ತುಮಕೂರು ನಗರದ ಪ್ರತಿಷ್ಠಿತ ‘ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ವೃತ್ತ’ದ ಮರುನಾಮಕರಣ ಅಥವಾ ಹೆಸರು ಬದಲಾವಣೆ ಕುರಿತು ಹಬ್ಬಿರುವ ಊಹಾಪೋಹಗಳಿಗೆ ಜಿಲ್ಲಾಡಳಿತ ಅಧಿಕೃತವಾಗಿ ತೆರೆ ಎಳೆದಿದೆ.
ವೃತ್ತದಲ್ಲಿ ನಡೆಯುತ್ತಿರುವ ಕಾಮಗಾರಿಯು ಕೇವಲ ಸೌಂದರ್ಯೀಕರಣಕ್ಕೆ ಸಂಬಂಧಿಸಿದ್ದಾಗಿದ್ದು, ಹೆಸರಿನಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಜಿಲ್ಲಾಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ವೃತ್ತದ ಹೆಸರನ್ನು ಬದಲಾಯಿಸುವ ಅಥವಾ ಬೇರೆ ಹೆಸರಿನಿಂದ ಮರುನಾಮಕರಣ ಮಾಡುವ ಯಾವುದೇ ಉದ್ದೇಶ ಜಿಲ್ಲಾಡಳಿತಕ್ಕಿಲ್ಲ.
ತುಮಕೂರು ಮಹಾನಗರ ಪಾಲಿಕೆ ಹಾಗೂ ತುಮಕೂರು ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಸದರಿ ವೃತ್ತದಲ್ಲಿ Outdoor L.E.D Display Board ಅಳವಡಿಸುವ ಕಾಮಗಾರಿ ಮಾತ್ರ ಕೈಗೊಳ್ಳಲಾಗಿದೆ.
ಈ ಕಾಮಗಾರಿಯ ಏಕೈಕ ಉದ್ದೇಶ ವೃತ್ತದ ಸೌಂದರ್ಯ ಹಾಗೂ ಮೆರುಗನ್ನು ಹೆಚ್ಚಿಸುವುದೇ ವಿನಃ, ಬೇರೆ ಯಾವುದೇ ಬದಲಾವಣೆಗಳಿಲ್ಲ ಎಂದು ಜಿಲ್ಲಾಧಿಕಾರಿಗಳ ಕಚೇರಿಯಿಂದ ಸ್ಪಷ್ಟಪಡಿಸಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
