ಕೊರಟಗೆರೆ : ತಾಲ್ಲೂಕಿನ ಕಾಮೇನಹಳ್ಳಿ ಗ್ರಾಮದ ಸಮೀಪದ ಮುಸುಕಿನಕಲ್ಲು ಬಳಿಯ ಮುತುಗದ ಕೆರೆಯಲ್ಲಿ ಬಿದ್ದು ಸುಮಾರು 55 ವರ್ಷದ ರಾಮಯ್ಯ ಮೃತಪಟ್ಟಿರುವ ಘಟನೆ ಗುರುವಾರ ನಡೆದಿದೆ.
ಮೃತ ರಾಮಯ್ಯ ಅವರು ಬೆಂಗಳೂರಿನ ಫ್ಯಾಕ್ಟರಿಯೊಂದರಲ್ಲಿ ಸೆಕ್ಯುರಿಟಿ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದು, ಕುಟುಂಬ ಸಮೇತರಾಗಿ ಬೆಂಗಳೂರಿನಲ್ಲಿ ವಾಸವಾಗಿದ್ದರು. ತಮ್ಮ ಸ್ವಗ್ರಾಮವಾದ ಹೊಸಹಳ್ಳಿಗೆ ಹೋಗಿ ಬರುವುದಾಗಿ ಕುಟುಂಬದವರಿಗೆ ತಿಳಿಸಿ ಬಂದಿದ್ದ ಅವರು, ಗುರುವಾರ ಬೆಳಿಗ್ಗೆ ಸುಮಾರು 11 ಗಂಟೆ ವೇಳೆಗೆ ಕೆರೆಗೆ ಹಾರಿದ್ದಾರೆ ಎನ್ನಲಾಗಿದೆ.
ಕೆರೆಯ ದಡದಲ್ಲಿ ರಾಮಯ್ಯ ಅವರ ಬಟ್ಟೆ, ಬ್ಯಾಗ್ ಹಾಗೂ ಚಪ್ಪಲಿಗಳು ಪತ್ತೆಯಾಗಿವೆ. ಇದರಿಂದ ಅನುಮಾನಗೊಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಪಿಎಸ್ ಐ ತೀರ್ಥೇಶ್, ಎಎಸ್ ಐ ಮಹೇಶ್ ಹಾಗೂ ಪ್ರಸನ್ನ ಅವರು ಅಗ್ನಿಶಾಮಕ ದಳದ ಸಿಬ್ಬಂದಿಯ ನೆರವಿನಿಂದ ಶೋಧ ಕಾರ್ಯಾಚರಣೆ ನಡೆಸಿ ಕೆರೆಯಿಂದ ಮೃತದೇಹವನ್ನು ಹೊರ ತೆಗೆದಿದ್ದಾರೆ.
ಈ ಘಟನೆಗೆ ಸಂಬಂಧಿಸಿದಂತೆ ಕೊರಟಗೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
