ಕೊರಟಗೆರೆ: ತಾಲ್ಲೂಕಿನ ಬೂದಗವಿ ಕ್ಲಸ್ಟರ್ ವ್ಯಾಪ್ತಿಯ ಬೆಂಡೋಣೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಸಂಭ್ರಮದಿಂದ ಆಯೋಜಿಸಲಾಗಿತ್ತು.
ಕಾರ್ಯಕ್ರಮದ ಪ್ರಾಸ್ತಾವಿಕವಾಗಿ ಮಾತನಾಡಿದ ಬೂದಗವಿ ಕ್ಲಸ್ಟರ್ ನ ಸಿಆರ್ ಪಿ ರಂಗರಾಜು ಅವರು, ಮಹಾತ್ಮ ಗಾಂಧೀಜಿಯವರು ಬಾಲ್ಯದಲ್ಲಿ ವೀಕ್ಷಿಸಿದ ‘ಸತ್ಯ ಹರಿಶ್ಚಂದ್ರ’ ನಾಟಕದಿಂದ ಪ್ರೇರಣೆ ಪಡೆದು ಸತ್ಯ ಮತ್ತು ಪ್ರಾಮಾಣಿಕತೆಯ ಹಾದಿಯಲ್ಲಿ ಮುನ್ನಡೆದರು. ಅದೇ ರೀತಿ ವಿದ್ಯಾರ್ಥಿಗಳು ಕೇವಲ ಪಠ್ಯ ಚಟುವಟಿಕೆಗಳಿಗೆ ಸೀಮಿತವಾಗದೆ, ಸಹಪಠ್ಯ ಚಟುವಟಿಕೆಗಳಲ್ಲಿಯೂ ಸಕ್ರಿಯವಾಗಿ ಭಾಗವಹಿಸಬೇಕು. ಶಾಲಾ ಹಂತದಲ್ಲಿ ದೊರೆಯುವ ಪ್ರತಿಭಾ ವೇದಿಕೆ ಹಾಗೂ ಅವಕಾಶಗಳನ್ನು ಸಮರ್ಪಕವಾಗಿ ಬಳಸಿಕೊಂಡು ತಮ್ಮಲ್ಲಿರುವ ಪ್ರತಿಭೆಯನ್ನು ಹೊರತರುವ ಪ್ರಯತ್ನ ಮಾಡಬೇಕು ಎಂದು ಕರೆ ನೀಡಿದರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಉಪಾಧ್ಯಕ್ಷ ಪರಮೇಶ್ ಮಾತನಾಡಿ, ಪ್ರತಿಯೊಬ್ಬ ವಿದ್ಯಾರ್ಥಿಯಲ್ಲೂ ಒಂದಲ್ಲ ಒಂದು ಪ್ರತಿಭೆ ಅಡಗಿರುತ್ತದೆ. ಮಕ್ಕಳು ಯಾವುದೇ ಹಿಂಜರಿಕೆಯಿಲ್ಲದೆ, ನಿರ್ಭಯವಾಗಿ ವೇದಿಕೆಯ ಮೇಲೆ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಬೇಕು. ಇಂತಹ ಕಾರ್ಯಕ್ರಮಗಳು ಮಕ್ಕಳ ಆತ್ಮವಿಶ್ವಾಸ ಮತ್ತು ಸೃಜನಶೀಲತೆಯನ್ನು ಹೆಚ್ಚಿಸಲು ಸಹಕಾರಿಯಾಗುತ್ತವೆ ಎಂದು ತಿಳಿಸಿದರು.
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
