ತುಮಕೂರು: ತುಮಕೂರು ನಗರದ ಎಸ್.ಎಸ್.ವೃತ್ತದಲ್ಲಿ ಪ್ರಗತಿಯಲ್ಲಿರುವ ಅಭಿವೃದ್ಧಿ ಕಾಮಗಾರಿಗಳನ್ನು ಜಿಲ್ಲಾಧಿಕಾರಿ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಡಾ. ಎನ್. ತಿಪ್ಪೇಸ್ವಾಮಿ, ತುಮಕೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಹಾಗೂ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಕಾಮಗಾರಿಗಳ ಪ್ರಸ್ತುತ ಪ್ರಗತಿಯನ್ನು ಪರಿಶೀಲಿಸಿದ ಜಿಲ್ಲಾಧಿಕಾರಿಗಳು, ನಿಗದಿತ ಕಾಲಮಿತಿಯೊಳಗೆ ಗುಣಮಟ್ಟದೊಂದಿಗೆ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಕಾಮಗಾರಿಗಳ ಅನುಷ್ಠಾನದಲ್ಲಿ ಯಾವುದೇ ವಿಳಂಬವಾಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಹಾಗೂ ಸಾರ್ವಜನಿಕರ ಸಂಚಾರ ಮತ್ತು ದೈನಂದಿನ ಚಟುವಟಿಕೆಗಳಿಗೆ ತೊಂದರೆಯಾಗದಂತೆ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು ಎಂದು ನಿರ್ದೇಶನ ನೀಡಿದರು.
ಈ ವೇಳೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಎಸ್.ಎಸ್. ವೃತ್ತದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಹಾಗೂ ಕೈಗೊಂಡಿರುವ ಕ್ರಮಗಳ ಕುರಿತು ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
