nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕದಿರಿ ದರ್ಶನ ಮುಗಿಸಿ ಮರಳುವಾಗ ಭೀಕರ ಅಪಘಾತ: ತಂದೆ–ಮಗ ಸಾವು!

    November 4, 2026

    ವಕೀಲರ ಮೇಲಿನ ದೌರ್ಜನ್ಯ ಖಂಡಿಸಿ ಕೊರಟಗೆರೆಯಲ್ಲಿ ಬೃಹತ್ ಪ್ರತಿಭಟನಾ ಜಾಥಾ: ಮಾನವ ಸರಪಳಿ ರಚಿಸಿ ಆಕ್ರೋಶ

    November 4, 2026

    ಸಿ.ಎಸ್.ಪುರದಲ್ಲಿ ನ.13ರಂದು ಮಾಜಿ ಪ್ರಧಾನಿ ದೇವೇಗೌಡರ ಕಂಚಿನ ಪುತ್ಥಳಿ ಲೋಕಾರ್ಪಣೆ

    November 4, 2026
    Facebook Twitter Instagram
    ಟ್ರೆಂಡಿಂಗ್
    • ಕದಿರಿ ದರ್ಶನ ಮುಗಿಸಿ ಮರಳುವಾಗ ಭೀಕರ ಅಪಘಾತ: ತಂದೆ–ಮಗ ಸಾವು!
    • ವಕೀಲರ ಮೇಲಿನ ದೌರ್ಜನ್ಯ ಖಂಡಿಸಿ ಕೊರಟಗೆರೆಯಲ್ಲಿ ಬೃಹತ್ ಪ್ರತಿಭಟನಾ ಜಾಥಾ: ಮಾನವ ಸರಪಳಿ ರಚಿಸಿ ಆಕ್ರೋಶ
    • ಸಿ.ಎಸ್.ಪುರದಲ್ಲಿ ನ.13ರಂದು ಮಾಜಿ ಪ್ರಧಾನಿ ದೇವೇಗೌಡರ ಕಂಚಿನ ಪುತ್ಥಳಿ ಲೋಕಾರ್ಪಣೆ
    • ಮಧುಗಿರಿಯಲ್ಲಿ ಹೊಸ ಬಾರ್‌ ಗಳಿಗೆ ಸ್ಥಳ ಪರಿಶೀಲನೆ: ಸಂಘಟನೆಗಳಿಂದ ತೀವ್ರ ವಿರೋಧ!
    • ದರ್ಶನ್ ಸಂಕಷ್ಟ ನಿವಾರಣೆಗಾಗಿ ಚೌಲಿಹಳ್ಳಿ ಕರೆಕಲ್ಲಮ್ಮ ದೇವಿಗೆ ವಿಜಯಲಕ್ಷ್ಮಿ ವಿಶೇಷ ಪೂಜೆ!
    • ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಶಿವರಾಜ್ ಎಸ್. ಭಾಜನ
    • ವಾಹನ ಸವಾರರಿಗೆ ಗುಡ್‌ ನ್ಯೂಸ್‌! ಬಾಕಿ ಟ್ರಾಫಿಕ್ ದಂಡದಲ್ಲಿ ಶೇ.50 ರಿಯಾಯಿತಿ: ಯಾವಾಗ?
    • ಬಾಯಿ ಹುಣ್ಣಿನ ನೋವಿನಿಂದ ತಿನ್ನಲೂ ಆಗುತ್ತಿಲ್ಲವೇ? ಈ ಸರಳ ಮನೆಮದ್ದುಗಳನ್ನು ಪ್ರಯತ್ನಿಸಿ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಕೀಲರ ಮೇಲಿನ ದೌರ್ಜನ್ಯ ಖಂಡಿಸಿ ಕೊರಟಗೆರೆಯಲ್ಲಿ ಬೃಹತ್ ಪ್ರತಿಭಟನಾ ಜಾಥಾ: ಮಾನವ ಸರಪಳಿ ರಚಿಸಿ ಆಕ್ರೋಶ
    ಕೊರಟಗೆರೆ November 4, 2026

    ವಕೀಲರ ಮೇಲಿನ ದೌರ್ಜನ್ಯ ಖಂಡಿಸಿ ಕೊರಟಗೆರೆಯಲ್ಲಿ ಬೃಹತ್ ಪ್ರತಿಭಟನಾ ಜಾಥಾ: ಮಾನವ ಸರಪಳಿ ರಚಿಸಿ ಆಕ್ರೋಶ

    By Ganesh TumkuruNovember 4, 2026No Comments2 Mins Read
    bar association

    ಕೊರಟಗೆರೆ: ರಾಜ್ಯದಲ್ಲಿ ವಕೀಲರ ಮೇಲೆ ನಿರಂತರವಾಗಿ ನಡೆಯುತ್ತಿರುವ ಹಲ್ಲೆ, ದೌರ್ಜನ್ಯ ಹಾಗೂ ಹತ್ಯೆ ಪ್ರಕರಣಗಳನ್ನು ಖಂಡಿಸಿ ಕೊರಟಗೆರೆ ತಾಲ್ಲೂಕು ವಕೀಲರ ಸಂಘದ ವತಿಯಿಂದ ಮಂಗಳವಾರ ಬೃಹತ್ ಪ್ರತಿಭಟನಾ ಜಾಥಾ ನಡೆಸಲಾಯಿತು.

    ಬೆಂಗಳೂರು ವಕೀಲರ ಸಂಘದ ಕರೆಯ ಮೇರೆಗೆ ರಾಜ್ಯಾದ್ಯಂತ ಹಮ್ಮಿಕೊಂಡಿದ್ದ ಪ್ರತಿಭಟನೆಯ ಭಾಗವಾಗಿ, ಕೊರಟಗೆರೆಯ ಜೆಎಂಎಫ್‌ಸಿ ನ್ಯಾಯಾಲಯದ ಆವರಣದಿಂದ ತಾಲ್ಲೂಕು ಕಚೇರಿವರೆಗೆ ವಕೀಲರು ಬ್ಯಾನರ್ ಹಿಡಿದು ಜಾಥಾ ನಡೆಸಿದರು.

    ಬಳಿಕ ತಾಲ್ಲೂಕು ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿ, ಮುಖ್ಯರಸ್ತೆಯಲ್ಲಿ ಮಾನವ ಸರಪಳಿ ನಿರ್ಮಿಸುವ ಮೂಲಕ ವಕೀಲರ ಒಗ್ಗಟ್ಟು ಪ್ರದರ್ಶಿಸಿದರು. ನಂತರ ತಹಶೀಲ್ದಾರ್ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

    ಗೌರಿಬಿದನೂರಿನ ಹಿರಿಯ ವಕೀಲ ವೆಂಕಟರಮಣ ಸಣ್ಣಕ್ಕಿ ಅವರ ಮೇಲಿನ ಕೊಲೆ ಯತ್ನ ಹಾಗೂ ಬೆಂಗಳೂರಿನ ವೈಟ್‌ ಫೀಲ್ಡ್‌ ನ ವಕೀಲ ಮಂಜುನಾಥ್ ಶ್ರೀರಾಮ್ ಮತ್ತು ಅನ್ನಪೂರ್ಣೇಶ್ವರಿ ನಗರದಲ್ಲಿ ನಡೆದ ವಕೀಲರ ಹತ್ಯೆ ಪ್ರಕರಣಗಳನ್ನು ಪ್ರತಿಭಟನಾಕಾರರು ತೀವ್ರವಾಗಿ ಖಂಡಿಸಿದರು.

    ವಕೀಲರ ಸಂಘದ ಅಧ್ಯಕ್ಷ ಎಂ.ಎಲ್. ಸಂತೋಷ್ ಮಾತನಾಡಿ, ನ್ಯಾಯಕ್ಕಾಗಿ ಹೋರಾಡುವ ವಕೀಲರಿಗೇ ರಾಜ್ಯದಲ್ಲಿ ರಕ್ಷಣೆ ಇಲ್ಲದಂತಾಗಿದೆ. ವಕೀಲರ ಮೇಲಿನ ಹಲ್ಲೆ ನ್ಯಾಯ ವ್ಯವಸ್ಥೆಯ ಮೇಲಿನ ದಾಳಿಯಾಗಿದೆ. ಸರ್ಕಾರ ಕೂಡಲೇ ವಕೀಲರ ಸುರಕ್ಷತಾ ಕಾಯ್ದೆಯನ್ನು ಬಲಪಡಿಸಿ, ವಕೀಲರಿಗೆ ಸೂಕ್ತ ಭದ್ರತೆ ಒದಗಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.

    ಹಿರಿಯ ವಕೀಲ ಟಿ. ಕೃಷ್ಣಮೂರ್ತಿ ಮಾತನಾಡಿ, ವಕೀಲ ವೃತ್ತಿ ಸಮಾಜದ ನ್ಯಾಯದ ಕಣ್ಣು ಇದ್ದಂತೆ. ವಕೀಲರನ್ನು ಬೆದರಿಸುವುದು, ಹಲ್ಲೆ ನಡೆಸುವುದರಿಂದ ನ್ಯಾಯದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ. ಗೌರಿಬಿದನೂರು ಹಾಗೂ ಬೆಂಗಳೂರಿನಲ್ಲಿ ನಡೆದ ಘಟನೆಗಳು ಇಡೀ ವಕೀಲ ಸಮುದಾಯವನ್ನು ಆತಂಕಕ್ಕೀಡು ಮಾಡಿವೆ. ಪ್ರಕರಣಗಳ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದರು.

    ವಕೀಲರ ಸಂಘದ ಮಾಜಿ ಅಧ್ಯಕ್ಷ ಬಿ.ಎಲ್. ನಾಗರಾಜು ಮಾತನಾಡಿ, ವಕೀಲರ ಮೇಲಿನ ದಾಳಿಯನ್ನು ಕೇವಲ ವ್ಯಕ್ತಿಯ ಮೇಲಿನ ದಾಳಿ ಎಂದು ಪರಿಗಣಿಸಬಾರದು. ಇದು ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಆಶಯಗಳ ಮೇಲಿನ ದಾಳಿಯಾಗಿದೆ. ಕಕ್ಷಿದಾರರ ಪರವಾಗಿ ನ್ಯಾಯಾಲಯದಲ್ಲಿ ವಾದಿಸುವ ವಕೀಲರನ್ನು ಗುರಿಯಾಗಿಸುವುದು ಸರಿಯಲ್ಲ. ಸರ್ಕಾರ ವಕೀಲರ ರಕ್ಷಣಾ ಕಾಯ್ದೆಗೆ ಅಗತ್ಯ ಬಲ ತುಂಬಬೇಕು. ಇಲ್ಲವಾದಲ್ಲಿ ರಾಜ್ಯಾದ್ಯಂತ ನ್ಯಾಯಾಲಯದ ಕಲಾಪ ಬಹಿಷ್ಕಾರ ಮುಂದುವರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

    ಪ್ರತಿಭಟನಾಕಾರರ ಪ್ರಮುಖ ಬೇಡಿಕೆಗಳು:

    * ವಕೀಲರ ಸುರಕ್ಷತಾ ಕಾಯ್ದೆಯನ್ನು ತಿದ್ದುಪಡಿ ಮೂಲಕ ಬಲಪಡಿಸಬೇಕು.

    * ವಕೀಲರ ಮೇಲೆ ಹಲ್ಲೆ ನಡೆಸುವವರಿಗೆ ಕಠಿಣ ಶಿಕ್ಷೆ ವಿಧಿಸಬೇಕು.

    * ನ್ಯಾಯಾಲಯದ ಆವರಣ ಸೇರಿದಂತೆ ವಕೀಲರಿಗೆ ಅಗತ್ಯ ಭದ್ರತೆ ಕಲ್ಪಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ ಎಂದು ಹೇಳಿದರು.

    ಪ್ರತಿಭಟನೆಯಲ್ಲಿ ಸಂಘದ ಉಪಾಧ್ಯಕ್ಷ ಎಸ್.ಎನ್. ಹನುಮಂತರಾಜು, ಕಾರ್ಯದರ್ಶಿ ಎಂ.ಎಚ್. ಮಂಜುನಾಥ್, ಜಂಟಿ ಕಾರ್ಯದರ್ಶಿ ಡಿ.ಕೆ. ಕೃಷ್ಣ, ಡಿ.ಜಿ. ತಿಮ್ಮರಾಜು, ಜಿ.ಎಂ. ಕೃಷ್ಣಮೂರ್ತಿ, ಮಧುಸೂಧನ್, ಕೆ.ಜೆ. ನಾಗರಾಜ್, ಸಂತೋಷ್ ಲಕ್ಷ್ಮಿ, ಶಿಲ್ಪಾ, ಕೆಂಪರಾಜು, ಮಂಜುಳ, ಮನು, ಕೃಷ್ಣಮೂರ್ತಿ, ನಾಗೇಂದ್ರಪ್ಪ, ಅನಿಲ್, ಮಲ್ಲಿಕಾರ್ಜುನಯ್ಯ, ಪುಟ್ಟರಾಜು, ಹರೀಶ್, ಶಿವರಾಮಯ್ಯ ಸೇರಿದಂತೆ ಹಿರಿಯ ಹಾಗೂ ಕಿರಿಯ ವಕೀಲರು ಭಾಗವಹಿಸಿದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

    Ganesh Tumkuru
    • Website

    Related Posts

    ರಾಜಗೋಪುರ ನಿರ್ಮಾಣಕ್ಕೆ ಎಂ.ಎನ್.ಜೆ. ಮಂಜುನಾಥ್‌ ರಿಂದ 5 ಲಕ್ಷ ರೂ. ದೇಣಿಗೆ |  2 ಕೋಟಿ ರೂ. ವೆಚ್ಚದ ಕಾಮಗಾರಿ ಶೇ.75ರಷ್ಟು ಪೂರ್ಣ

    October 31, 2026

    ಕುರಂಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ನೂತನ ಕಲ್ಯಾಣ ಮಂಟಪ ನಿರ್ಮಾಣಕ್ಕೆ ₹1 ಲಕ್ಷ ದೇಣಿಗೆ

    October 31, 2026

    ಬೆಂಗಳೂರಿನಲ್ಲಿ ಸೆಕ್ಯುರಿಟಿ ಸಿಬ್ಬಂದಿಯಾಗಿದ್ದ 55 ವರ್ಷದ ವ್ಯಕ್ತಿ ಮುತುಗದಕೆರೆಗೆ ಬಿದ್ದು ಸಾವು

    October 31, 2026

    Leave A Reply Cancel Reply

    Our Picks

    ವೈವಿಧ್ಯತೆಯಲ್ಲಿ ಏಕತೆ ಸಾರುವ ದಿನವಿದು; ಅಕ್ಟೋಬರ್ 31ರಂದು ಏಕೆ ರಾಷ್ಟ್ರೀಯ ಏಕತಾ ದಿನ ಆಚರಿಸುತ್ತಾರೆ?

    October 31, 2026

    ವಂಚನೆಗೆ ಹಣ ಕಳೆದುಕೊಂಡವರಿಗೆ ಬ್ಯಾಂಕ್‌ ಗಳೇ ಪರಿಹಾರ ನೀಡಬೇಕಾ? ಸುಪ್ರೀಂ ಕೋರ್ಟ್ ಮಹತ್ವದ ಪ್ರಸ್ತಾಪ ಇಲ್ಲಿದೆ

    October 31, 2026

    ಕ್ಯಾನ್ಸರ್ ಔಷಧಗಳ ಬೆಲೆಯಲ್ಲಿ ಭಾರಿ ಇಳಿಕೆ: ಕ್ಯಾನ್ಸರ್ ರೋಗಿಗಳಿಗೆ ಬಿಗ್ ರಿಲೀಫ್

    October 29, 2026

    ಭಾರತೀಯ ಷೇರು ಮಾರುಕಟ್ಟೆಗೆ ಭಾರೀ ಹೊಡೆತ: ₹30 ಲಕ್ಷ ಕೋಟಿ ಸಂಪತ್ತು ಕರಗಲು 10 ಕಾರಣಗಳೇನು?

    October 28, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಪಾವಗಡ

    ಕದಿರಿ ದರ್ಶನ ಮುಗಿಸಿ ಮರಳುವಾಗ ಭೀಕರ ಅಪಘಾತ: ತಂದೆ–ಮಗ ಸಾವು!

    November 4, 2026

    ಪಾವಗಡ : ಆಂಧ್ರಪ್ರದೇಶದ ಕದಿರಿ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ದೇವಾಲಯದ ದರ್ಶನ ಮುಗಿಸಿ ಸ್ವಗ್ರಾಮಕ್ಕೆ ಮರಳುತ್ತಿದ್ದ ವೇಳೆ ಸಂಭವಿಸಿದ ಭೀಕರ…

    ವಕೀಲರ ಮೇಲಿನ ದೌರ್ಜನ್ಯ ಖಂಡಿಸಿ ಕೊರಟಗೆರೆಯಲ್ಲಿ ಬೃಹತ್ ಪ್ರತಿಭಟನಾ ಜಾಥಾ: ಮಾನವ ಸರಪಳಿ ರಚಿಸಿ ಆಕ್ರೋಶ

    November 4, 2026

    ಸಿ.ಎಸ್.ಪುರದಲ್ಲಿ ನ.13ರಂದು ಮಾಜಿ ಪ್ರಧಾನಿ ದೇವೇಗೌಡರ ಕಂಚಿನ ಪುತ್ಥಳಿ ಲೋಕಾರ್ಪಣೆ

    November 4, 2026

    ಮಧುಗಿರಿಯಲ್ಲಿ ಹೊಸ ಬಾರ್‌ ಗಳಿಗೆ ಸ್ಥಳ ಪರಿಶೀಲನೆ: ಸಂಘಟನೆಗಳಿಂದ ತೀವ್ರ ವಿರೋಧ!

    November 4, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.