ಮಧುಗಿರಿ : ತಾಲ್ಲೂಕಿನ ಕೊಡಿಗೇನಹಳ್ಳಿ ಹೋಬಳಿಯ ಶ್ರಾವಂಡನಹಳ್ಳಿ ಗ್ರಾಮದ ಲಕ್ಷ್ಮಣ ನಾಯ್ಕ ಮತ್ತು ನಾಗಮ್ಮ ದಂಪತಿಗಳು ಕೃಷಿ ಹೊಂಡದಲ್ಲಿ ಮುಳುಗಿ ಮೃತಪಟ್ಟ ಘಟನೆಗೆ ಶಾಸಕ ಕೆ.ಎನ್. ರಾಜಣ್ಣ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಅಡಿಕೆ ತೋಟದಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಕುಡಿಯುವ ನೀರು ತರಲು ತೆರಳಿದ ನಾಗಮ್ಮ ಆಕಸ್ಮಿಕವಾಗಿ ಕೃಷಿ ಹೊಂಡಕ್ಕೆ ಬಿದ್ದು ಮುಳುಗಿದ್ದಾರೆ. ಪತ್ನಿಯನ್ನು ರಕ್ಷಿಸಲು ಹೊಂಡಕ್ಕೆ ಇಳಿದ ಲಕ್ಷ್ಮಣ ನಾಯ್ಕ ಅವರೂ ನೀರಿನಲ್ಲಿ ಮುಳುಗಿದ್ದು, ದುರದೃಷ್ಟವಶಾತ್ ಇಬ್ಬರೂ ಮೃತಪಟ್ಟಿದ್ದಾರೆ.
ಘಟನೆ ಹಿನ್ನೆಲೆಯಲ್ಲಿ ಗ್ರಾಮಕ್ಕೆ ಭೇಟಿ ನೀಡಿದ ಶಾಸಕ ಕೆ.ಎನ್. ರಾಜಣ್ಣ ಅವರು ಮೃತ ದಂಪತಿಗಳ ಅಂತಿಮ ದರ್ಶನ ಪಡೆದು, ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
