nammatumakuru

    Subscribe to Updates

    Get the latest creative news from FooBar about art, design and business.

    What's Hot

    ವಕೀಲರ ಮೇಲಿನ ಹಲ್ಲೆ ಖಂಡಿಸಿ ತುಮಕೂರಿನಲ್ಲಿ ಪ್ರತಿಭಟನೆ: ವಕೀಲರ ಸಂರಕ್ಷಣಾ ಕಾಯ್ದೆ ಕಠಿಣಗೊಳಿಸಲು ಆಗ್ರಹ

    October 29, 2026

    ಕೃಷಿ ಹೊಂಡದಲ್ಲಿ ಮುಳುಗಿ ಮೃತಪಟ್ಟ ದಂಪತಿ: ಶಾಸಕ ಕೆ.ಎನ್. ರಾಜಣ್ಣ ಸಂತಾಪ

    October 29, 2026

    ಮಳೆ ಕೊರತೆ: ಪಾವಗಡಕ್ಕೆ ಜಿಲ್ಲಾಧಿಕಾರಿ ಭೇಟಿ

    October 29, 2026
    Facebook Twitter Instagram
    ಟ್ರೆಂಡಿಂಗ್
    • ವಕೀಲರ ಮೇಲಿನ ಹಲ್ಲೆ ಖಂಡಿಸಿ ತುಮಕೂರಿನಲ್ಲಿ ಪ್ರತಿಭಟನೆ: ವಕೀಲರ ಸಂರಕ್ಷಣಾ ಕಾಯ್ದೆ ಕಠಿಣಗೊಳಿಸಲು ಆಗ್ರಹ
    • ಕೃಷಿ ಹೊಂಡದಲ್ಲಿ ಮುಳುಗಿ ಮೃತಪಟ್ಟ ದಂಪತಿ: ಶಾಸಕ ಕೆ.ಎನ್. ರಾಜಣ್ಣ ಸಂತಾಪ
    • ಮಳೆ ಕೊರತೆ: ಪಾವಗಡಕ್ಕೆ ಜಿಲ್ಲಾಧಿಕಾರಿ ಭೇಟಿ
    • ಡಾ.ಜಿ.ಪರಮೇಶ್ವರ್ ಶೀಘ್ರ ಗುಣಮುಖರಾಗಲೆಂದು ವಿಶೇಷ ಪೂಜೆ
    • ಕನ್ನಡ ಭಾಷೆಗೆ ಅಭಿನಯಿಸುವ ಶಕ್ತಿಯಿದೆ : ಪ್ರೊ.ಎಂ.ಕೃಷ್ಣಗೌಡ
    • ಡಿಸಿಎಂ ಡಾ.ಜಿ.ಪರಮೇಶ್ವರ್ ಆರೋಗ್ಯ ಚೇತರಿಕೆಗೆ ವಿಶೇಷ ಪೂಜೆ |  ₹1.30 ಕೋಟಿ ವೆಚ್ಚದಲ್ಲಿ ಐತಿಹಾಸಿಕ ಶೈಲಿಯ ರಾಜಗೋಪುರ ನಿರ್ಮಾಣ ದಾನಿಗಳ ಸಹಕಾರಕ್ಕೆ ಮನವಿ
    • ನವೆಂಬರ್ 1ರಿಂದ 5 ಪ್ರಮುಖ ಬದಲಾವಣೆಗಳು: ಗ್ಯಾಸ್ ಸಿಲಿಂಡರ್, ಜಿಎಸ್‌ ಟಿ, ಮೊಬೈಲ್ ಕರೆ ನಿಯಮಗಳ ಮೇಲೆ ಗಮನವಿರಲಿ!
    • ಕ್ಯಾನ್ಸರ್ ಔಷಧಗಳ ಬೆಲೆಯಲ್ಲಿ ಭಾರಿ ಇಳಿಕೆ: ಕ್ಯಾನ್ಸರ್ ರೋಗಿಗಳಿಗೆ ಬಿಗ್ ರಿಲೀಫ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಳೆ ಕೊರತೆ: ಪಾವಗಡಕ್ಕೆ ಜಿಲ್ಲಾಧಿಕಾರಿ ಭೇಟಿ
    ಪಾವಗಡ October 29, 2026

    ಮಳೆ ಕೊರತೆ: ಪಾವಗಡಕ್ಕೆ ಜಿಲ್ಲಾಧಿಕಾರಿ ಭೇಟಿ

    By Ganesh TumkuruOctober 29, 2026No Comments2 Mins Read
    shubha kalyan

    ಪಾವಗಡ: ತುಮಕೂರು ಜಿಲ್ಲೆಯಲ್ಲಿ ಮಳೆ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಗುರುವಾರ ಪಾವಗಡ ತಾಲೂಕಿಗೆ ಭೇಟಿ ನೀಡಿ ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಪೂರೈಕೆ ಹಾಗೂ ವಿವಿಧ ಮೂಲ ಸೌಕರ್ಯಗಳ ಸ್ಥಿತಿಗತಿಯನ್ನು ಪರಿಶೀಲಿಸಿದರು.

    ತಾಲೂಕಿನ ರಾಜವಂತಿ ಕಾಲೋನಿ, ಚಿಕ್ಕನಾಯಕನಹಳ್ಳಿ, ದೊಡ್ಡಹಟ್ಟಿ ಹಾಗೂ ಬಾಡನೂರು ಗ್ರಾಮಗಳಿಗೆ ಭೇಟಿ ನೀಡಿದ ಅವರು, ಕೊಳವೆ ಬಾವಿಗಳ ಸ್ಥಿತಿಗತಿ, ರೈತರಿಗೆ ವಿತರಿಸಿರುವ ಮೇವಿನ ಬೀಜಗಳ ಬಳಕೆ ಮತ್ತು ಮೇವು ಬೆಳೆದಿರುವ ಕುರಿತು ಸ್ಥಳ ಪರಿಶೀಲನೆ ನಡೆಸಿದರು.

    ನಂತರ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಬರ ನಿರ್ವಹಣೆ ಕುರಿತು ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಕುಡಿಯುವ ನೀರಿನ ಪೂರೈಕೆ, ಜಾನುವಾರುಗಳಿಗೆ ಮೇವು ಲಭ್ಯತೆ, ತುಂಗಭದ್ರಾ ನೀರಿನ ಸಮಸ್ಯೆ, ಉದ್ಯೋಗ ಖಾತ್ರಿ ಯೋಜನೆ ಹಾಗೂ ತುರ್ತು ಪರಿಹಾರ ಕಾಮಗಾರಿಗಳ ಅನುಷ್ಠಾನದ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

    ಜಿಲ್ಲೆಯಲ್ಲಿ ಶೇ.46ರಷ್ಟು ಮಳೆ ಕೊರತೆ

    ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ ಶುಭ ಕಲ್ಯಾಣ, ತುಮಕೂರು ಜಿಲ್ಲೆಯಲ್ಲಿ ಶೇ.46ರಷ್ಟು ಮಳೆ ಕೊರತೆಯಾಗಿದ್ದು, ಜಿಲ್ಲೆಯ ಎಲ್ಲ 10 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ವಿವಿಧ ತಾಲೂಕುಗಳಲ್ಲಿ ಕುಡಿಯುವ ನೀರು, ಮೇವು ಹಾಗೂ ಮೂಲಸೌಕರ್ಯಗಳ ಸ್ಥಿತಿಗತಿಯನ್ನು ಪರಿಶೀಲಿಸಲಾಗುತ್ತಿದೆ ಎಂದು ತಿಳಿಸಿದರು.

    ಪಾವಗಡ ತಾಲೂಕಿನಲ್ಲಿ ಬೆಸ್ಕಾಂ ಮತ್ತು ತುಂಗಭದ್ರಾ ನೀರಿನ ಸಮಸ್ಯೆಗಳ ಕುರಿತು ದೂರುಗಳು ಬಂದಿದ್ದು, ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ. ಮೇವಿನ ಕೊರತೆಯಿಂದ ತಾಲೂಕಿನಲ್ಲಿ ಹಾಲಿನ ಉತ್ಪಾದನೆ ಕುಸಿದಿದ್ದರೂ, ಜಿಲ್ಲೆಯಲ್ಲಿ ಒಟ್ಟಾರೆ ಹಾಲಿನ ಉತ್ಪಾದನೆ 30 ಸಾವಿರ ಲೀಟರ್ ಹೆಚ್ಚಳವಾಗಿದೆ ಎಂದು ಹೇಳಿದರು.

    ನೀರಿನ ಸಮಸ್ಯೆ ತಲೆದೋರದಂತೆ ಮುನ್ನೆಚ್ಚರಿಕೆ

    ತಾಲೂಕಿನ 34 ಗ್ರಾಮ ಪಂಚಾಯಿತಿಗಳ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಜನರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಈ ಸಂಬಂಧ ವಾಟರ್‌ಮನ್‌ಗಳ ಸಭೆ ನಡೆಸಿ, ನೀರು ಪೂರೈಕೆಯ ವ್ಯವಸ್ಥೆಯನ್ನು ಸಮರ್ಪಕವಾಗಿ ನಿರ್ವಹಿಸುವಂತೆ ಸೂಚಿಸಲಾಗಿದೆ ಎಂದರು.

    ಬರ ಪರಿಸ್ಥಿತಿ ನಿರ್ವಹಣೆಗಾಗಿ ತುಮಕೂರು ಜಿಲ್ಲೆಗೆ ₹15 ಕೋಟಿ ಅನುದಾನ ಬಿಡುಗಡೆಯಾಗಿದ್ದು, ಈ ಅನುದಾನದಡಿ ಕೊಳವೆಬಾವಿಗಳ ಸ್ಥಿತಿಗತಿಯನ್ನು ಪರಿಶೀಲಿಸಲಾಗುತ್ತಿದೆ. ಪಾವಗಡ ತಾಲೂಕಿನಲ್ಲಿ ಶೇ.60ರಷ್ಟು ಕೊಳವೆ ಬಾವಿಗಳು ಯಶಸ್ವಿಯಾಗಿರುವ ಕುರಿತು ಪರಿಶೀಲನೆ ನಡೆಸಲಾಗಿದೆ ಎಂದು ತಿಳಿಸಿದರು.

    ಗ್ರಾಮ ಪಂಚಾಯಿತಿಗಳ ಅಭಿವೃದ್ಧಿ ಕಾರ್ಯಗಳಿಗೆ ಅನುದಾನದ ಕೊರತೆ ಇರುವ ಬಗ್ಗೆಯೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಂದ ಮಾಹಿತಿ ಪಡೆಯಲಾಗಿದೆ. ಸಾರ್ವಜನಿಕರು ಕುಡಿಯುವ ನೀರು ಸೇರಿದಂತೆ ಯಾವುದೇ ಸಮಸ್ಯೆ ಎದುರಿಸಿದರೆ ದಿನದ 24 ಗಂಟೆಯೂ ಕಾರ್ಯನಿರ್ವಹಿಸುವ ತುರ್ತು ಸಂಪರ್ಕ ಸಂಖ್ಯೆಗಳಿಗೆ ಕರೆ ಮಾಡಿ ದೂರು ಸಲ್ಲಿಸಬಹುದು ಎಂದು ಹೇಳಿದರು.

    ತುರ್ತು ಸಂಪರ್ಕ ಸಂಖ್ಯೆಗಳು: 7304975519,/ 08162-213400.

    ಜಿಲ್ಲಾಧಿಕಾರಿಗೆ ರೈತ ಸಂಘದಿಂದ ಮನವಿ

    ಪಾವಗಡ ತಾಲೂಕಿನಲ್ಲಿ ಬರ ಪರಿಸ್ಥಿತಿ ತೀವ್ರಗೊಂಡಿದ್ದು, ಕೆರೆ-ಕುಂಟೆಗಳು ಬತ್ತಿಹೋಗಿವೆ. ಇದರಿಂದ ಜನರು ಮತ್ತು ಜಾನುವಾರುಗಳು ನೀರಿಗಾಗಿ ಪರದಾಡುವಂತಾಗಿದೆ ಎಂದು ರೈತ ಸಂಘದ ಅಧ್ಯಕ್ಷ ಪೂಜಾರಪ್ಪ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರು. ಬರದಿಂದ ರೈತರು ಎದುರಿಸುತ್ತಿರುವ ಸಮಸ್ಯೆಗಳನ್ನು ವಿವರಿಸಿ, ಅಗತ್ಯ ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಮನವಿ ಪತ್ರ ಸಲ್ಲಿಸಿದರು.

    ಈ ಸಂದರ್ಭದಲ್ಲಿ ತಹಶೀಲ್ದಾರ್ ವೈ. ರವಿ, ತಾಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ಮಧುಸೂಧನ್, ವಿವಿಧ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಉಪಸ್ಥಿತರಿದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

    Ganesh Tumkuru
    • Website

    Related Posts

    ಪಾವಗಡ: ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

    October 28, 2026

    ಎತ್ತಿನಹೊಳೆ ನಾಲಾ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ: ಎನ್‌.ಡಿ.ಎ ಮೈತ್ರಿಕೂಟದ ಪ್ರತಿಭಟನೆಯಲ್ಲಿ ಮಾಜಿ ಶಾಸಕ ಕೆ.ಎಂ.ತಿಮ್ಮರಾಯಪ್ಪ ಆಗ್ರಹ

    October 6, 2026

    ಕೋಟಗುಡ್ಡ ಸಹನಾ ಶಾಲೆಗೆ “ಪರಿಸರ ಶಾಲಾ ಪ್ರಶಸ್ತಿ”

    September 29, 2026

    Leave A Reply Cancel Reply

    Our Picks

    ಕ್ಯಾನ್ಸರ್ ಔಷಧಗಳ ಬೆಲೆಯಲ್ಲಿ ಭಾರಿ ಇಳಿಕೆ: ಕ್ಯಾನ್ಸರ್ ರೋಗಿಗಳಿಗೆ ಬಿಗ್ ರಿಲೀಫ್

    October 29, 2026

    ಭಾರತೀಯ ಷೇರು ಮಾರುಕಟ್ಟೆಗೆ ಭಾರೀ ಹೊಡೆತ: ₹30 ಲಕ್ಷ ಕೋಟಿ ಸಂಪತ್ತು ಕರಗಲು 10 ಕಾರಣಗಳೇನು?

    October 28, 2026

    ಕ್ರೆಡಿಟ್ ಕಾರ್ಡ್ ಹೊಂದಿರುವ ಪತಿ ಮೃತಪಟ್ಟರೆ ಸಾಲವನ್ನು ಪತ್ನಿ ತೀರಿಸಬೇಕಾ? ಬ್ಯಾಂಕಿಂಗ್ ನಿಯಮಗಳೇನು?

    October 26, 2026

    PM Kisan ಹಣ ಯಾವಾಗ ಬರುತ್ತೆ? ರೈತರು ಈ ಕೆಲಸಗಳನ್ನು ಮಾಡದಿದ್ದರೆ ಕಂತು ಸ್ಥಗಿತವಾಗಬಹುದು!

    October 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ವಕೀಲರ ಮೇಲಿನ ಹಲ್ಲೆ ಖಂಡಿಸಿ ತುಮಕೂರಿನಲ್ಲಿ ಪ್ರತಿಭಟನೆ: ವಕೀಲರ ಸಂರಕ್ಷಣಾ ಕಾಯ್ದೆ ಕಠಿಣಗೊಳಿಸಲು ಆಗ್ರಹ

    October 29, 2026

    ತುಮಕೂರು: ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಿನಲ್ಲಿ ಹಿರಿಯ ವಕೀಲ ಸಣ್ಣಕ್ಕಿ ವೆಂಕಟೇಶ್ ಅವರ ಮೇಲೆ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿರುವುದನ್ನು ಖಂಡಿಸಿ…

    ಕೃಷಿ ಹೊಂಡದಲ್ಲಿ ಮುಳುಗಿ ಮೃತಪಟ್ಟ ದಂಪತಿ: ಶಾಸಕ ಕೆ.ಎನ್. ರಾಜಣ್ಣ ಸಂತಾಪ

    October 29, 2026

    ಮಳೆ ಕೊರತೆ: ಪಾವಗಡಕ್ಕೆ ಜಿಲ್ಲಾಧಿಕಾರಿ ಭೇಟಿ

    October 29, 2026

    ಡಾ.ಜಿ.ಪರಮೇಶ್ವರ್ ಶೀಘ್ರ ಗುಣಮುಖರಾಗಲೆಂದು ವಿಶೇಷ ಪೂಜೆ

    October 29, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.