ಕೊರಟಗೆರೆ: ತಾಲ್ಲೂಕಿನ ಕುರಂಕೋಟೆ ಗ್ರಾಮದ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಆವರಣದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಕಲ್ಯಾಣ ಮಂಟಪದ ಕಾಮಗಾರಿಗೆ ತೋವಿನಕೆರೆ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಎನ್ಡಿಎ ಪಕ್ಷದ ಪ್ರಬಲ ಆಕಾಂಕ್ಷಿ ಮಂಜುನಾಥ್ ಕೆ. ಅವರು ಒಂದು ಲಕ್ಷ ರೂಪಾಯಿ ದೇಣಿಗೆ ನೀಡಿದ್ದಾರೆ.
ದೇವಸ್ಥಾನಕ್ಕೆ ಭೇಟಿ ನೀಡಿದ ಅವರು ಶ್ರೀ ಆಂಜನೇಯ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿಸಿದ್ದರು. ಬಳಿಕ ಕಲ್ಯಾಣ ಮಂಟಪ ನಿರ್ಮಾಣಕ್ಕಾಗಿ ಒಂದು ಲಕ್ಷ ರೂಪಾಯಿಗಳ ಚೆಕ್ ಅನ್ನು ದೇವಸ್ಥಾನದ ಸೇವಾ ಸಮಿತಿಗೆ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮಂಜುನಾಥ್ ಕೆ. ಅವರು, ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿ ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಈ ಹಿಂದೆ ನಮ್ಮ ತಂದೆ ಕಾಮರಾಜು ಅವರು ಪೂರ್ವಜರ ಹೆಸರಿನಲ್ಲಿ ಸಮುದಾಯ ಭವನ ನಿರ್ಮಿಸಿಕೊಟ್ಟಿದ್ದಾರೆ. ಇದೀಗ ದೇವಸ್ಥಾನದ ಅಭಿವೃದ್ಧಿಗೆ ನನ್ನಿಂದಾಗುವ ಅಳಿಲು ಸೇವೆ ಮಾಡುತ್ತಿದ್ದೇನೆ. ಕಲ್ಯಾಣ ಮಂಟಪ ನಿರ್ಮಾಣಕ್ಕೆ ಒಂದು ಲಕ್ಷ ರೂಪಾಯಿ ದೇಣಿಗೆ ನೀಡಿದ್ದು, ಶೀಘ್ರದಲ್ಲೇ 300 ಮೂಟೆ ಸಿಮೆಂಟ್ ಒದಗಿಸಲಾಗುವುದು. ಮುಂದಿನ ದಿನಗಳಲ್ಲಿಯೂ ಹೆಚ್ಚಿನ ಸಹಕಾರ ನೀಡುತ್ತೇನೆ ಎಂದು ತಿಳಿಸಿದರು.
ತೋವಿನಕೆರೆ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಸಮಗ್ರ ಅಭಿವೃದ್ಧಿ ಹಾಗೂ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುವುದು ನನ್ನ ಉದ್ದೇಶವಾಗಿದೆ. ಜನರೊಂದಿಗೆ ಸದಾ ಇದ್ದು, ಜನಸೇವೆಗೆ ಬದ್ಧನಾಗಿರುತ್ತೇನೆ. ಮುಂಬರುವ ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಎನ್ಡಿಎ ಪಕ್ಷದ ಪ್ರಬಲ ಆಕಾಂಕ್ಷಿಯಾಗಿದ್ದು, ಕ್ಷೇತ್ರದ ಜನರ ಸಹಕಾರ ಅಗತ್ಯವಿದೆ ಎಂದು ಮನವಿ ಮಾಡಿದರು.
ದೇವಸ್ಥಾನದ ಸೇವಾ ಸಮಿತಿಯ ಅಧ್ಯಕ್ಷರು ಹಾಗೂ ಅಭಿವೃದ್ಧಿ ಮಂಡಳಿ ಸದಸ್ಯರು ದೇಣಿಗೆಯ ಚೆಕ್ ಸ್ವೀಕರಿಸಿ, ದೇವಸ್ಥಾನದ ಅಭಿವೃದ್ಧಿಗೆ ನೀಡಿದ ಸಹಕಾರಕ್ಕಾಗಿ ಮಂಜುನಾಥ್ ಕೆ. ಅವರಿಗೆ ಕೃತಜ್ಞತೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಸ್ವಾತಂತ್ರ್ಯ ಹೋರಾಟಗಾರರಾದ ಕೆ.ವಿ.ದೊಡ್ಡನರಸಪ್ಪ, ಬಿಜೆಪಿ ತಾಲೂಕು ಯುವ ಮೋರ್ಚಾ ಅಧ್ಯಕ್ಷರಾದ ಚೇತನ್ ದಾಸರಹಳ್ಳಿ, ಹೊಳವನಹಳ್ಳಿ ಜಿಲ್ಲಾ ಪಂಚಾಯತಿ ಎನ್ ಡಿ ಎ ಪ್ರಬಲ ಅಭ್ಯರ್ಥಿ ಸಂತೋಷ ಗೌಡ, ಶಶಿ ಕುಮಾರ್ , ಫಾರೂಕ್, ವಿನಯ್ ಮತ್ತು ಶ್ರೀ ಆಂಜನೇಯ ಸ್ವಾಮಿ ಸೇವಾ ಸಮಿತಿ ಅಧ್ಯಕ್ಷರಾದ ಆರ್ ಸಿದ್ದರಾಜು, ಶಿವಣ್ಣ, ಪಾಂಡುರಂಗಯ್ಯ, ಶಿವಲಿಂಗಯ್ಯ, ಡಿ.ಸಿದ್ದರಾಜು, ದೊಡ್ಡನಂಜಯ್ಯ, ನಾಗಭೂಷಣ್ ಸೇರಿದಂತೆ ಇತರರು ಹಾಜರಿದ್ದರು.
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
