ತುಮಕೂರು : ರಾಜ್ಯದ ಉಪಮುಖ್ಯಮಂತ್ರಿ ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ಅವರು ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದು, ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದ ಹಿನ್ನೆಲೆಯಲ್ಲಿ, ಶೀಘ್ರ ಗುಣಮುಖರಾಗಲೆಂದು ತುಮಕೂರು ನಗರದ ಟೌನ್ ಹಾಲ್ ವೃತ್ತದಲ್ಲಿರುವ ಜೋಡಿ ದರ್ಗಾ ಹಾಗೂ ನಾಗ ಗಣಪತಿ ಮತ್ತು ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಅಭಿಮಾನಿಗಳು ಮತ್ತು ಕಾಂಗ್ರೆಸ್ ಕಾರ್ಯಕರ್ತರು ವಿಶೇಷ ಪೂಜೆ ಸಲ್ಲಿಸಿದರು.
ಡಾ. ಜಿ. ಪರಮೇಶ್ವರ್ ಅವರು ಶೀಘ್ರ ಗುಣಮುಖರಾಗಿ ಮತ್ತೆ ಜನಸೇವೆಯಲ್ಲಿ ತೊಡಗಿಸಿಕೊಳ್ಳಲಿ ಎಂದು ಪ್ರಾರ್ಥಿಸಿದ ಅಭಿಮಾನಿಗಳು, ಅವರ ಆರೋಗ್ಯ ಸುಧಾರಣೆಗಾಗಿ ದೇವರ ಮೊರೆ ಹೋದರು.
ಈ ಸಂದರ್ಭದಲ್ಲಿ ಮಾತನಾಡಿದ ಕೋರಾ ಗ್ರಾಮ ಪಂಚಾಯಿತಿಯ ಮಾಜಿ ಸದಸ್ಯ ನಜೀರ್ ಅಹ್ಮದ್, “ಡಾ. ಜಿ. ಪರಮೇಶ್ವರ್ ಅವರು ಸರಳ, ಸಜ್ಜನಿಕೆಯ ಹಾಗೂ ಮಾತೃ ಹೃದಯದ ರಾಜಕಾರಣಿ. ಅವರು ದಿಢೀರನೆ ಆಸ್ಪತ್ರೆಗೆ ದಾಖಲಾಗಿರುವ ಸುದ್ದಿ ಆತಂಕ ಮೂಡಿಸಿತ್ತು. ಇದೀಗ ಅವರ ಆರೋಗ್ಯ ಸುಧಾರಿಸುತ್ತಿರುವುದು ಸಂತಸ ತಂದಿದೆ. ಅವರು ಶೀಘ್ರ ಗುಣಮುಖರಾಗಲೆಂದು ವಿಶೇಷ ಪೂಜೆ ಸಲ್ಲಿಸಿದ್ದೇವೆ. ಮುಂದಿನ ದಿನಗಳಲ್ಲಿ ಅವರಿಗೆ ಮುಖ್ಯಮಂತ್ರಿ ಸ್ಥಾನ ಲಭಿಸಲಿ ಎಂಬುದು ನಮ್ಮ ಆಶಯ,” ಎಂದರು.
ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಪಂಗಡ ವಿಭಾಗದ ಅಧ್ಯಕ್ಷ ಶಿವಕುಮಾರ್ ಮಾತನಾಡಿ, “ಡಾ. ಜಿ. ಪರಮೇಶ್ವರ್ ಅವರು ಆಸ್ಪತ್ರೆಗೆ ದಾಖಲಾಗಿರುವ ವಿಷಯ ತಿಳಿದು ಆತಂಕವಾಗಿತ್ತು. ಇದೀಗ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿರುವುದು ಸಮಾಧಾನ ತಂದಿದೆ. ಅವರು ಸಂಪೂರ್ಣ ಗುಣಮುಖರಾಗಲೆಂದು ವಿಶೇಷ ಪೂಜೆ ಸಲ್ಲಿಸಿದ್ದೇವೆ,” ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ನಯಾಜ್ ಅಹ್ಮದ್, ನಜೀರ್ ಅಹ್ಮದ್, ವಕೀಲ ಕುಮಾರಸ್ವಾಮಿ, ಚಂದನ್, ಮಲ್ಲಿಕಾರ್ಜುನಯ್ಯ, ಗೋವಿಂದರಾಜು, ಖದೀರ್ ಅಹ್ಮದ್ ಸೇರಿದಂತೆ ಡಾ. ಜಿ. ಪರಮೇಶ್ವರ್ ಅವರ ಅಭಿಮಾನಿ ಬಳಗದ ಮುಖಂಡರು ಉಪಸ್ಥಿತರಿದ್ದರು.
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
