ಕರ್ನಾಟಕ ಸರ್ಕಾರವು ಅರಣ್ಯ ಇಲಾಖೆಯಲ್ಲಿ ಮಹತ್ವದ ಆಡಳಿತಾತ್ಮಕ ಬದಲಾವಣೆ ಮಾಡಿದ್ದು, ಹಲವು ಐಎಫ್ಎಸ್ (ಭಾರತೀಯ ಅರಣ್ಯ ಸೇವೆ) ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ವಿವಿಧ ಜಿಲ್ಲೆಗಳ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಸೇರಿದಂತೆ ಹಲವು ಅಧಿಕಾರಿಗಳಿಗೆ ಹೊಸ ಜವಾಬ್ದಾರಿ ವಹಿಸಲಾಗಿದೆ.ಶಿವಮೊಗ್ಗ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಯಾಗಿದ್ದ ಪ್ರಸನ್ನ ಕೃಷ್ಣ ಪಟಗಾರ ಅವರನ್ನು ಮಡಿಕೇರಿಯ ಸಂಶೋಧನಾ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.
ನಾಗರಹೊಳೆ ರಾಷ್ಟ್ರೀಯ ಉದ್ಯಾನದ ನಿರ್ದೇಶಕರಾಗಿದ್ದ ಪಿ.ಎ. ಸೀಮಾ ಅವರನ್ನು ತುಮಕೂರು ಉಪ ಅರಣ್ಯ ಸಂರಕ್ಷಣಾಧಿಕಾರಿಯಾಗಿ ನೇಮಿಸಲಾಗಿದೆ. ಬಿಳಿಗಿರಿರಂಗನಬೆಟ್ಟ ಹುಲಿ ಧಾಮದ ಉಪ ಅರಣ್ಯ ಸಂರಕ್ಷಣಾಧಿಕಾರಿಯಾಗಿದ್ದ ಹಾಗೂ ಸದ್ಯ ಹುದ್ದೆ ನಿರೀಕ್ಷೆಯಲ್ಲಿದ್ದ ಬಿ.ಎಸ್. ಶ್ರೀಪತಿ ಅವರಿಗೆ ಚಿಕ್ಕಮಗಳೂರು ಕಾರ್ಯಯೋಜನೆ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಹುದ್ದೆ ನೀಡಲಾಗಿದೆ.
ಹುದ್ದೆ ನಿರೀಕ್ಷೆಯಲ್ಲಿದ್ದ ಎನ್. ರಮೇಶ್ ಬಾಬು ಅವರನ್ನು ಬೆಂಗಳೂರಿನ ಬಜೆಟ್ ಮತ್ತು ಆಡಿಟ್ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಯಾಗಿ ನೇಮಕ ಮಾಡಲಾಗಿದೆ. ಹಾಸನ ಉಪ ಅರಣ್ಯ ಸಂರಕ್ಷಣಾಧಿಕಾರಿಯಾಗಿದ್ದ ಸೌರಭ್ ಕುಮಾರ್ ಅವರನ್ನು ನಾಗರಹೊಳೆ ಹುಲಿ ಯೋಜನೆಯ ನಿರ್ದೇಶಕರನ್ನಾಗಿ ವರ್ಗಾವಣೆ ಮಾಡಲಾಗಿದೆ.
ಚಿತ್ರದುರ್ಗ ಸಾಮಾಜಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಯಾಗಿದ್ದ ಕೆ. ಹರೀಶ್ ಅವರನ್ನು ಹಾಸನ ಉಪ ಅರಣ್ಯ ಸಂರಕ್ಷಣಾಧಿಕಾರಿಯಾಗಿ ನೇಮಿಸಲಾಗಿದೆ. ಶಿವಮೊಗ್ಗದ ಕೆಎಫ್ಡಿಸಿ ವಿಭಾಗೀಯ ವ್ಯವಸ್ಥಾಪಕರಾಗಿದ್ದ ಎನ್.ಎಸ್. ರಾಘವೇಂದ್ರ ರಾವ್ ಅವರಿಗೆ ಶಿವಮೊಗ್ಗ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಜವಾಬ್ದಾರಿ ನೀಡಲಾಗಿದೆ.
ಮಡಿಕೇರಿ ವಿಚಕ್ಷಣಾ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಯಾಗಿದ್ದ ಕೆ.ಪಿ. ಗೋಪಾಲ್ ಅವರನ್ನು ಮಡಿಕೇರಿ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಯಾಗಿ ನೇಮಿಸಲಾಗಿದೆ. ಕೊಪ್ಪಳ ಜಿಲ್ಲೆಯ ಮುನಿರಾಬಾದ್ ನ ತುಂಗಭದ್ರಾ ಕಾಡಾ ಉಪ ಆಡಳಿತಾಧಿಕಾರಿಯಾಗಿದ್ದ ಎಂ.ಸಿ. ಭಾಗ್ಯಲಕ್ಷ್ಮಿ ಅವರನ್ನು ಶಿವಮೊಗ್ಗದ ಕೆಎಫ್ ಡಿಸಿ ಪ್ರಾದೇಶಿಕ ವ್ಯವಸ್ಥಾಪಕರನ್ನಾಗಿ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
