ಶ್ರವಣೂರು: ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ವತಿಯಿಂದ ಹಾಸನದ ಶ್ರೀ ಮಂಜುನಾಥ ಐ ಕೇರ್ ಸಹಯೋಗದಲ್ಲಿ ಉಚಿತ ಕಣ್ಣಿನ ಪೊರೆ ತಪಾಸಣೆ ಹಾಗೂ ಶಸ್ತ್ರಚಿಕಿತ್ಸಾ ಶಿಬಿರವನ್ನು ಆಯೋಜಿಸಲಾಯಿತು.
ಶಿಬಿರದಲ್ಲಿ ಸಾರ್ವಜನಿಕರಿಗೆ ಕಣ್ಣಿನ ತಪಾಸಣೆ ನಡೆಸಿ, ಕಣ್ಣಿನ ಪೊರೆ ಸಮಸ್ಯೆ ಇರುವವರನ್ನು ಗುರುತಿಸಿ ಅಗತ್ಯ ವೈದ್ಯಕೀಯ ಸಲಹೆ ನೀಡಲಾಯಿತು. ಅರ್ಹ ಫಲಾನುಭವಿಗಳಿಗೆ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ಹಾಗೂ ಉಚಿತ ಮಸೂರ (ಲೆನ್ಸ್) ಅಳವಡಿಸುವ ಸೌಲಭ್ಯವನ್ನು ಒದಗಿಸಲಾಯಿತು.
ಗ್ರಾಮೀಣ ಭಾಗದ ಜನರಿಗೆ ಕಣ್ಣಿನ ಆರೋಗ್ಯದ ಬಗ್ಗೆ ಅರಿವು ಮೂಡಿಸುವುದು ಹಾಗೂ ಆರ್ಥಿಕವಾಗಿ ಹಿಂದುಳಿದವರಿಗೆ ಉಚಿತ ಕಣ್ಣಿನ ಚಿಕಿತ್ಸೆ ದೊರಕಿಸಿಕೊಡುವ ಉದ್ದೇಶದಿಂದ ಈ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು.
ಶ್ರವಣೂರು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಈ ಸಮಾಜಮುಖಿ ಕಾರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಯಿತು.
ಈ ಸಂದರ್ಭದಲ್ಲಿ ಡೈರಿಯ ಕಾರ್ಯದರ್ಶಿ ರಘು, ಸಹಾಯಕಿ ಜಯಮ್ಮ ಹಾಗೂ ಶ್ರವಣೂರು ಗ್ರಾಮದ ಸುತ್ತ ಮುತ್ತ ಗ್ರಾಮಸ್ಥರು ಉಪಸ್ಥಿತರಿದ್ದರು.
ವರದಿ: ಮಂಜು ಶ್ರವಣೂರು, ಹೊಳೆನರಸೀಪುರ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
