ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ತೀವ್ರ ಸಂಚಲನ ಮೂಡಿಸಿರುವ ‘ಸ್ಟಿಂಗ್ ಆಪರೇಷನ್’ (Sting Operation) ಮತ್ತು ಕೆಪಿಎಸ್ಸಿ (KPSC) ಹಗರಣದ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಹಗರಣಗಳನ್ನು ವ್ಯವಸ್ಥಿತವಾಗಿ ಮುಚ್ಚಿಹಾಕಲು (Cover-up) ಸರ್ಕಾರ ಯತ್ನಿಸುತ್ತಿದೆ ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ.
ಸ್ಟಿಂಗ್ ಆಪರೇಷನ್ ಪ್ರಕರಣವನ್ನು ಕಾಂಗ್ರೆಸ್ ಸರ್ಕಾರ ಅತ್ಯಂತ ಹಗುರವಾಗಿ ಪರಿಗಣಿಸಿದೆ ಹಾಗೂ ಇದರ ಹಿಂದಿರುವ ಪ್ರಮುಖರನ್ನು ರಕ್ಷಿಸುವ ಪ್ರಯತ್ನ ನಡೆಯುತ್ತಿದೆ ಎಂದು ಎಚ್ ಡಿಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೆಪಿಎಸ್ ಸಿ ನೇಮಕಾತಿ ಅಕ್ರಮಗಳು ಹಾಗೂ ಹಗರಣಗಳ ಸತ್ಯಾಂಶವನ್ನು ಹೊರಹಾಕುವ ಬದಲು, ಅದನ್ನು ಮರೆಮಾಚುವ ಕೆಲಸ ಮಾಡಲಾಗುತ್ತಿದೆ ಎಂದು ಅವರು ದೂರಿದ್ದಾರೆ.
ಸಿದ್ದರಾಮಯ್ಯ ಅವರ ವರ್ಚಸ್ಸಿಗೆ ಧಕ್ಕೆ ತರುತ್ತಿರುವವರು ಬೇರೆ ಯಾರೂ ಅಲ್ಲ, ಸ್ವತಃ ಕಾಂಗ್ರೆಸ್ ಪಕ್ಷದ ನಾಯಕರೇ ಎಂದು ಕಿಡಿಕಾರಿದ್ದಾರೆ. ಇದೇ ವೇಳೆ ಡಿಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಇಲಾಖೆಯ ಸಚಿವರ ವಿರುದ್ಧವೂ ವಾಗ್ದಾಳಿ ಮುಂದುವರೆಸಿದ್ದಾರೆ.
ರಾಜ್ಯದಲ್ಲಿ ನಡೆಯುತ್ತಿರುವ ನಿರಂತರ ರಾಜಕೀಯ ವಿವಾದಗಳು ಮತ್ತು ಹಗರಣಗಳಿಂದಾಗಿ ಕೈಗಾರಿಕೋದ್ಯಮಿಗಳು ಕರ್ನಾಟಕಕ್ಕೆ ಬಂಡವಾಳ ಹೂಡಲು ಹಾಗೂ ಬರಲು ಹಿಂಜರಿಯುತ್ತಿದ್ದಾರೆ ಎಂದು ಕುಮಾರಸ್ವಾಮಿ ಎಚ್ಚರಿಸಿದ್ದಾರೆ.
ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ ಎಬ್ಬಿಸಿರುವ ಈ ವಿದ್ಯಮಾನಗಳ ಕುರಿತು ಆಡಳಿತರೂಢ ಕಾಂಗ್ರೆಸ್ ನಾಯಕರು ಹೇಗೆ ಪ್ರತಿಕ್ರಿಯಿಸಲಿದ್ದಾರೆ ಎಂಬುದು ಕುತೂಹಲ ಮೂಡಿಸಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
