ಚಿಕ್ಕನಾಯಕನಹಳ್ಳಿ: ಗ್ರಾಮೀಣ ಪ್ರದೇಶದ ಪ್ರತಿಭೆಯೊಂದು ಚೆಸ್ ಕ್ರೀಡೆಯಲ್ಲಿ ರಾಜ್ಯಮಟ್ಟದಲ್ಲಿ ಸಾಧನೆ ಮಾಡಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗುವ ಮೂಲಕ ತಾಲ್ಲೂಕು ಹಾಗೂ ಜಿಲ್ಲೆಗೆ ಕೀರ್ತಿ ತಂದಿದೆ.
ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಹಂದನಕೆರೆ ಹೋಬಳಿಯ ಮಾದಾಪುರ ಗ್ರಾಮದ ತಾರಾ ನಾಗರಾಜು ದಂಪತಿಯ ಪುತ್ರ ಯದುನಂದನ್ ಜಿ.ಎನ್. (20) ಅವರು ತುಮಕೂರಿನಲ್ಲಿ ನಡೆದ ರಾಜ್ಯ ಮಟ್ಟದ ಚೆಸ್ ಚಾಂಪಿಯನ್ ಶಿಪ್ನಲ್ಲಿ ವಿಜೇತರಾಗಿ ರಾಷ್ಟ್ರ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಯದುನಂದನ್ ಅವರು ಬೆಂಗಳೂರಿನ ಕೆ.ಎಸ್. ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಬಿ.ಇ. ವ್ಯಾಸಂಗ ಮಾಡುತ್ತಿದ್ದಾರೆ. ರೈತಾಪಿ ಕುಟುಂಬದಲ್ಲಿ ಜನಿಸಿದ ಇವರು ತಮ್ಮ ಪರಿಶ್ರಮ, ಆಸಕ್ತಿ ಹಾಗೂ ನಿರಂತರ ಅಭ್ಯಾಸದ ಮೂಲಕ ಚೆಸ್ ಕ್ರೀಡೆಯಲ್ಲಿ ಗಮನಾರ್ಹ ಸಾಧನೆ ಮಾಡಿದ್ದಾರೆ.
ಗ್ರಾಮೀಣ ಹಿನ್ನೆಲೆಯಿಂದ ಬಂದ ಯುವಕನೊಬ್ಬ ರಾಜ್ಯ ಮಟ್ಟದಲ್ಲಿ ತನ್ನ ಪ್ರತಿಭೆಯನ್ನು ಸಾಬೀತುಪಡಿಸಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿರುವುದು ಮಾದಾಪುರ ಗ್ರಾಮ ಸೇರಿದಂತೆ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಜನರಲ್ಲಿ ಸಂತಸ ಮೂಡಿಸಿದೆ. ಯದುನಂದನ್ ಅವರ ಸಾಧನೆ ಗ್ರಾಮೀಣ ಭಾಗದ ಇತರ ಯುವ ಪ್ರತಿಭೆಗಳಿಗೂ ಪ್ರೇರಣೆಯಾಗಿದೆ.
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
