nammatumakuru

    Subscribe to Updates

    Get the latest creative news from FooBar about art, design and business.

    What's Hot

    ವಿಶೇಷ ಚೇತನರಿಗೆ ಸಮಾಜದಲ್ಲಿ ಮೊದಲ ಆದ್ಯತೆ ನೀಡಬೇಕು: ಶಾಸಕ ಸಿ.ಬಿ.ಸುರೇಶ್‌ ಬಾಬು

    November 5, 2026

    ಪಾವಗಡ: ಒಂದು ಟನ್‌  ಕಬ್ಬಿಗೆ ₹5,500 ನಿಗದಿಗೆ ಆಗ್ರಹಿಸಿ ರೈತರ ಪ್ರತಿಭಟನೆ

    November 5, 2026

    ವಾರ್ತಾ ಇಲಾಖೆ ಆದೇಶದಿಂದ ಪತ್ರಿಕೆಗಳ ಅಸ್ತಿತ್ವಕ್ಕೆ ಧಕ್ಕೆ :  ಆದೇಶ ಹಿಂಪಡೆಯುವಂತೆ ಸಂಪಾದಕರ ಸಂಘದಿಂದ ಮುಖ್ಯಮಂತ್ರಿಗಳಿಗೆ ಮನವಿ

    November 5, 2026
    Facebook Twitter Instagram
    ಟ್ರೆಂಡಿಂಗ್
    • ವಿಶೇಷ ಚೇತನರಿಗೆ ಸಮಾಜದಲ್ಲಿ ಮೊದಲ ಆದ್ಯತೆ ನೀಡಬೇಕು: ಶಾಸಕ ಸಿ.ಬಿ.ಸುರೇಶ್‌ ಬಾಬು
    • ಪಾವಗಡ: ಒಂದು ಟನ್‌  ಕಬ್ಬಿಗೆ ₹5,500 ನಿಗದಿಗೆ ಆಗ್ರಹಿಸಿ ರೈತರ ಪ್ರತಿಭಟನೆ
    • ವಾರ್ತಾ ಇಲಾಖೆ ಆದೇಶದಿಂದ ಪತ್ರಿಕೆಗಳ ಅಸ್ತಿತ್ವಕ್ಕೆ ಧಕ್ಕೆ :  ಆದೇಶ ಹಿಂಪಡೆಯುವಂತೆ ಸಂಪಾದಕರ ಸಂಘದಿಂದ ಮುಖ್ಯಮಂತ್ರಿಗಳಿಗೆ ಮನವಿ
    • ರೇಷ್ಮೆ ಸೀರೆಗೆ ಎಣ್ಣೆ, ಮೇಣದ ಕಲೆ ಬಿದ್ದರೆ ಚಿಂತೆ ಬೇಡ; ಈ ಟಿಪ್ಸ್ ಅನುಸರಿಸಿ
    • ನಾಯಿಗಳಲ್ಲ, ರೋಬೋಟ್‌ ಗಳಿಗೆ ವಾಕಿಂಗ್ ಮಾಡಿಸಿದರೆ ದುಡ್ಡು! AI ತಂತ್ರಜ್ಞಾನಕ್ಕೆ ಹೊಸ ಪ್ರಯೋಗ
    • ವಿಮಾನದಲ್ಲೂ ಇರುತ್ತಾ ಹಾರ್ನ್? ಆಕಾಶದಲ್ಲಿ ಯಾರಿಗೆ ಹಾರ್ನ್? | ಈ ಅಚ್ಚರಿಯ ಸಂಗತಿ ನಿಮಗೆ ಗೊತ್ತಾ?
    • ಫ್ರಿಜ್‌ ನಿಂದ ತೆಗೆದ ತಕ್ಷಣ ಮೊಸರು ತಿನ್ನುತ್ತೀರಾ? ಆರೋಗ್ಯದ ಮೇಲೆ ಏನು ಪರಿಣಾಮ ಬೀರುತ್ತದೆ?
    • ನ.7ರಂದು ಹೊಳವನಹಳ್ಳಿ ಹೋಬಳಿಯಲ್ಲಿ ಪ್ರಜಾಸೇವೆ ಆಂದೋಲನ ಸಭೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪಾವಗಡ: ಒಂದು ಟನ್‌  ಕಬ್ಬಿಗೆ ₹5,500 ನಿಗದಿಗೆ ಆಗ್ರಹಿಸಿ ರೈತರ ಪ್ರತಿಭಟನೆ
    ಪಾವಗಡ November 5, 2026

    ಪಾವಗಡ: ಒಂದು ಟನ್‌  ಕಬ್ಬಿಗೆ ₹5,500 ನಿಗದಿಗೆ ಆಗ್ರಹಿಸಿ ರೈತರ ಪ್ರತಿಭಟನೆ

    By Ganesh TumkuruNovember 5, 2026No Comments2 Mins Read
    protest

    ಪಾವಗಡ: ಕಬ್ಬು ಬೆಳೆಗಾರರು ಬೆಳೆದ ಬೆಳೆಗೆ ಪ್ರತಿ ಟನ್‌ಗೆ ₹5,500 ಬೆಲೆ ನಿಗದಿಪಡಿಸಬೇಕು ಹಾಗೂ ರೈತರ ವಿವಿಧ ಸಮಸ್ಯೆಗಳಿಗೆ ತಕ್ಷಣ ಪರಿಹಾರ ಕಲ್ಪಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು.

    ಈ ವೇಳೆ ರೈತರು ಕೆಲಕಾಲ ರಸ್ತೆ ತಡೆ ನಡೆಸಿ, ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

    ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ರೈತ ಸಂಘದ ತುಮಕೂರು ಜಿಲ್ಲಾಧ್ಯಕ್ಷ ಪೂಜಾರಪ್ಪ, ಕಬ್ಬು ಬೆಳೆಗಾರರಿಗೆ ಸಮರ್ಪಕ ಬೆಲೆ ನಿಗದಿಪಡಿಸುವಲ್ಲಿ ಸರ್ಕಾರ ನಿರ್ಲಕ್ಷ್ಯ ವಹಿಸುತ್ತಿದೆ. ಇದರಿಂದ ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಮತ್ತೊಂದೆಡೆ ಬರ ಪರಿಸ್ಥಿತಿ ತೀವ್ರಗೊಂಡಿದ್ದು, ಕಬ್ಬಿನ ಬೆಳೆ ನಾಶವಾಗುತ್ತಿರುವುದರಿಂದ ರೈತರ ಬದುಕು ಮತ್ತಷ್ಟು ದುಸ್ತರವಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು.

    ಬೆಳಗಾವಿ, ಧಾರವಾಡ, ವಿಜಯಪುರ, ಬಾಗಲಕೋಟೆ, ಹಾವೇರಿ ಹಾಗೂ ಮೈಸೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಬ್ಬು ಬೆಳೆಗಾರರ ಹೋರಾಟ ತೀವ್ರಗೊಂಡಿದೆ. ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಕೇವಲ ಭರವಸೆ ನೀಡದೆ, ಕೂಡಲೇ ಕಬ್ಬಿಗೆ ಎಸ್‌ಎಪಿ (ರಾಜ್ಯ ಸಲಹಾ ಬೆಲೆ) ಘೋಷಿಸಬೇಕು. ಸಕ್ಕರೆಯ ಕನಿಷ್ಠ ಮಾರಾಟ ದರ ಹೆಚ್ಚಿಸಬೇಕು. ಕಬ್ಬಿನ ತೂಕ ಮತ್ತು ಸಕ್ಕರೆ ಇಳುವರಿ ಲೆಕ್ಕಾಚಾರದಲ್ಲಿ ರೈತರಿಗೆ ಆಗುತ್ತಿರುವ ಅನ್ಯಾಯವನ್ನು ತಡೆಯಬೇಕು. ಬಾಕಿ ಹಣವನ್ನು ತಕ್ಷಣ ಪಾವತಿಸಬೇಕು ಎಂದು ಒತ್ತಾಯಿಸಿದರು.

    ಇದರೊಂದಿಗೆ ರೈತರಿಗೆ ಸಮರ್ಪಕ ಕುಡಿಯುವ ನೀರು ಒದಗಿಸಬೇಕು. ಹಗಲಿನ ವೇಳೆಯಲ್ಲಿ ಕನಿಷ್ಠ 10 ಗಂಟೆಗಳ ಕಾಲ ನಿರಂತರ ವಿದ್ಯುತ್ ಪೂರೈಸಬೇಕು. ರೈತರ ಸಾಲ ವಸೂಲಾತಿಗೆ ಬ್ಯಾಂಕುಗಳು ಬಲವಂತದ ಕ್ರಮ ಕೈಗೊಳ್ಳದಂತೆ ಸರ್ಕಾರ ಸೂಕ್ತ ನಿರ್ದೇಶನ ನೀಡಬೇಕು ಎಂದು ಆಗ್ರಹಿಸಿದರು.

    ತಾಲೂಕು ಕಚೇರಿಯ ಮುಖ್ಯ ದ್ವಾರವನ್ನು ಮುಚ್ಚಿರುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಮುಂದಿನ ದಿನಗಳಲ್ಲಿ ಇಂತಹ ಕ್ರಮಗಳಿಂದ ಸಾರ್ವಜನಿಕರಿಗೆ ತೊಂದರೆಯಾಗದಂತೆ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು ಎಂದು ಒತ್ತಾಯಿಸಿದರು.

    ರೈತ ಮುಖಂಡೆ ಗುಲ್ಜಾರ್ ಮಾತನಾಡಿ, ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಕೂಡಲೇ ಎಚ್ಚೆತ್ತುಕೊಂಡು ರೈತರ ಸಂಕಷ್ಟಗಳಿಗೆ ಸ್ಪಂದಿಸಬೇಕು. ಅಗತ್ಯ ಮೂಲಸೌಕರ್ಯ ಹಾಗೂ ಪರಿಹಾರ ಕ್ರಮಗಳನ್ನು ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ಎಚ್ಚರಿಸಿದರು.

    ಪ್ರತಿಭಟನೆಯಲ್ಲಿ.ತಾಲೂಕು ರೈತ ಸಂಘದ ಅಧ್ಯಕ್ಷ ಶಿವು, ಟಿ.ಎನ್. ಬೆಟ್ಟದ ಕೃಷ್ಣಮೂರ್ತಿ, ದುರುಗಪ್ಪ, ನಾರಾಯಣ ನಾಯ್ಕ, ಗೋಪಾಲ್, ಶಂಕರಪ್ಪ, ಎಚ್. ಮರ್ಜನ್, ದೇವನಾಥಪ್ಪ, ರಾಜಣ್ಣ, ಸಿದ್ದಪ್ಪ, ನಡುಪನ್ನ, ಗುಡುಪಲ್ಲಪ್ಪ ಸೇರಿದಂತೆ ರೈತ ಸಂಘದ ಪದಾಧಿಕಾರಿಗಳು ಹಾಗೂ ರೈತರು ಭಾಗವಹಿಸಿದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

    Ganesh Tumkuru
    • Website

    Related Posts

    ಕದಿರಿ ದರ್ಶನ ಮುಗಿಸಿ ಮರಳುವಾಗ ಭೀಕರ ಅಪಘಾತ: ತಂದೆ–ಮಗ ಸಾವು!

    November 4, 2026

    ಕೆ.ಟಿ.ಹಳ್ಳಿ ಬಳಿ ಭೀಕರ ರಸ್ತೆ ಅಪಘಾತ: ಇಬ್ಬರು ಸಾವು

    October 31, 2026

    ಮಳೆ ಕೊರತೆ: ಪಾವಗಡಕ್ಕೆ ಜಿಲ್ಲಾಧಿಕಾರಿ ಭೇಟಿ

    October 29, 2026

    Leave A Reply Cancel Reply

    Our Picks

    ವೈವಿಧ್ಯತೆಯಲ್ಲಿ ಏಕತೆ ಸಾರುವ ದಿನವಿದು; ಅಕ್ಟೋಬರ್ 31ರಂದು ಏಕೆ ರಾಷ್ಟ್ರೀಯ ಏಕತಾ ದಿನ ಆಚರಿಸುತ್ತಾರೆ?

    October 31, 2026

    ವಂಚನೆಗೆ ಹಣ ಕಳೆದುಕೊಂಡವರಿಗೆ ಬ್ಯಾಂಕ್‌ ಗಳೇ ಪರಿಹಾರ ನೀಡಬೇಕಾ? ಸುಪ್ರೀಂ ಕೋರ್ಟ್ ಮಹತ್ವದ ಪ್ರಸ್ತಾಪ ಇಲ್ಲಿದೆ

    October 31, 2026

    ಕ್ಯಾನ್ಸರ್ ಔಷಧಗಳ ಬೆಲೆಯಲ್ಲಿ ಭಾರಿ ಇಳಿಕೆ: ಕ್ಯಾನ್ಸರ್ ರೋಗಿಗಳಿಗೆ ಬಿಗ್ ರಿಲೀಫ್

    October 29, 2026

    ಭಾರತೀಯ ಷೇರು ಮಾರುಕಟ್ಟೆಗೆ ಭಾರೀ ಹೊಡೆತ: ₹30 ಲಕ್ಷ ಕೋಟಿ ಸಂಪತ್ತು ಕರಗಲು 10 ಕಾರಣಗಳೇನು?

    October 28, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಚಿಕ್ಕನಾಯಕನಹಳ್ಳಿ

    ವಿಶೇಷ ಚೇತನರಿಗೆ ಸಮಾಜದಲ್ಲಿ ಮೊದಲ ಆದ್ಯತೆ ನೀಡಬೇಕು: ಶಾಸಕ ಸಿ.ಬಿ.ಸುರೇಶ್‌ ಬಾಬು

    November 5, 2026

    ಚಿಕ್ಕನಾಯಕನಹಳ್ಳಿ : ಸಮಾಜದಲ್ಲಿ ವಿಶೇಷ ಚೇತನರನ್ನು ಎಲ್ಲರಂತೆ ಗೌರವದಿಂದ ಕಾಣಬೇಕು. ಅವರ ಅಗತ್ಯಗಳಿಗೆ ಸ್ಪಂದಿಸುವುದರ ಜೊತೆಗೆ ಪ್ರತಿಯೊಂದು ಕ್ಷೇತ್ರದಲ್ಲೂ ಅವರಿಗೆ…

    ಪಾವಗಡ: ಒಂದು ಟನ್‌  ಕಬ್ಬಿಗೆ ₹5,500 ನಿಗದಿಗೆ ಆಗ್ರಹಿಸಿ ರೈತರ ಪ್ರತಿಭಟನೆ

    November 5, 2026

    ವಾರ್ತಾ ಇಲಾಖೆ ಆದೇಶದಿಂದ ಪತ್ರಿಕೆಗಳ ಅಸ್ತಿತ್ವಕ್ಕೆ ಧಕ್ಕೆ :  ಆದೇಶ ಹಿಂಪಡೆಯುವಂತೆ ಸಂಪಾದಕರ ಸಂಘದಿಂದ ಮುಖ್ಯಮಂತ್ರಿಗಳಿಗೆ ಮನವಿ

    November 5, 2026

    ರೇಷ್ಮೆ ಸೀರೆಗೆ ಎಣ್ಣೆ, ಮೇಣದ ಕಲೆ ಬಿದ್ದರೆ ಚಿಂತೆ ಬೇಡ; ಈ ಟಿಪ್ಸ್ ಅನುಸರಿಸಿ

    November 4, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.