nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪ್ರಜಾಸೇವೆ ಆಂದೋಲನದಡಿ ಬಾಕಿ ಅರ್ಜಿಗಳ ತ್ವರಿತ ವಿಲೇವಾರಿಗೆ ಜಿಲ್ಲಾಧಿಕಾರಿ ಸೂಚನೆ

    October 31, 2026

    ನೀಲಿಹಳ್ಳಿ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ; ಪರ್ಯಾಯ ನೀರು ಪೂರೈಕೆಗೆ ಸೂಚನೆ

    October 31, 2026

    ಮಧುಗಿರಿ ತಾಲೂಕಿನಲ್ಲಿ ಹೈನುಗಾರರಿಗೆ ₹63 ಲಕ್ಷದ ಸೌಲಭ್ಯ ಹಾಗೂ ಪರಿಹಾರ ವಿತರಣೆ

    October 31, 2026
    Facebook Twitter Instagram
    ಟ್ರೆಂಡಿಂಗ್
    • ಪ್ರಜಾಸೇವೆ ಆಂದೋಲನದಡಿ ಬಾಕಿ ಅರ್ಜಿಗಳ ತ್ವರಿತ ವಿಲೇವಾರಿಗೆ ಜಿಲ್ಲಾಧಿಕಾರಿ ಸೂಚನೆ
    • ನೀಲಿಹಳ್ಳಿ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ; ಪರ್ಯಾಯ ನೀರು ಪೂರೈಕೆಗೆ ಸೂಚನೆ
    • ಮಧುಗಿರಿ ತಾಲೂಕಿನಲ್ಲಿ ಹೈನುಗಾರರಿಗೆ ₹63 ಲಕ್ಷದ ಸೌಲಭ್ಯ ಹಾಗೂ ಪರಿಹಾರ ವಿತರಣೆ
    • ಬೆಂಗಳೂರಿನಲ್ಲಿ ಸೆಕ್ಯುರಿಟಿ ಸಿಬ್ಬಂದಿಯಾಗಿದ್ದ 55 ವರ್ಷದ ವ್ಯಕ್ತಿ ಮುತುಗದಕೆರೆಗೆ ಬಿದ್ದು ಸಾವು
    • ವಿದ್ಯಾರ್ಥಿಗಳು ಮೊಬೈಲ್ ಗೀಳಿನಿಂದ ಹೊರಬಂದು ಗ್ರಂಥಾಲಯಗಳತ್ತ ಗಮನಹರಿಸಿ: ಡಿಡಿಪಿಐ ರಘುಚಂದ್ರ
    • ಶಿಥಿಲಗೊಂಡ ಮಾರಮ್ಮ ದೇವಿ ದೇವಸ್ಥಾನ ಪುನರ್‌ ನಿರ್ಮಾಣಕ್ಕೆ ಒತ್ತಾಯ | ದೇವಸ್ಥಾನ ನಿರ್ಮಾಣಕ್ಕೆ ಅಡ್ಡಿ : ತಹಶೀಲ್ದಾರ್‌ ಗೆ ಗ್ರಾಮಸ್ಥರಿಂದ ಮನವಿ
    • ಕೆ.ಟಿ.ಹಳ್ಳಿ ಬಳಿ ಭೀಕರ ರಸ್ತೆ ಅಪಘಾತ: ಇಬ್ಬರು ಸಾವು
    • ದೀಪಾವಳಿ ಪಟಾಕಿ ಇಷ್ಟವೇ? ಆದ್ರೆ ನಿಯಮಗಳು ಕಷ್ಟ | ಉಲ್ಲಂಘಿಸಿದರೆ ಕಠಿಣ ಕ್ರಮ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶಿಥಿಲಗೊಂಡ ಮಾರಮ್ಮ ದೇವಿ ದೇವಸ್ಥಾನ ಪುನರ್‌ ನಿರ್ಮಾಣಕ್ಕೆ ಒತ್ತಾಯ | ದೇವಸ್ಥಾನ ನಿರ್ಮಾಣಕ್ಕೆ ಅಡ್ಡಿ : ತಹಶೀಲ್ದಾರ್‌ ಗೆ ಗ್ರಾಮಸ್ಥರಿಂದ ಮನವಿ
    ಕುಣಿಗಲ್ October 31, 2026

    ಶಿಥಿಲಗೊಂಡ ಮಾರಮ್ಮ ದೇವಿ ದೇವಸ್ಥಾನ ಪುನರ್‌ ನಿರ್ಮಾಣಕ್ಕೆ ಒತ್ತಾಯ | ದೇವಸ್ಥಾನ ನಿರ್ಮಾಣಕ್ಕೆ ಅಡ್ಡಿ : ತಹಶೀಲ್ದಾರ್‌ ಗೆ ಗ್ರಾಮಸ್ಥರಿಂದ ಮನವಿ

    By Ganesh TumkuruOctober 31, 2026No Comments1 Min Read
    maramma

    ಕುಣಿಗಲ್: ತಾಲೂಕಿನ ಕೊತ್ತಗೆರೆ ಹೋಬಳಿಯ ಮಡಿಕೆಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದಾಸನಪುರ ಗ್ರಾಮದ ಪುರಾತನ ಪ್ರಸಿದ್ಧ ಮಾರಮ್ಮ ದೇವಿ ದೇವಸ್ಥಾನವನ್ನು ಪುನರ್‌ ನಿರ್ಮಾಣ ಮಾಡಲು ಅವಕಾಶ ಕಲ್ಪಿಸಿಕೊಡುವಂತೆ ಒತ್ತಾಯಿಸಿ ನೂರಾರು ಗ್ರಾಮಸ್ಥರು ತಹಶೀಲ್ದಾರ್ ಕರಿಯ ನಾಯಕ್ ಅವರಿಗೆ ಮನವಿ ಸಲ್ಲಿಸಿದರು.

    ದಾಸನಪುರ ಗ್ರಾಮದ ಮಾರಮ್ಮ ದೇವಿ ದೇವಸ್ಥಾನವು ಹಲವು ವರ್ಷಗಳ ಇತಿಹಾಸ ಹೊಂದಿದ್ದು, ಗ್ರಾಮದ ಪೂರ್ವಿಕರು ನಿರ್ಮಿಸಿದ್ದ ಈ ದೇವಸ್ಥಾನದಲ್ಲಿ ಹಿಂದಿನಿಂದಲೂ ಜಾತ್ರೆ, ಉತ್ಸವ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರಲಾಗುತ್ತಿತ್ತು. ಆದರೆ, ದೇವಸ್ಥಾನವು ಶಿಥಿಲಗೊಂಡು ಸಂಪೂರ್ಣ ಹಾಳಾಗಿರುವ ಹಿನ್ನೆಲೆಯಲ್ಲಿ ಅದನ್ನು ತೆರವುಗೊಳಿಸಿ ಹೊಸದಾಗಿ ನಿರ್ಮಿಸಲು ಗ್ರಾಮಸ್ಥರು ಮುಂದಾಗಿದ್ದಾರೆ.

    ದೇವಸ್ಥಾನವು ಗ್ರಾಮಠಾಣ ವ್ಯಾಪ್ತಿಯಲ್ಲಿ ಬರುವುದರಿಂದ ಗ್ರಾಮಸ್ಥರೆಲ್ಲರೂ ಒಗ್ಗಟ್ಟಿನಿಂದ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯ ಕೈಗೊಳ್ಳಲು ನಿರ್ಧರಿಸಿದ್ದಾರೆ. ಆದರೆ, ಕೆಲವರು ದೇವಸ್ಥಾನ ನಿರ್ಮಾಣಕ್ಕೆ ಅಡ್ಡಿಪಡಿಸುತ್ತಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಈ ವಿಚಾರವಾಗಿ ಈಗಾಗಲೇ ಪೊಲೀಸ್ ಠಾಣೆಯ ಮೆಟ್ಟಿಲೇರಿರುವುದಾಗಿಯೂ ತಿಳಿಸಿದ್ದಾರೆ.

    ಗ್ರಾಮದ ಎಲ್ಲಾ ಜಾತಿ ಹಾಗೂ ಸಮುದಾಯಗಳ ಜನರು ಒಗ್ಗಟ್ಟಿನಿಂದ ಮಾರಮ್ಮ ದೇವಿ ದೇವಸ್ಥಾನವನ್ನು ಪುನರ್‌ನಿರ್ಮಿಸಲು ಮುಂದಾಗಿದ್ದು, ದೇವಸ್ಥಾನದ ಧಾರ್ಮಿಕ ಪರಂಪರೆಯನ್ನು ಉಳಿಸಿ ಮುಂದಿನ ಪೀಳಿಗೆಗೆ ಪರಿಚಯಿಸುವುದು ತಮ್ಮ ಉದ್ದೇಶವಾಗಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

    ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ, ದೇವಸ್ಥಾನದ ಪುನರ್‌ನಿರ್ಮಾಣಕ್ಕೆ ಎದುರಾಗಿರುವ ಸಮಸ್ಯೆಯನ್ನು ಪರಿಹರಿಸಬೇಕು. ಅಗತ್ಯ ಕ್ರಮ ಕೈಗೊಂಡು ದೇವಸ್ಥಾನ ನಿರ್ಮಾಣಕ್ಕೆ ಅವಕಾಶ ಕಲ್ಪಿಸಿಕೊಡಬೇಕು ಎಂದು ಗ್ರಾಮಸ್ಥರು ತಹಶೀಲ್ದಾರ್‌ಗೆ ಸಲ್ಲಿಸಿರುವ ಮನವಿಯಲ್ಲಿ ಒತ್ತಾಯಿಸಿದ್ದಾರೆ.

    ಈ ಸಂದರ್ಭದಲ್ಲಿ ತಾಲೂಕು ಪಂಚಾಯಿತಿ ಮಾಜಿ ಸದಸ್ಯ ರಾಜಣ್ಣ, ಬೆಟ್ಟಸ್ವಾಮಿ, ಶಿವಣ್ಣ, ವೆಂಕಟರಂಗಯ್ಯ, ರಾಮಕೃಷ್ಣ, ಹನುಮಂತಯ್ಯ, ಭಾಗ್ಯಮ್ಮ ಸೇರಿದಂತೆ ಗ್ರಾಮದ ನೂರಾರು ಜನರು ಹಾಗೂ ಮಹಿಳೆಯರು ಉಪಸ್ಥಿತರಿದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

    Ganesh Tumkuru
    • Website

    Related Posts

    ಕುಣಿಗಲ್ ನಲ್ಲಿ ವಿಜಯ ದಶಮಿ ಆಚರಣೆ: ಹರಿದು ಬಂದ ಜನ ಸಾಗರ, ಕುದುರೆ ಏರಿದ ತಹಶೀಲ್ದಾರ್

    October 22, 2026

    ಕುಣಿಗಲ್‌ ಉತ್ಸವಕ್ಕೆ ಸರ್ಕಾರದ ಹಣ ಬಳಸಿಲ್ಲ: ಜೆಡಿಎಸ್‌ ಅಧ್ಯಕ್ಷ ಬಿ.ಎನ್‌. ಜಗದೀಶ್‌ ಆರೋಪಕ್ಕೆ ಕಾಂಗ್ರೆಸ್‌ ತಿರುಗೇಟು

    October 17, 2026

    ಮುಜರಾಯಿ ದೇವಾಲಯಗಳ ಹಣ ದಸರಾಗೆ ಬೇಡ: ದಾಖಲೆ ಪ್ರದರ್ಶಿಸಿ ಒತ್ತಾಯಿಸಿದ ಜೆಡಿಎಸ್ ಅಧ್ಯಕ್ಷ ಬಿ.ಎನ್. ಜಗದೀಶ್

    October 16, 2026

    Leave A Reply Cancel Reply

    Our Picks

    ಕ್ಯಾನ್ಸರ್ ಔಷಧಗಳ ಬೆಲೆಯಲ್ಲಿ ಭಾರಿ ಇಳಿಕೆ: ಕ್ಯಾನ್ಸರ್ ರೋಗಿಗಳಿಗೆ ಬಿಗ್ ರಿಲೀಫ್

    October 29, 2026

    ಭಾರತೀಯ ಷೇರು ಮಾರುಕಟ್ಟೆಗೆ ಭಾರೀ ಹೊಡೆತ: ₹30 ಲಕ್ಷ ಕೋಟಿ ಸಂಪತ್ತು ಕರಗಲು 10 ಕಾರಣಗಳೇನು?

    October 28, 2026

    ಕ್ರೆಡಿಟ್ ಕಾರ್ಡ್ ಹೊಂದಿರುವ ಪತಿ ಮೃತಪಟ್ಟರೆ ಸಾಲವನ್ನು ಪತ್ನಿ ತೀರಿಸಬೇಕಾ? ಬ್ಯಾಂಕಿಂಗ್ ನಿಯಮಗಳೇನು?

    October 26, 2026

    PM Kisan ಹಣ ಯಾವಾಗ ಬರುತ್ತೆ? ರೈತರು ಈ ಕೆಲಸಗಳನ್ನು ಮಾಡದಿದ್ದರೆ ಕಂತು ಸ್ಥಗಿತವಾಗಬಹುದು!

    October 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಪ್ರಜಾಸೇವೆ ಆಂದೋಲನದಡಿ ಬಾಕಿ ಅರ್ಜಿಗಳ ತ್ವರಿತ ವಿಲೇವಾರಿಗೆ ಜಿಲ್ಲಾಧಿಕಾರಿ ಸೂಚನೆ

    October 31, 2026

    ತುಮಕೂರು : ಪ್ರಜಾಸೇವೆ ಆಂದೋಲನದಡಿ ಸ್ವೀಕೃತವಾಗಿರುವ ಸಾರ್ವಜನಿಕ ಕುಂದುಕೊರತೆಗಳು ಹಾಗೂ ಬಾಕಿ ಅರ್ಜಿಗಳನ್ನು ಆದ್ಯತೆಯ ಮೇರೆಗೆ ತ್ವರಿತವಾಗಿ ವಿಲೇವಾರಿ ಮಾಡುವುದರ…

    ನೀಲಿಹಳ್ಳಿ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ; ಪರ್ಯಾಯ ನೀರು ಪೂರೈಕೆಗೆ ಸೂಚನೆ

    October 31, 2026

    ಮಧುಗಿರಿ ತಾಲೂಕಿನಲ್ಲಿ ಹೈನುಗಾರರಿಗೆ ₹63 ಲಕ್ಷದ ಸೌಲಭ್ಯ ಹಾಗೂ ಪರಿಹಾರ ವಿತರಣೆ

    October 31, 2026

    ಬೆಂಗಳೂರಿನಲ್ಲಿ ಸೆಕ್ಯುರಿಟಿ ಸಿಬ್ಬಂದಿಯಾಗಿದ್ದ 55 ವರ್ಷದ ವ್ಯಕ್ತಿ ಮುತುಗದಕೆರೆಗೆ ಬಿದ್ದು ಸಾವು

    October 31, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.