nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪತ್ರಕರ್ತನಿಗೆ ಪೊಲೀಸ್ ನೋಟಿಸ್: ಹಿಂಪಡೆಯಲು ಎಸ್ಪಿಗೆ ಮನವಿ

    October 28, 2026

    ಮರೇನಾಯಕನಹಳ್ಳಿಯಲ್ಲಿ ವೈಭವದ ವಾಲ್ಮೀಕಿ ಜಯಂತೋತ್ಸವ:   ಶ್ರೀ ಮಹರ್ಷಿ ವಾಲ್ಮೀಕಿ ಸೇವಾ ಟ್ರಸ್ಟ್ ಉದ್ಘಾಟನೆ; ಕುಂಭ-ಕಳಶ ಮೆರವಣಿಗೆ

    October 28, 2026

    ಮಧ್ಯರಾತ್ರಿ ನಾಯಿಗಳು ವಿಚಿತ್ರವಾಗಿ ಬೊಗಳುವುದೇಕೆ? ದೆವ್ವ ಕಾಣಿಸುತ್ತದೆಯೇ, ಇಲ್ಲಿದೆ ವೈಜ್ಞಾನಿಕ ಕಾರಣ!

    October 28, 2026
    Facebook Twitter Instagram
    ಟ್ರೆಂಡಿಂಗ್
    • ಪತ್ರಕರ್ತನಿಗೆ ಪೊಲೀಸ್ ನೋಟಿಸ್: ಹಿಂಪಡೆಯಲು ಎಸ್ಪಿಗೆ ಮನವಿ
    • ಮರೇನಾಯಕನಹಳ್ಳಿಯಲ್ಲಿ ವೈಭವದ ವಾಲ್ಮೀಕಿ ಜಯಂತೋತ್ಸವ:   ಶ್ರೀ ಮಹರ್ಷಿ ವಾಲ್ಮೀಕಿ ಸೇವಾ ಟ್ರಸ್ಟ್ ಉದ್ಘಾಟನೆ; ಕುಂಭ-ಕಳಶ ಮೆರವಣಿಗೆ
    • ಮಧ್ಯರಾತ್ರಿ ನಾಯಿಗಳು ವಿಚಿತ್ರವಾಗಿ ಬೊಗಳುವುದೇಕೆ? ದೆವ್ವ ಕಾಣಿಸುತ್ತದೆಯೇ, ಇಲ್ಲಿದೆ ವೈಜ್ಞಾನಿಕ ಕಾರಣ!
    • ಭಾರತೀಯ ಷೇರು ಮಾರುಕಟ್ಟೆಗೆ ಭಾರೀ ಹೊಡೆತ: ₹30 ಲಕ್ಷ ಕೋಟಿ ಸಂಪತ್ತು ಕರಗಲು 10 ಕಾರಣಗಳೇನು?
    • ಎಸ್.ಎಸ್. ವೃತ್ತದ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ವೀಕ್ಷಿಸಿದ ಜಿಲ್ಲಾಧಿಕಾರಿ ಶುಭ ಕಲ್ಯಾಣ್
    • ಮಾ.15: ಅಮಾನಿಕೆರೆಯಲ್ಲಿ ಜಲ ಕ್ರೀಡಾ ತರಬೇತಿ ಅಕಾಡೆಮಿ ಆರಂಭ
    • ಪಾವಗಡ: ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ
    • ಎಸ್ ಐಆರ್: ಅಂತಿಮ ಮತದಾರರ ಪಟ್ಟಿ ಪ್ರಕಟ: ಜಿಲ್ಲೆಯಲ್ಲಿ 20.94 ಲಕ್ಷ ಮತದಾರರು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಾ.15: ಅಮಾನಿಕೆರೆಯಲ್ಲಿ ಜಲ ಕ್ರೀಡಾ ತರಬೇತಿ ಅಕಾಡೆಮಿ ಆರಂಭ
    ತುಮಕೂರು October 28, 2026

    ಮಾ.15: ಅಮಾನಿಕೆರೆಯಲ್ಲಿ ಜಲ ಕ್ರೀಡಾ ತರಬೇತಿ ಅಕಾಡೆಮಿ ಆರಂಭ

    By Ganesh TumkuruOctober 28, 2026No Comments2 Mins Read
    amani kere

    ತುಮಕೂರು: ನಗರದ ಅಮಾನಿಕೆರೆಯಲ್ಲಿ ಜಲಕ್ರೀಡೆಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ ಜಿಲ್ಲಾಡಳಿತ ವತಿಯಿಂದ ಮಾರ್ಚ್ 15, 2026ರಂದು ಕಯಾಕಿಂಗ್ ಕ್ಯಾನೋಯಿಂಗ್ ತರಬೇತಿ ಅಕಾಡೆಮಿಯನ್ನು ಪ್ರಾರಂಭಿಸಲಾಗಿದೆ. ಕರ್ನಾಟಕ ಸ್ಟೇಟ್ ಒಲಿಂಪಿಕ್ ಅಸೋಸಿಯೇಷನ್ ಕಾರ್ಯದರ್ಶಿಗಳು ಈ ಯೋಜನೆ ಬಗ್ಗೆ ವಿಶೇಷ ಆಸಕ್ತಿ ವಹಿಸಿದ್ದು, ತುಮಕೂರು ಜಿಲ್ಲೆಯಿಂದ ಕಯಾಕಿಂಗ್ ಕ್ಯಾನೋಯಿಂಗ್ ಕ್ರೀಡೆಯಲ್ಲಿ ಉತ್ತಮ ಸಾಧನೆ ಮಾಡುವ ಸ್ಪರ್ಧಿಗಳ ತಂಡವನ್ನು ರೂಪಿಸುವ ಗುರಿ ಹೊಂದಿದ್ದಾರೆ.

    ಉಪಮುಖ್ಯಮಂತ್ರಿಗಳು ಹಾಗೂ ಕಂದಾಯ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರಾದ ಡಾ. ಜಿ. ಪರಮೇಶ್ವರ ಅವರು ಅಮಾನಿಕೆರೆಯನ್ನು ಇತ್ತೀಚಿಗೆ ಸೆಂಟರ್ ಆಫ್ ಎಕ್ಸೆಲೆನ್ಸ್ ಎಂದು ಘೋಷಿಸಿರುವುದು ಜಿಲ್ಲೆಯ ಕ್ರೀಡಾ ಅಭಿವೃದ್ಧಿಗೆ ಮತ್ತಷ್ಟು ಉತ್ತೇಜನ ನೀಡಿದೆ. ಈ ಹಿನ್ನೆಲೆಯಲ್ಲಿ, ಜಿಲ್ಲೆಯ ಶಾಲಾ–ಕಾಲೇಜುಗಳ ಪ್ರಾಚಾರೂತರೊಂದಿಗೆ ಚರ್ಚಿಸಿ, ವಿದ್ಯಾರ್ಥಿಗಳನ್ನು ವಿಶಿಷ್ಟ ಜಲಕ್ರೀಡೆಗಳಲ್ಲಿ ತೊಡಗಿಸಿಕೊಳ್ಳಲು ಅಗತ್ಯ ಕ್ರಮಗಳನ್ನು ಜಿಲ್ಲಾಡಳಿತ ಕೈಗೊಂಡಿದೆ.

    ಇದರ ಫಲವಾಗಿ ಕಳೆದ 15 ದಿನಗಳಿಂದ 10ರಿಂದ 14 ವರ್ಷದ ಮಕ್ಕಳಿಗೆ ಕಯಾಕಿಂಗ್ ಕ್ಯಾನೋಯಿಂಗ್ ಕ್ರೀಡೆಯಲ್ಲಿ ತರಬೇತಿ ನೀಡಲಾಗುತ್ತಿದೆ. ಬೆಂಗಳೂರಿನಿಂದ ಆಗಮಿಸಿರುವ ತರಬೇತುದಾರರು ತುಮಕೂರಿನಲ್ಲಿಯೇ ವಾಸ್ಯವ ಹೂಡಿ, ಪ್ರತಿದಿನ ಬೆಳಿಗ್ಗೆ 7 ಗಂಟೆಗೆ ಹಾಗೂ ಸಂಜೆ 4ರಿಂದ 6 ಗಂಟೆಯವರೆಗೆ ಎರಡು ಬ್ಯಾಚ್ಗಳಲ್ಲಿ ಮಕ್ಕಳಿಗೆ ತರಬೇತಿ ನೀಡುತ್ತಿದ್ದಾರೆ. ವಿವಿಧ ಸರ್ಕಾರಿ ಹಾಗೂ ಖಾಸಗಿ ಶಾಲೆಗಳ ವಿದ್ಯಾರ್ಥಿಗಳು ಈ ಕ್ರೀಡೆಯ ಬಗ್ಗೆ ಹೆಚ್ಚಿನ ಆಸಕ್ತಿ ತೋರುತ್ತಿದ್ದು, ಪ್ರಸ್ತುತ ತರಬೇತಿ ಪಡೆಯುತ್ತಿರುವ ಮಕ್ಕಳು ಮುಂದಿನ ತಿಂಗಳು ಬೆಂಗಳೂರಿನಲ್ಲಿ ನಡೆಯಲಿರುವ ಮಿನ್ ಒಲಿಂಪಿಕ್ಸ್ ನಲ್ಲಿ ಭಾಗವಹಿಸಲಿದ್ದಾರೆ.

    ಸುಮಾರು 8 ಎಕರೆ ವಿಸ್ತೀರ್ಣದ ಅಮಾನಿಕೆರೆಯನ್ನು ಸ್ವಚ್ಛಗೊಳಿಸಿ, ಕಯಾಕಿಂಗ್ ಕ್ಯಾನೋಯಿಂಗ್ ತರಬೇತಿ ಅಕಾಡೆಮಿಯನ್ನು ವ್ಯವಸ್ಥಿತವಾಗಿ ಅಭಿವೃದ್ಧಿಪಡಿಸುವುದು ಜಿಲ್ಲಾಡಳಿತದ ಉದ್ದೇಶವಾಗಿದೆ. ಇದಕ್ಕಾಗಿ ಅಗತ್ಯ ದೋಣಿಗಳ ವ್ಯವಸ್ಥೆ, ರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿರುವ ತರಬೇತುದಾರರ ಸೇವೆ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಲು ಜಿಲ್ಲಾಡಳಿತ ಸಿದ್ಧವಿದೆ. ಈ ಅವಕಾಶವನ್ನು ಸದುಪಯೋಗ ಬಳೆಸಿಕೊಂಡು ಜಿಲ್ಲೆಯ ಮಕ್ಕಳಿಗೆ ಗುಣಮಟ್ಟದ ತರಬೇತಿ ನೀಡಿ, ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡುವ ಸಾಮರ್ಥ್ಯವಿರುವ ತಂಡವನ್ನು ರೂಪಿಸುವ ಗುರಿ ಹೊಂದಲಾಗಿದೆ.

    ತುಮಕೂರು ಜಿಲ್ಲೆಯಲ್ಲಿ ಕ್ರೀಡಾ ಸಂಸ್ಕೃತಿಯನ್ನು ಬೆಳೆಸುವುದು ಮತ್ತು ಯುವಜನತೆಯನ್ನು ಕ್ರೀಡೆಗಳತ್ತ ಆಕರ್ಷಿಸುವುದು ಜಿಲ್ಲಾಡಳಿತದ ಪ್ರಮುಖ ಆಶಯವಾಗಿದೆ. ಈ ನಿಟ್ಟಿನಲ್ಲಿ ಜಿಲ್ಲೆಯ ಪೋಷಕರು ತಮ್ಮ ಮಕ್ಕಳನ್ನು ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಲು ಪ್ರೋತ್ಸಾಹಿಸಬೇಕು ಹಾಗೂ ಅಮಾನಿಕೆರೆಯಲ್ಲಿ ನಡೆಯುತ್ತಿರುವ ಕಯಾಕಿಂಗ್ ಕ್ಯಾನೋಯಿಂಗ್ ತರಬೇತಿಯಲ್ಲಿ ಮಕ್ಕಳು ಭಾಗವಹಿಸುವಂತೆ ಉತ್ತೇಜಿಸಬೇಕು ಎಂದು ಜಿಲ್ಲಾಡಳಿತ ಮನವಿ ಮಾಡಿದೆ. ಬೆಂಗಳೂರಿನಿಂದ ತರಬೇತುದಾರರು ಪ್ರತಿದಿನ ಮುಂಜಾನೆ 4 ಗಂಟೆಗೆ ಪ್ರಯಾಣಿಸಿ ಅಮಾನಿಕೆರೆಯಲ್ಲಿ ಮಕ್ಕಳಿಗೆ ತರಬೇತಿ ನೀಡುತ್ತಿರುವುದು ಈ ಕ್ರೀಡೆಯ ಬೆಳವಣಿಗೆ ಬಗ್ಗೆ ತೋರುತ್ತಿರುವ ಬದ್ಧತೆಗೆ ಸಾಕ್ಷಿಯಾಗಿದೆ. ತುಮಕೂರು ಕೇವಲ ಶೈಕ್ಷಣಿಕ ಜಿಲ್ಲೆಯಾಗಿ ಉಳಿಯದೆ, ಕ್ರೀಡಾ ಕ್ಷೇತ್ರದಲ್ಲಿಯೂ ರಾಜ್ಯಕ್ಕೆ ಮಾದರಿಯಾಗಬೇಕು ಎಂಬುದು ಉಪಮುಖ್ಯಮಂತ್ರಿಗಳು ಹಾಗೂ ಕ್ರೀಡಾ ಸಚಿವರ ಕನಸಾಗಿದೆ. ಈ ಕನಸನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಅಮಾನಿಕೆರೆಯಲ್ಲಿ ಜಲಕ್ರೀಡೆಗಳಿಗೆ ಉತ್ತೇಜನ ನೀಡುವುದು ಮಹತ್ವದ ಹೆಜ್ಜೆಯಾಗಿದ್ದು, ಇದಕ್ಕೆ ಜಿಲ್ಲೆಯ ಸಾರ್ವಜನಿಕರು, ಪೋಷಕರು, ಶಿಕ್ಷಣ ಸಂಸ್ಥೆಗಳು ಹಾಗೂ ಕ್ರೀಡಾಸಕ್ತರು ಸಹಕಾರ ನೀಡಬೇಕು ಎಂದು ಜಿಲ್ಲಾಡಳಿತ ಕೋರಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

    Ganesh Tumkuru
    • Website

    Related Posts

    ಪತ್ರಕರ್ತನಿಗೆ ಪೊಲೀಸ್ ನೋಟಿಸ್: ಹಿಂಪಡೆಯಲು ಎಸ್ಪಿಗೆ ಮನವಿ

    October 28, 2026

    ಎಸ್.ಎಸ್. ವೃತ್ತದ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ವೀಕ್ಷಿಸಿದ ಜಿಲ್ಲಾಧಿಕಾರಿ ಶುಭ ಕಲ್ಯಾಣ್

    October 28, 2026

    ಎಸ್ ಐಆರ್: ಅಂತಿಮ ಮತದಾರರ ಪಟ್ಟಿ ಪ್ರಕಟ: ಜಿಲ್ಲೆಯಲ್ಲಿ 20.94 ಲಕ್ಷ ಮತದಾರರು

    October 28, 2026

    Leave A Reply Cancel Reply

    Our Picks

    ಭಾರತೀಯ ಷೇರು ಮಾರುಕಟ್ಟೆಗೆ ಭಾರೀ ಹೊಡೆತ: ₹30 ಲಕ್ಷ ಕೋಟಿ ಸಂಪತ್ತು ಕರಗಲು 10 ಕಾರಣಗಳೇನು?

    October 28, 2026

    ಕ್ರೆಡಿಟ್ ಕಾರ್ಡ್ ಹೊಂದಿರುವ ಪತಿ ಮೃತಪಟ್ಟರೆ ಸಾಲವನ್ನು ಪತ್ನಿ ತೀರಿಸಬೇಕಾ? ಬ್ಯಾಂಕಿಂಗ್ ನಿಯಮಗಳೇನು?

    October 26, 2026

    PM Kisan ಹಣ ಯಾವಾಗ ಬರುತ್ತೆ? ರೈತರು ಈ ಕೆಲಸಗಳನ್ನು ಮಾಡದಿದ್ದರೆ ಕಂತು ಸ್ಥಗಿತವಾಗಬಹುದು!

    October 26, 2026

    ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ!  ಹವಾಮಾನ ಇಲಾಖೆಯಿಂದ ಮಹತ್ವದ ಸೂಚನೆ ಇಲ್ಲಿದೆ

    October 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಪತ್ರಕರ್ತನಿಗೆ ಪೊಲೀಸ್ ನೋಟಿಸ್: ಹಿಂಪಡೆಯಲು ಎಸ್ಪಿಗೆ ಮನವಿ

    October 28, 2026

    ತುಮಕೂರು : ನಗರದ ಶ್ರೀ ಶಿವಕುಮಾರ ಸ್ವಾಮೀಜಿ ವೃತ್ತಕ್ಕೆ ‘ತುಮಕೂರು ಸ್ಕ್ವೇರ್’ ಎಂದು ಮರುನಾಮಕರಣ ಮಾಡುವ ಜಿಲ್ಲಾಡಳಿತದ ನಿರ್ಧಾರದ ಕುರಿತು…

    ಮರೇನಾಯಕನಹಳ್ಳಿಯಲ್ಲಿ ವೈಭವದ ವಾಲ್ಮೀಕಿ ಜಯಂತೋತ್ಸವ:   ಶ್ರೀ ಮಹರ್ಷಿ ವಾಲ್ಮೀಕಿ ಸೇವಾ ಟ್ರಸ್ಟ್ ಉದ್ಘಾಟನೆ; ಕುಂಭ-ಕಳಶ ಮೆರವಣಿಗೆ

    October 28, 2026

    ಮಧ್ಯರಾತ್ರಿ ನಾಯಿಗಳು ವಿಚಿತ್ರವಾಗಿ ಬೊಗಳುವುದೇಕೆ? ದೆವ್ವ ಕಾಣಿಸುತ್ತದೆಯೇ, ಇಲ್ಲಿದೆ ವೈಜ್ಞಾನಿಕ ಕಾರಣ!

    October 28, 2026

    ಭಾರತೀಯ ಷೇರು ಮಾರುಕಟ್ಟೆಗೆ ಭಾರೀ ಹೊಡೆತ: ₹30 ಲಕ್ಷ ಕೋಟಿ ಸಂಪತ್ತು ಕರಗಲು 10 ಕಾರಣಗಳೇನು?

    October 28, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.