್ಲಿ, ಅವುಗಳ ಬದಲಿಗೆ ಹೊಸ ಹಾಗೂ ಬಲಿಷ್ಠ ತಡೆಗೋಡೆಗಳನ್ನು ಅಳವಡಿಸಬೇಕು. ಅಪಾಯಕಾರಿ ಸ್ಥಳಗಳಲ್ಲಿ ಎಚ್ಚರಿಕೆ ಫಲಕಗಳು, ಪ್ರತಿಫಲಕ ಗುರುತುಗಳು ಹಾಗೂ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು.

    ಸಾರ್ವಜನಿಕರ ಜೀವ ಮತ್ತು ಆಸ್ತಿಯ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಸಂಬಂಧಪಟ್ಟ ಅಧಿಕಾರಿಗಳು ವಿಳಂಬ ಮಾಡದೆ ಕ್ರಮ ಕೈಗೊಳ್ಳಬೇಕು. ಅಪಘಾತ ಸಂಭವಿಸಿದ ನಂತರ ಕ್ರಮ ಕೈಗೊಳ್ಳುವ ಬದಲು, ಮುನ್ನೆಚ್ಚರಿಕೆಯಾಗಿ ಸಮಸ್ಯೆಯನ್ನು ಪರಿಹರಿಸುವುದು ಅತ್ಯಗತ್ಯ ಎಂದು ವಾಹನ ಸವಾರ ಸುರೇಶ್ ಮನವಿ ಮಾಡಿದ್ದಾರೆ.

     ಅಧಿಕಾರಿಗಳು ತಕ್ಷಣ ಕ್ರಮ ಕೈಗೊಳ್ಳಲಿ:

    ತುಂಬಾಡಿ–ಸಿದ್ದರಬೆಟ್ಟ ಮುಖ್ಯ ರಸ್ತೆಯಲ್ಲಿ ಹಾನಿಗೊಳಗಾಗಿರುವ ಕ್ರಾಶ್ ಬ್ಯಾರಿಯರ್‌ಗಳನ್ನು ಪರಿಶೀಲಿಸಿ, ಅಗತ್ಯವಿರುವ ಕಡೆ ದುರಸ್ತಿ ಅಥವಾ ಹೊಸ ತಡೆಗೋಡೆ ಅಳವಡಿಕೆ ಮಾಡಬೇಕು. ಜೊತೆಗೆ ಅಪಾಯಕಾರಿ ಸ್ಥಳಗಳಲ್ಲಿ ಸೂಕ್ತ ಸೂಚನಾ ಫಲಕಗಳು ಮತ್ತು ಪ್ರತಿಫಲಕಗಳನ್ನು ಅಳವಡಿಸಿ, ವಾಹನ ಸವಾರರ ಸುರಕ್ಷತೆಗೆ ಆದ್ಯತೆ ನೀಡಬೇಕು ಎಂಬುದು ಸಾರ್ವಜನಿಕರ ಪ್ರಮುಖ ಆಗ್ರಹವಾಗಿದೆ.

    ಅನಾಹುತ ಸಂಭವಿಸುವ ಮುನ್ನ ಅಧಿಕಾರಿಗಳು ಎಚ್ಚೆತ್ತುಕೊಳ್ಳುತ್ತಾರೆಯೇ? ಸಾರ್ವಜನಿಕರ ಜೀವಕ್ಕೆ ರಕ್ಷಣೆ ನೀಡಬೇಕಾದ ಕ್ರಾಶ್ ಬ್ಯಾರಿಯರ್‌ಗಳೇ ಹಾನಿಗೊಳಗಾಗಿರುವಾಗ, ಅವುಗಳನ್ನು ದುರಸ್ತಿಗೊಳಿಸುವ ಜವಾಬ್ದಾರಿ ಯಾರದ್ದು?

    ಈ ಪ್ರಶ್ನೆಗಳಿಗೆ ಸಂಬಂಧಪಟ್ಟ ಅಧಿಕಾರಿಗಳು ಉತ್ತರ ನೀಡುವುದರ ಜೊತೆಗೆ, ಸ್ಥಳ ಪರಿಶೀಲನೆ ನಡೆಸಿ ಶೀಘ್ರ ಕ್ರಮ ಕೈಗೊಳ್ಳುತ್ತಾರ ಎಂದು ಕಾದು ನೋಡಬೇಕಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

    Ganesh Tumkuru
    • Website

    Related Posts

    ಹೈನುಗಾರಿಕೆ ಪ್ರೋತ್ಸಾಹಿಸಲು ರೈತರಿಗೆ ಉಚಿತ ಮೇವಿನ ಬೀಜ ವಿತರಣೆ

    October 4, 2026

    ಹೈನುಗಾರಿಕೆ ಪ್ರೋತ್ಸಾಹಿಸಲು ರೈತರಿಗೆ ಉಚಿತ ಮೇವಿನ ಬೀಜ ವಿತರಣೆ: ಜಾನುವಾರುಗಳಿಗೆ ಮೇವಿನ ಕೊರತೆ ನೀಗಿಸಲು ಪಶುಪಾಲನಾ ಇಲಾಖೆಯಿಂದ ರೈತಸ್ನೇಹಿ ಹೆಜ್ಜೆ

    October 3, 2026

    ಗಾಂಧಿ ಜಯಂತಿ ಪ್ರಯುಕ್ತ ಶ್ರೀಕ್ಷೇತ್ರ ಸಿದ್ದರಬೆಟ್ಟದಲ್ಲಿ ಸ್ವಚ್ಛತಾ ಆಂದೋಲನ

    October 2, 2026

    Leave A Reply Cancel Reply

    Our Picks

    ಹೊಸದಾಗಿ ಕೆಲಸಕ್ಕೆ ಸೇರಿದವರಿಗೆ ₹15,000 ಸಿಗುತ್ತಾ? ಕೇಂದ್ರದ ಉದ್ಯೋಗ ಯೋಜನೆಯ ಅರ್ಹತೆಗಳೇನು?

    October 21, 2026

    ಫೇಸ್‌ ಬುಕ್‌, ಇನ್‌ ಸ್ಟಾಗ್ರಾಂನಲ್ಲಿ ರಾಜಕೀಯ ಪೋಸ್ಟ್‌ ಗಳಿಗೆ ಬ್ರೇಕ್‌? ಮೆಟಾಗೆ ಕೇಂದ್ರದ ಮಹತ್ವದ ಸೂಚನೆ!

    October 20, 2026

    ಇಎಸ್‌ ಐಸಿ ಮಹತ್ವದ ಅಪ್‌ ಡೇಟ್:  ಇಎಸ್‌ ಐಸಿ ವಿಮಾದಾರರಿಗೆ ಸಿಹಿ ಸುದ್ದಿ:‌ ಎಷ್ಟು ಸಿಗಲಿದೆ ಈ ಹಣ?

    October 20, 2026

    ಜಿಯೋ ಗ್ರಾಹಕರಿಗೆ ಶಾಕ್! ಉಚಿತ ಹಾಟ್‌ ಸ್ಟಾರ್ ಸೌಲಭ್ಯ ಬಂದ್‌; OTT ಪ್ರಿಯರಿಗೆ ಇನ್ನು ಯಾವುದು ಬೆಸ್ಟ್‌ ಪ್ಲಾನ್?

    October 19, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಮುರಿದು ಬಿದ್ದಿರುವ ಕ್ರಾಶ್ ಬ್ಯಾರಿಯರ್ ದುರಸ್ತಿ ಮಾಡೋರು ಯಾರು? | ಅನಾಹುತಕ್ಕೂ ಮುನ್ನ ಎಚ್ಚೆತ್ತುಕೊಳ್ಳುತ್ತಾರೆಯೇ ಅಧಿಕಾರಿಗಳು?

    October 22, 2026

    ವರದಿ : ಮಂಜುಸ್ವಾಮಿ ಎಂ.ಎನ್. ಕೊರಟಗೆರೆ : ತಾಲೂಕಿನ ತುಂಬಾಡಿಯಿಂದ ಸಿದ್ದರಬೆಟ್ಟಕ್ಕೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯ ಬದಿಯಲ್ಲಿ ಅಳವಡಿಸಿರುವ…

    ಯುಜಿ ನೀಟ್–2026: ವೈದ್ಯಕೀಯ ಮತ್ತು ದಂತವೈದ್ಯಕೀಯ ಆನ್‌ ಲೈನ್‌ ಸ್ಟ್ರೇ ವೇಕೆನ್ಸಿ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಪ್ರಕಟ

    October 22, 2026

    ವೈದ್ಯಕೀಯ ಸೀಟುಗಳ ಹೆಚ್ಚುವರಿ ಸ್ಟ್ರೇ ವೇಕೆನ್ಸಿ ಸುತ್ತು: ಕೆಇಎ (KEA) ಮಹತ್ವದ ಪ್ರಕಟಣೆ

    October 22, 2026

    ದಸರಾ ವೇದಿಕೆಯಲ್ಲಿ ಸಚಿವರನ್ನು ತಡೆದ ಪೊಲೀಸ್ ಅಧಿಕಾರಿ; ತನಿಖೆಗೆ ಸಿಎಂ ಆದೇಶ

    October 22, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.