ಶ್ರವಣೂರು: ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಶ್ರವಣೂರಲ್ಲಿ ಸುದೀರ್ಘ ಕಾಲ ಶಿಕ್ಷಕರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಮುಖ್ಯ ಶಿಕ್ಷಕ ಜೆ. ಕೃಷ್ಣಪ್ಪ ಅವರ ನಿವೃತ್ತಿ ಹಾಗೂ ಬೀಳ್ಕೊಡುಗೆ ಸಮಾರಂಭವನ್ನು ಶಾಲಾ ಆವರಣದಲ್ಲಿ ಅತ್ಯಂತ ಗೌರವಪೂರ್ವಕವಾಗಿ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕ್ಷೇತ್ರ ಶಿಕ್ಷಣಾಧಿಕಾರಿಯಾದ ಜಿ.ಎನ್.ಸೋಮಲಿಂಗೇಗೌಡ ಅವರು ಮಾತನಾಡಿ, “ಶಿಕ್ಷಕ ವೃತ್ತಿ ಎಂಬುದು ಕೇವಲ ಉದ್ಯೋಗವಲ್ಲ, ಅದು ಸಮಾಜವನ್ನು ಕಟ್ಟುವ ಪವಿತ್ರ ಜವಾಬ್ದಾರಿ ಎಂದರು.
ಕೃಷ್ಣಪ್ಪ ಜೆ. ಅವರು ತಮ್ಮ ಸುದೀರ್ಘ ಸೇವಾವಧಿಯಲ್ಲಿ ಎಲ್ಲಾ ಭಾಷೆ ಮತ್ತು ಸಾಹಿತ್ಯದ ಸವಿಯನ್ನು ವಿದ್ಯಾರ್ಥಿಗಳಿಗೆ ಉಣಬಡಿಸುವುದರ ಜೊತೆಗೆ, ಸಾವಿರಾರು ಗ್ರಾಮೀಣ ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸಿದ್ದಾರೆ. ಅವರ ನಿವೃತ್ತಿ ಕೇವಲ ಸರ್ಕಾರಿ ಸೇವೆಗಷ್ಟೇ ವಿನಃ ಅವರ ಜ್ಞಾನ ಮತ್ತು ಅನುಭವಕ್ಕಲ್ಲ,” ಎಂದು ಶ್ಲಾಘಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಲಾ ಎಲ್ಲಾ ಶಿಕ್ಷಕರ ಶಿಸ್ತು, ಕರ್ತವ್ಯ ನಿಷ್ಠೆ ಮತ್ತು ವಿದ್ಯಾರ್ಥಿ ಸ್ನೇಹಿ ವ್ಯಕ್ತಿತ್ವವನ್ನು ನೆನಪಿಸಿಕೊಂಡು ಶುಭ ಹಾರೈಸಿದರು.
ಇದೇ ಸಂದರ್ಭದಲ್ಲಿ ನಿವೃತ್ತ ಶಿಕ್ಷಕ ಕೃಷ್ಣಪ್ಪ ಜೆ. ಅವರನ್ನು ಶಾಲಾ ಆಡಳಿತ ಮಂಡಳಿ, ಸಹೋದ್ಯೋಗಿ ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ಪರವಾಗಿ ಶಾಲು ಹೊದಿಸಿ, ಫಲಪುಷ್ಪ ಹಾಗೂ ನೆನಪಿನ ಕಾಣಿಕೆ ನೀಡಿ ಅದ್ಧೂರಿಯಾಗಿ ಸನ್ಮಾನಿಸಲಾಯಿತು.
ವರದಿ: ಮಂಜು, ಶ್ರವಣೂರು, ಹೊಳೆನರಸೀಪುರ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
